ಪೊಲೀಸರಿಗೆ ಸಮಗ್ರ ಸಾಮರ್ಥ್ಯ ವೃದ್ಧಿ ತರಬೇತಿಗೆ ಚಾಲನೆ
ಬೆಂಗಳೂರು, 28 ಆಗಸ್ಟ್ (ಹಿ.ಸ.): ಆ್ಯಂಕರ್: ಕರ್ನಾಟಕ ರಾಜ್ಯ ಪೊಲೀಸರಿಗಾಗಿ ಆಯೋಜಿಸಿರುವ ಸಮಗ್ರ ಸಾಮರ್ಥ್ಯ ವೃದ್ಧಿ ತರಬೇತಿ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಶುಕ್ರವಾರ ಬೆಂಗಳೂರಿನ ಮಾಣಿಕ್ ಶಾ ಮೈದಾನದಲ್ಲಿ ಚಾಲನೆ ನೀಡಿದರು. ಕಾರ್ಯಕ್ರಮದಲ್ಲಿ ಗೃಹ ಸಚಿವ ಪ್ರಿಯಾಂಕ್ ಖರ್ಗ
ಕಾರ್ಯಕ್ರಮದಲ್ಲಿ ಭಾಗವಹಿಸಿದ ಮುಖ್ಯಮಂತ್ರಿ


ಬೆಂಗಳೂರು, 28 ಆಗಸ್ಟ್ (ಹಿ.ಸ.):

ಆ್ಯಂಕರ್:

ಕರ್ನಾಟಕ ರಾಜ್ಯ ಪೊಲೀಸರಿಗಾಗಿ ಆಯೋಜಿಸಿರುವ ಸಮಗ್ರ ಸಾಮರ್ಥ್ಯ ವೃದ್ಧಿ ತರಬೇತಿ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಶುಕ್ರವಾರ ಬೆಂಗಳೂರಿನ ಮಾಣಿಕ್ ಶಾ ಮೈದಾನದಲ್ಲಿ ಚಾಲನೆ ನೀಡಿದರು.

ಕಾರ್ಯಕ್ರಮದಲ್ಲಿ ಗೃಹ ಸಚಿವ ಪ್ರಿಯಾಂಕ್ ಖರ್ಗೆ, ಶಾಸಕ ಹಾಗೂ ಬಿಡಿಎ ಅಧ್ಯಕ್ಷ ಹ್ಯಾರಿಸ್, ರಾಷ್ಟ್ರೀಯ ಭದ್ರತಾ ಪಡೆಯ ಮಹಾನಿರ್ದೇಶಕ ಭೃಗು ಶ್ರೀನಿವಾಸನ್, ಪೊಲೀಸ್ ಮಹಾನಿರ್ದೇಶಕ ಹಾಗೂ ಮಹಾ ನಿರೀಕ್ಷಕ ಎಂ.ಎ. ಸಲೀಂ, ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಎಂ. ಚಂದ್ರಶೇಖರ್, ಕಾರ್ಯಾಚರಣೆ ವಿಭಾಗದ ಐಜಿಪಿ ವಿಕಾಸ್ ಕುಮಾರ್ ವಿಕಾಸ್ ಸೇರಿದಂತೆ ಹಿರಿಯ ಪೊಲೀಸ್ ಅಧಿಕಾರಿಗಳು ಉಪಸ್ಥಿತರಿದ್ದರು.

ನಂತರ ಅಹಿತಕರ ಘಟನೆಗಳು ಹಾಗೂ ಭಯೋತ್ಪಾದಕ ದಾಳಿಯ ಸಂದರ್ಭದಲ್ಲಿ ತುರ್ತು ಸ್ಪಂದನಾ ಪಡೆಯ ಕಾರ್ಯವೈಖರಿಯನ್ನು ಪ್ರದರ್ಶಿಸಿದ ಅಣಕು ಕಾರ್ಯಾಚರಣೆಯನ್ನು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ವೀಕ್ಷಿಸಿದರು.

---------------

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande