
ಬೆಂಗಳೂರು, 28 ಆಗಸ್ಟ್ (ಹಿ.ಸ.):
ಆ್ಯಂಕರ್:
ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದ ಸಹೋದರಿಯರು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಅವರ ಅಧಿಕೃತ ಗೃಹ ಕಚೇರಿ 'ಕೃಷ್ಣಾ'ದಲ್ಲಿ ಶುಕ್ರವಾರ ಭೇಟಿಯಾಗಿ ನೂಲು ಹುಣ್ಣಿಮೆ ಹಾಗೂ ರಕ್ಷಾ ಬಂಧನ ಹಬ್ಬದ ಶುಭಾಶಯಗಳನ್ನು ಕೋರಿದರು.
ನೂಲು ಹುಣ್ಣಿಮೆ ಮತ್ತು ರಕ್ಷಾ ಬಂಧನದ ಹಬ್ಬದ ಪ್ರಯುಕ್ತ ಉಪಮುಖ್ಯಮಂತ್ರಿಗೆ ರಾಖಿ ಕಟ್ಟಿ, ಆಧ್ಯಾತ್ಮಿಕ ಶುಭ ಹಾರೈಕೆಗಳನ್ನು ವಿನಿಮಯ ಮಾಡಿಕೊಳ್ಳಲಾಯಿತು. ಈ ಸಂದರ್ಭದಲ್ಲಿ ಬ್ರಹ್ಮಕುಮಾರಿ ಸಂಸ್ಥೆಯ ವತಿಯಿಂದ ಡಿ.ಕೆ. ಶಿವಕುಮಾರ್ ಅವರಿಗೆ ವಿಶೇಷ ನೆನಪಿನ ಕಾಣಿಕೆ ಹಾಗೂ ಈಶ್ವರೀಯ ಸಂದೇಶವನ್ನು ನೀಡಲಾಯಿತು.
ಸಮಾಜದಲ್ಲಿ ಶಾಂತಿ, ಸೌಹಾರ್ದತೆ ಮತ್ತು ಮೌಲ್ಯಗಳ ಸ್ಥಾಪನೆಗಾಗಿ ಬ್ರಹ್ಮಕುಮಾರಿ ಸಂಸ್ಥೆಯು ಮಾಡುತ್ತಿರುವ ಸೇವೆಯನ್ನು ಈ ಭೇಟಿಯ ವೇಳೆ ಸ್ಮರಿಸಲಾಯಿತು.
---------------
ಹಿಂದೂಸ್ತಾನ್ ಸಮಾಚಾರ್ / BHARGAVI G R