
ಬಳ್ಳಾರಿ, 29 ಆಗಸ್ಟ್ (ಹಿ.ಸ.)
ಆ್ಯಂಕರ್ : ಶ್ರೀ ರಾಘವೇಂದ್ರ ಸ್ವಾಮಿ ಗುರುಸಾರ್ವಭೌಮರ 355ನೇ ಆರಾಧನಾ ಮಹೋತ್ಸವವನ್ನು ಜಗದ್ಗುರು ಶ್ರೀ ಮನ್ಮಧ್ವಾಚಾರ್ಯರ
ಮೂಲ ಮಹಾ ಸಂಸ್ಥಾನಾಧೀಶ್ವರರಾದ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳವರ ಮಠದ ವೇದಾಂತ ದಿಗ್ವಿಜಯ ವಿದ್ಯಾ ಸಿಂಹಾಸನಾಧೀಶ್ವರರಾದ ಸುಯತೀಂದ್ರ ತೀರ್ಥ ಶ್ರೀಪಾದಂಗಳವರ ಕರಕಮಲ ಸಂಜಾತರು, ಮಂತ್ರಾಲಯ ಪೀಠಾಧಿಪತಿಗಳಾದ ಪರಮಪೂಜ್ಯ ಶ್ರೀ 1008 ಶ್ರೀ ಶ್ರೀ ಡಾ. ಸುಬುಧೇಂದ್ರ ತೀರ್ಥ ಶ್ರೀಪಾದಂಗಳವರ ಆಜ್ಞಾನುಸಾರ ಪರಾಭವನಾಮ ಸಂವತ್ಸರದ ಶ್ರಾವಣ ಬಹುಳ ಪ್ರತಿಪದ ಪ್ರಥಮ ದಿನದ ಶ್ರೀ ರಾಘವೇಂದ್ರ ಸಾರ್ವಭೌಮರ ಆರಾಧನೆಯು ಭಕ್ತಿ ಮತ್ತು ಶ್ರದ್ಧೆಯಿಂದ ಶನಿವಾರ ಆರಂಭಿಸಲಾಯಿತು.
ಬಳ್ಳಾರಿಯ ಸತ್ಯನಾರಾಯಣ ಪೇಟೆಯ ರಾಯರ ಮಠದ ಅಡಳಿತಾಧಿಕಾರಿಗಳು ಮಾಹಿತಿ ನೀಡಿದ್ದು, ಆಗಸ್ಟ್ 29, 30 ಮತ್ತು 31ರ ಶನಿವಾರ, ಭಾನುವಾರ, ಸೋಮವಾರ ಶ್ರೀ ಹರಿವಾಯು ಗುರುಗಳ ಪ್ರೇರಣಾನುಸಾರ ಶ್ರೀ ಸತ್ಯನಾರಾಯಣ ಪೇಟೆಯ 1ನೇ ಅಡ್ಡರಸ್ತೆಯಲ್ಲಿ ಇರುವ ಜಗದ್ಗುರು ಶ್ರೀಮನ್ಮಧ್ವಾಚಾರ್ಯ ಮೂಲ ಮಹಾಸಂಸ್ಥಾನ ನಂಜನಗೂಡು ಶ್ರೀ ರಾಘವೇಂದ್ರಸ್ವಾಮಿಗಳವರ ಮೂಲ ಮೃತ್ತಿಕಾ ಬೃಂದಾವನ ಸನ್ನಿಧಾನದಲ್ಲಿ ಆಗಸ್ಟ್ 29ರ ಶನಿವಾರ ಪರ್ವಾರಾಧನೆ, ಅತ್ಯಂತ ವೈಭವ ಹಾಗೂ ಶ್ರದ್ಧಾಭಕ್ತಿಯಿಂದ ನೆರವೇರಿದ್ದು, ಭಕ್ತರು ಪಾಲ್ಗೊಂಡಿದ್ದರು ಎಂದು ತಿಳಿಸಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್