ಲಡ್ಡು ಮುತ್ಯಾರ ದರ್ಶನ ಪಡೆದ ಶಾಸಕ ಉಮೇಶ ಮೇಟಿ
ಬಾಗಲಕೋಟೆ, 28 ಆಗಸ್ಟ್ (ಹಿ.ಸ.) ಆ್ಯಂಕರ್ : ಬಾಗಲಕೋಟೆ ಸಮೀಪದ ಗದ್ದನಕೇರಿ ಕ್ರಾಸ್ನಲ್ಲಿರುವ ಪ್ರಸಿದ್ಧ ಶ್ರೀ ಲಡ್ಡು ಮುತ್ಯಾರ ದೇವಸ್ಥಾನಕ್ಕೆ ಬಾಗಲಕೋಟೆ ಶಾಸಕ ಉಮೇಶ ಮೇಟಿ ಭೇಟಿ ನೀಡಿ, ಶ್ರೀ ಲಡ್ಡು ಮುತ್ಯಾರ ದೇವರ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು. ದೇವಸ್ಥಾನಕ್ಕೆ ಆಗಮಿಸಿದ ಶಾಸಕ ಉಮೇಶ ಮೇ
ಮಠ


ಬಾಗಲಕೋಟೆ, 28 ಆಗಸ್ಟ್ (ಹಿ.ಸ.)

ಆ್ಯಂಕರ್ : ಬಾಗಲಕೋಟೆ ಸಮೀಪದ ಗದ್ದನಕೇರಿ ಕ್ರಾಸ್ನಲ್ಲಿರುವ ಪ್ರಸಿದ್ಧ ಶ್ರೀ ಲಡ್ಡು ಮುತ್ಯಾರ ದೇವಸ್ಥಾನಕ್ಕೆ ಬಾಗಲಕೋಟೆ ಶಾಸಕ ಉಮೇಶ ಮೇಟಿ ಭೇಟಿ ನೀಡಿ, ಶ್ರೀ ಲಡ್ಡು ಮುತ್ಯಾರ ದೇವರ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು.

ದೇವಸ್ಥಾನಕ್ಕೆ ಆಗಮಿಸಿದ ಶಾಸಕ ಉಮೇಶ ಮೇಟಿ ಅವರನ್ನು ದೇವಸ್ಥಾನದ ಆಡಳಿತ ಮಂಡಳಿ ಹಾಗೂ ಭಕ್ತರು ಆತ್ಮೀಯವಾಗಿ ಸ್ವಾಗತಿಸಿದರು. ಬಳಿಕ ದೇವಸ್ಥಾನ ಪ್ರವೇಶಿಸಿದ ಅವರು ಲಡ್ಡು ಮುತ್ಯಾರ ಸನ್ನಿಧಿಯಲ್ಲಿ ಭಕ್ತಿಭಾವದಿಂದ ಪೂಜೆ ಸಲ್ಲಿಸಿ, ದೇವರ ದರ್ಶನ ಪಡೆದು ನಾಡಿನ ಜನತೆಗೆ ಸುಖ, ಶಾಂತಿ, ಸಮೃದ್ಧಿ ಹಾಗೂ ಉತ್ತಮ ಮಳೆ-ಬೆಳೆ ಕರುಣಿಸುವಂತೆ ಪ್ರಾರ್ಥಿಸಿದರು.

ಈ ಸಂದರ್ಭದಲ್ಲಿ ದೇವಸ್ಥಾನದ ಧಾರ್ಮಿಕ ಪರಂಪರೆ, ವಿಶೇಷ ಪೂಜಾ ಕಾರ್ಯಕ್ರಮಗಳು ಹಾಗೂ ಭಕ್ತರಿಗೆ ಕಲ್ಪಿಸಲಾಗುತ್ತಿರುವ ಸೌಲಭ್ಯಗಳ ಕುರಿತು ದೇವಸ್ಥಾನದ ಆಡಳಿತ ಮಂಡಳಿಯವರೊಂದಿಗೆ ಶಾಸಕ ಉಮೇಶ ಮೇಟಿ ಅವರು ಮಾಹಿತಿ ಪಡೆದುಕೊಂಡರು.

ದೇವಸ್ಥಾನಕ್ಕೆ ಆಗಮಿಸುವ ಭಕ್ತರಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಅಗತ್ಯ ಮೂಲಸೌಕರ್ಯ ಹಾಗೂ ಸೌಲಭ್ಯಗಳನ್ನು ಕಲ್ಪಿಸುವ ಕುರಿತು ಕೂಡ ಚರ್ಚೆ ನಡೆಯಿತು.

ಗದ್ದನಕೇರಿ ಕ್ರಾಸ್ನ ಶ್ರೀ ಲಡ್ಡು ಮುತ್ಯಾರ ದೇವಸ್ಥಾನವು ಈ ಭಾಗದ ಜನರ ಧಾರ್ಮಿಕ ನಂಬಿಕೆ ಹಾಗೂ ಭಕ್ತಿಯ ಪ್ರಮುಖ ಕೇಂದ್ರವಾಗಿದ್ದು, ವಿವಿಧ ಗ್ರಾಮಗಳಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ದೇವಸ್ಥಾನಕ್ಕೆ ಆಗಮಿಸಿ ದೇವರ ದರ್ಶನ ಪಡೆಯುತ್ತಾರೆ. ಶಾಸಕ ಉಮೇಶ ಮೇಟಿ ಅವರ ದೇವಸ್ಥಾನ ಭೇಟಿ ಸಂದರ್ಭದಲ್ಲಿ ಭಕ್ತರು ಹಾಗೂ ಸ್ಥಳೀಯರು ಅವರನ್ನು ಆತ್ಮೀಯವಾಗಿ ಬರಮಾಡಿಕೊಂಡರು.

ಈ ಸಂದರ್ಭದಲ್ಲಿ ದೇವಸ್ಥಾನದ ಆಡಳಿತ ಮಂಡಳಿ ಸದಸ್ಯರು, ಸ್ಥಳೀಯ ಮುಖಂಡರು, ಭಕ್ತರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

---------------

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande