
ಹಾಸನ, 28 ಆಗಸ್ಟ್ (ಹಿ.ಸ.):
ಆ್ಯಂಕರ್:ಹಾಸನ ನಗರದ ನಂದಿನಿ ಬಡಾವಣೆ, ಶರಾವತಿ ಬಡಾವಣೆ, ಎಸ್‌ಬಿಎಂ ಕಾಲೋನಿ ಸೇರಿದಂತೆ ವಿವಿಧ ಬಡಾವಣೆಗಳಲ್ಲಿ ಪ್ರಗತಿಯಲ್ಲಿರುವ ರಸ್ತೆ, ಚರಂಡಿ ಹಾಗೂ ಇತರ ಕಾಮಗಾರಿಗಳನ್ನು ಶಾಸಕ ಸ್ವರೂಪ್ ಪ್ರಕಾಶ್ ಶುಕ್ರವಾರ ವೀಕ್ಷಿಸಿದರು.
ಸಾರ್ವಜನಿಕರ ಅನುಕೂಲಕ್ಕಾಗಿ ಕೈಗೊಳ್ಳಲಾಗುತ್ತಿರುವ ಕಾಮಗಾರಿಗಳು ಗುಣಮಟ್ಟದಿಂದ ಕೂಡಿರಬೇಕು ಎಂಬ ಉದ್ದೇಶದಿಂದ ಸ್ಥಳಕ್ಕೆ ಭೇಟಿ ನೀಡಿ ಕಾಮಗಾರಿಗಳ ಪ್ರಗತಿ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದರು.
ಕೆಲವು ಕಾಮಗಾರಿಗಳಿಗೆ ಜಾಗದ ವಿಚಾರವಾಗಿ ಸ್ಥಳೀಯರು ಅಡ್ಡಿಪಡಿಸುತ್ತಿರುವ ಮಾಹಿತಿ ಹಿನ್ನೆಲೆಯಲ್ಲಿ ನಗರಾಭಿವೃದ್ಧಿ ಪ್ರಾಧಿಕಾರದ ಅಧಿಕಾರಿಗಳೊಂದಿಗೆ ಸ್ಥಳಕ್ಕೆ ಭೇಟಿ ನೀಡಿದ ಶಾಸಕರು, ಜಾಗದ ಮಾಲೀಕರ ಮನವೊಲಿಸಿ ಅವರ ಒಪ್ಪಿಗೆಯೊಂದಿಗೆ ಕಾಮಗಾರಿಗಳನ್ನು ಶೀಘ್ರ ಪೂರ್ಣಗೊಳಿಸಿ ಸಾರ್ವಜನಿಕರ ಬಳಕೆಗೆ ಮುಕ್ತಗೊಳಿಸುವಂತೆ ಗುತ್ತಿಗೆದಾರರು ಹಾಗೂ ಅಧಿಕಾರಿಗಳಿಗೆ ಸೂಚಿಸಿದರು.
---------------
ಹಿಂದೂಸ್ತಾನ್ ಸಮಾಚಾರ್ / Rakesh.M.B.