
ಕೋಲಾರ, 28 ಆಗಸ್ಟ್ (ಹಿ.ಸ):
ಆ್ಯಂಕರ್: ಕೆರೆಗಳನ್ನು ಸಂರಕ್ಷಿಸಿ ಅವುಗಳನ್ನು ಶುದ್ಧವಾಗಿ ಇಟ್ಟುಕೊಳ್ಳುವುದು ನಮ್ಮೆಲ್ಲರ ಕರ್ತವ್ಯವಾಗಿದೆ. ಕೆರೆಗಳು ಕಲುಷಿತಗೊಳ್ಳದಂತೆ ನೋಡುಕೊಳ್ಳಬೇಕೆಂದು ಜಿಲ್ಲಾಧಿಕಾರಿಗಳಾದ ಎಂ.ಆರ್ ರವಿಕುಮಾರ್ ತಿಳಿಸಿದರು.
ಜಿಲ್ಲಾ ಮಟ್ಟದ ಕೆರೆಗಳ ಸಂರಕ್ಷಣೆ ಕುರಿತು ರಚಿಸಲಾದ ಅಪೆಕ್ಸ್ ಸಮಿತಿ ಸಭೆಯಲ್ಲಿ ಮಾತನಾಡಿದರು.
ಜಿಲ್ಲೆಯಲ್ಲಿ ಸುಮಾರು ೩೨೩೨ ಕೆರೆಗಳಿದ್ದು, ಅವುಗಳ ಒತ್ತುವರಿ ತೆರವು ಕಾರ್ಯಕೈಗೊಳ್ಳಲಾಗುತ್ತಿದೆ. ಕಾರ್ಖಾನೆಗಳಿಂದ ಬರುವ ತ್ಯಾಜ್ಯ, ಹೊಣೆ ಮುಂತಾದವುಗಳಿಂದ ಕೆರೆಗಳು ಕಲುಷಿತಗೊಳ್ಳುವ ಸಾಧ್ಯತೆ ಹೆಚ್ಚಾಗಿರುತ್ತದೆ. ಅಲ್ಲದೆ ಕೆರೆಗಳಲ್ಲಿನ ನೀರಿನ ಗುಣಮಟ್ಟ ಸಹ ನಾವು ಪರೀಕ್ಷಿಸಬೇಕೆಂದರು.
ನಂತರ ಸಂಬಂಧಪಟ್ಟ ಅಧಿಕಾರಿಗಳು ಕೆಲ ಕೆರೆಗಳಿಗೆ ಒಳಚರಂಡಿ ನೀರು ಸೇರಿ ಕಲುಷಿತಗೊಂಡಿರುವುದಾಗಿ ತಿಳಿಸಿದರು. ನಂತರ ಜಿಲ್ಲಾಧಿಕಾರಿಗಳು ಅವಶ್ಯವಿರುವಲ್ಲಿ ಕೆರೆಗಳಿಗೆ ಫೆನ್ಸಿಂಗ್ ಕಲ್ಪಿಸಬೇಕು. ನೀರು ಕಲುಷಿತಗೊಳ್ಳದಂತೆ ಕ್ರಮ ವಹಿಸಬೇಕೆಂದು ನಿರ್ದೇಶನ ನೀಡಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ರಮೇಶ್, ಜಿಲ್ಲೆಯ ತಹಶೀಲ್ದಾರ್ಗಳು, ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
ಹಿಂದೂಸ್ತಾನ್ ಸಮಾಚಾರ್ / ಎಸ್.ಚಂದ್ರಶೇಖರ್