
ಬೆಂಗಳೂರು, 29 ಆಗಸ್ಟ್ (ಹಿ.ಸ.):
ಆ್ಯಂಕರ್:
ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಶನಿವಾರ ನಡೆದ ಮಾಜಿ ಮುಖ್ಯಮಂತ್ರಿ ದಿವಂಗತ ರಾಮಕೃಷ್ಣ ಹೆಗಡೆ ಅವರ ಜನ್ಮ ಶತಮಾನೋತ್ಸವ ಸಮಾರಂಭವನ್ನು ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಅವರೊಂದಿಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಉದ್ಘಾಟಿಸಿದರು.
ಸಮಾರಂಭದಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ನಿಕಟಪೂರ್ವ ಮುಖ್ಯಮಂತ್ರಿ ಸಿದ್ದರಾಮಯ್ಯ, ಮಾಜಿ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು, ಸಚಿವ ಬಸವರಾಜ ರಾಯರೆಡ್ಡಿ, ಶಾಸಕ ಹಾಗೂ ಜನ್ಮ ಶತಮಾನೋತ್ಸವ ಸಮಿತಿ ಅಧ್ಯಕ್ಷ ಆರ್.ವಿ. ದೇಶಪಾಂಡೆ, ಮಾಜಿ ಸಂಸದ ಬಿ.ಎಲ್. ಶಂಕರ್, ರಾಮಕೃಷ್ಣ ಹೆಗಡೆ ಅವರ ಪುತ್ರಿ ಹಾಗೂ ರಾಷ್ಟ್ರೀಯ ನವನಿರ್ಮಾಣ ವೇದಿಕೆಯ ಅಧ್ಯಕ್ಷೆ ಮಮತಾ ನಿಚಾನಿ, ಡಾ. ಎಂ.ಪಿ. ನಾಡಗೌಡ, ಟಿ. ಪ್ರಭಾಕರ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.
---------------
ಹಿಂದೂಸ್ತಾನ್ ಸಮಾಚಾರ್ / Rakesh.M.B.