ರೈತರ ಆತ್ಮಹತ್ಯೆ ತಡೆಯಲು ಸರ್ಕಾರ ವಿಫಲ: ವಿಜಯೇಂದ್ರ
ಬೆಂಗಳೂರು, 30 ಆಗಸ್ಟ್ (ಹಿ.ಸ.): ಆ್ಯಂಕರ್:ರಾಜ್ಯದಲ್ಲಿ ಮಳೆ ಕೊರತೆ ಹಾಗೂ ಬೆಳೆ ಹಾನಿಯಿಂದ ಉಂಟಾದ ಸಾಲದ ಬಾಧೆಯಿಂದ ರೈತರ ಆತ್ಮಹತ್ಯೆ ಪ್ರಕರಣಗಳು ಮುಂದುವರಿದಿವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಆರೋಪಿಸಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಹೇಳಿಕೆ ನೀಡಿರುವ ಅವರು, ಆಗಸ್ಟ್ ತಿಂಗಳೊ
ರೈತರ ಆತ್ಮಹತ್ಯೆ ತಡೆಯಲು ಸರ್ಕಾರ ವಿಫಲ: ವಿಜಯೇಂದ್ರ


ಬೆಂಗಳೂರು, 30 ಆಗಸ್ಟ್ (ಹಿ.ಸ.):

ಆ್ಯಂಕರ್:ರಾಜ್ಯದಲ್ಲಿ ಮಳೆ ಕೊರತೆ ಹಾಗೂ ಬೆಳೆ ಹಾನಿಯಿಂದ ಉಂಟಾದ ಸಾಲದ ಬಾಧೆಯಿಂದ ರೈತರ ಆತ್ಮಹತ್ಯೆ ಪ್ರಕರಣಗಳು ಮುಂದುವರಿದಿವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಆರೋಪಿಸಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ಹೇಳಿಕೆ ನೀಡಿರುವ ಅವರು, ಆಗಸ್ಟ್ ತಿಂಗಳೊಂದರಲ್ಲೇ ನಾಲ್ವರು ರೈತರು ಆತ್ಮಹತ್ಯೆಗೆ ಶರಣಾಗಿರುವುದು ಅತ್ಯಂತ ದುಃಖಕರ ಸಂಗತಿ ಎಂದಿದ್ದಾರೆ.

ಮಳೆ ಕೊರತೆಯಿಂದ ಬೆಳೆ ನಾಶವಾಗಿದ್ದು, ಬ್ಯಾಂಕ್ ಹಾಗೂ ಖಾಸಗಿ ಸಾಲಗಳನ್ನು ತೀರಿಸಲಾಗದೆ ರೈತರು ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದಾರೆ. ಆದರೆ ರಾಜ್ಯ ಕಾಂಗ್ರೆಸ್ ಸರ್ಕಾರ ರೈತರ ಸಮಸ್ಯೆಗಳ ಬಗ್ಗೆ ನಿರ್ಲಕ್ಷ್ಯ ವಹಿಸಿದೆ ಎಂದು ಟೀಕಿಸಿದ್ದಾರೆ.

ರಾಜ್ಯ ಸರ್ಕಾರ ಪುನರ್‌ರಚನೆಯಾಗಿ ಮೂರು ತಿಂಗಳು ಸಮೀಪಿಸುತ್ತಿದ್ದರೂ ರೈತರ ಸಮಸ್ಯೆಗಳ ಕಡೆಗೆ ಗಮನ ಹರಿಸದಿರುವುದು ಸರ್ಕಾರದ ರೈತಪರ ಕಾಳಜಿಯನ್ನು ತೋರಿಸುತ್ತದೆ ಎಂದು ವಿಜಯೇಂದ್ರ ಹೇಳಿದ್ದಾರೆ.

ಮೂರು ವರ್ಷದ ಸಾಧನೆಗಳನ್ನು ಜಾಹೀರಾತುಗಳ ಮೂಲಕ ಬಿಂಬಿಸಿಕೊಳ್ಳುತ್ತಿರುವ ಸರ್ಕಾರ ರೈತರ ಸಾವಿನ ಸಮಾಧಿಯ ಮೇಲೆ ಸಂಭ್ರಮಾಚರಣೆ ಮಾಡುತ್ತಿದೆ ಎಂದು ಅವರು ಆರೋಪಿಸಿದ್ದಾರೆ. ರೈತರ ನೆರವಿಗೆ ಧಾವಿಸಬೇಕಾದ ಮುಖ್ಯಮಂತ್ರಿ ರಿಯಲ್ ಎಸ್ಟೇಟ್ ವ್ಯವಹಾರ ಹಾಗೂ ದೆಹಲಿ ಪ್ರವಾಸಗಳಲ್ಲಿ ಕಾಲ ಕಳೆಯುತ್ತಿದ್ದಾರೆ ಎಂದು ಟೀಕಿಸಿದ್ದಾರೆ.

ರೈತರ ಬಗ್ಗೆ ಸರ್ಕಾರಕ್ಕೆ ಕಿಂಚಿತ್ತಾದರೂ ಕಾಳಜಿ ಇದ್ದರೆ ಬರದಿಂದ ಸಂಕಷ್ಟದಲ್ಲಿರುವ ರಾಜ್ಯದ ಪ್ರತಿಯೊಬ್ಬ ರೈತನಿಗೂ ತಲಾ 50 ಸಾವಿರ ರೂ. ಪರಿಹಾರ ನೀಡಬೇಕು ಎಂದು ವಿಜಯೇಂದ್ರ ಒತ್ತಾಯಿಸಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande