
ಮೈಸೂರು, 28 ಆಗಸ್ಟ್ (ಹಿ.ಸ.):
ಆ್ಯಂಕರ್:ನಾಡಹಬ್ಬ ಮೈಸೂರು ದಸರಾ ಜಂಬೂ ಸವಾರಿಯಲ್ಲಿ ಪಾಲ್ಗೊಳ್ಳಲಿರುವ 9 ದಸರಾ ಆನೆಗಳನ್ನು ಶುಕ್ರವಾರ ಸಾಂಪ್ರದಾಯಿಕ ಪೂಜೆ ಸಲ್ಲಿಸಿ ಅರಮನೆಗೆ ಬರಮಾಡಿಕೊಳ್ಳಲಾಯಿತು.
ಆಗಸ್ಟ್ 26ರಂದು ಗಜಪಯಣದ ಮೂಲಕ ಮೈಸೂರಿಗೆ ಆಗಮಿಸಿದ್ದ ಗಜಪಡೆ ಎರಡು ದಿನ ಅಶೋಕಪುರಂನ ಅರಣ್ಯ ಭವನದಲ್ಲಿ ವಾಸ್ತವ್ಯ ಹೂಡಿತ್ತು. ಶುಕ್ರವಾರ ಬೆಳಗ್ಗೆ ಅರಣ್ಯ ಇಲಾಖೆಯಿಂದ ಪೂಜೆ ಸಲ್ಲಿಸಿದ ಬಳಿಕ ಪೊಲೀಸ್ ಹಾಗೂ ಅರಣ್ಯ ಇಲಾಖೆ ಭದ್ರತೆಯಲ್ಲಿ ಆನೆಗಳನ್ನು ಅರಮನೆಗೆ ಕರೆತರಲಾಯಿತು.
ಜಯಮಾರ್ತಾಂಡ ದ್ವಾರದ ಬಳಿ ಅರಮನೆ ಆಡಳಿತ ಮಂಡಳಿಯಿಂದ ಗಜಪಡೆಗೆ ಪುಷ್ಪಾರ್ಚನೆ ಮೂಲಕ ಸ್ವಾಗತ ಕೋರಲಾಯಿತು. ಅರಣ್ಯ ಸಚಿವ ರಾಮಲಿಂಗಾ ರೆಡ್ಡಿ, ಯತೀಂದ್ರ ಸಿದ್ದರಾಮಯ್ಯ ಸೇರಿದಂತೆ ಅಧಿಕಾರಿಗಳು ಉಪಸ್ಥಿತರಿದ್ದರು. ವಿವಿಧ ಕಲಾ ತಂಡಗಳು ಗಜಪಡೆಯನ್ನು ಸ್ವಾಗತಿಸಿದವು.
ಅಂಬಾರಿ ಹೊರುವ ಆನೆಯ ಆಯ್ಕೆಯನ್ನು ತಾಲೀಮು ಪೂರ್ಣಗೊಂಡ ಬಳಿಕ ಅಂತಿಮಗೊಳಿಸಲಾಗುವುದು ಎಂದು ಸಚಿವ ರಾಮಲಿಂಗಾ ರೆಡ್ಡಿ ತಿಳಿಸಿದರು.
---------------
ಹಿಂದೂಸ್ತಾನ್ ಸಮಾಚಾರ್ / Rakesh.M.B.