ನಾಗೇಂದ್ರ ರಾಜೀನಾಮೆ ಕೂಡಲೇ ಅಂಗೀಕರಿಸಿ: ಪ್ರಹ್ಲಾದ್ ಜೋಶಿ
ಹುಬ್ಬಳ್ಳಿ, 28 ಆಗಸ್ಟ್ (ಹಿ.ಸ.): ಆ್ಯಂಕರ್:ಮಾಜಿ ಸಚಿವ ಬಿ. ನಾಗೇಂದ್ರ ಅವರ ರಾಜೀನಾಮೆಯನ್ನು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಕೂಡಲೇ ಅಂಗೀಕರಿಸಬೇಕು ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಆಗ್ರಹಿಸಿದ್ದಾರೆ. ರಾಜೀನಾಮೆ ಅಂಗೀಕರಿಸುವಲ್ಲಿ ವಿಳಂಬ ಮಾಡಿದರೆ ಬಿಜೆಪಿ ಮತ್ತೆ ಹೋರಾಟ ನಡೆಸುವುದು
ಪ್ರಹ್ಲಾದ ಜೋಶಿ ಸಂಗ್ರಹ ಚಿತ್ರ


ಹುಬ್ಬಳ್ಳಿ, 28 ಆಗಸ್ಟ್ (ಹಿ.ಸ.):

ಆ್ಯಂಕರ್:ಮಾಜಿ ಸಚಿವ ಬಿ. ನಾಗೇಂದ್ರ ಅವರ ರಾಜೀನಾಮೆಯನ್ನು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಕೂಡಲೇ ಅಂಗೀಕರಿಸಬೇಕು ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಆಗ್ರಹಿಸಿದ್ದಾರೆ. ರಾಜೀನಾಮೆ ಅಂಗೀಕರಿಸುವಲ್ಲಿ ವಿಳಂಬ ಮಾಡಿದರೆ ಬಿಜೆಪಿ ಮತ್ತೆ ಹೋರಾಟ ನಡೆಸುವುದು ಅನಿವಾರ್ಯವಾಗಲಿದೆ ಎಂದು ಎಚ್ಚರಿಸಿದ್ದಾರೆ.

ಹುಬ್ಬಳ್ಳಿಯಲ್ಲಿ ಶುಕ್ರವಾರ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷ ಭ್ರಷ್ಟಾಚಾರದಲ್ಲಿ ಮುಳುಗಿದೆ ಎಂದು ಆರೋಪಿಸಿದರು. ರಾಜ್ಯ ಸರ್ಕಾರವನ್ನು ಕಾಂಗ್ರೆಸ್ ಹೈಕಮಾಂಡ್ ಎಟಿಎಂ ಮಾಡಿಕೊಂಡಿದೆ. ಇದರ ಪರಿಣಾಮವಾಗಿ ಬಿ. ನಾಗೇಂದ್ರ ಅವರನ್ನು ಮತ್ತೊಮ್ಮೆ ಸಚಿವರನ್ನಾಗಿ ಮಾಡಲಾಗಿತ್ತು ಎಂದು ದೂರಿದರು.

ವಾಲ್ಮೀಕಿ ಅಭಿವೃದ್ಧಿ ನಿಗಮದ ಅಕ್ರಮಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ನಾಗೇಂದ್ರ ಅವರ ಹೆಸರು ಡೆತ್ ನೋಟ್‌ನಲ್ಲಿ ಉಲ್ಲೇಖವಾಗಿತ್ತು. ಅವರ ವಿರುದ್ಧ ಆರೋಪಪಟ್ಟಿಯೂ ಸಲ್ಲಿಕೆಯಾಗಿತ್ತು. ಆದರೂ ಅವರಿಗೆ ಮತ್ತೊಮ್ಮೆ ಸಚಿವ ಸ್ಥಾನ ನೀಡಲಾಗಿದೆ ಎಂದು ಜೋಶಿ ಆರೋಪಿಸಿದರು.

ಈ ಪ್ರಕರಣದಲ್ಲಿ ಸಿಬಿಐ ತನಿಖೆ ನಡೆಸುವಂತೆ ರಾಜ್ಯಪಾಲರಿಗೆ ಬಿಜೆಪಿ ವತಿಯಿಂದ ಪತ್ರ ಬರೆಯಲಾಗಿತ್ತು. ಬಿಜೆಪಿ ಮತ್ತು ಜೆಡಿಎಸ್ ಸಂಘಟಿತ ಹೋರಾಟಕ್ಕೆ ಮಣಿದು ನಾಗೇಂದ್ರ ರಾಜೀನಾಮೆ ನೀಡಿದ್ದಾರೆ ಎಂದು ಅವರು ಹೇಳಿದರು.

ನಾಗೇಂದ್ರ ಅವರ ರಾಜೀನಾಮೆಯನ್ನು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಯಾವುದೇ ವಿಳಂಬವಿಲ್ಲದೆ ಅಂಗೀಕರಿಸಬೇಕು. ಇಲ್ಲದಿದ್ದರೆ ಬಿಜೆಪಿ ವತಿಯಿಂದ ಮತ್ತೊಮ್ಮೆ ಹೋರಾಟ ನಡೆಸಲಾಗುವುದು ಎಂದು ಪ್ರಹ್ಲಾದ್ ಜೋಶಿ ಎಚ್ಚರಿಸಿದರು.

---------------

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande