ಗೃಹಲಕ್ಷ್ಮಿ ಯೋಜನೆ ಮಹಿಳೆಯರ ಆರ್ಥಿಕ ಸ್ವಾವಲಂಬನೆಯ ಪ್ರತೀಕ: ಸಿದ್ದರಾಮಯ್ಯ
ಬೆಂಗಳೂರು, 30 ಆಗಸ್ಟ್ (ಹಿ.ಸ.): ಆ್ಯಂಕರ್: ಮೂರು ವರ್ಷಗಳ ಹಿಂದೆ ಇದೇ ದಿನ ತಮ್ಮ ಸರ್ಕಾರದ ಮಹತ್ವಾಕಾಂಕ್ಷೆಯ ‘ಗೃಹಲಕ್ಷ್ಮಿ’ ಯೋಜನೆಗೆ ಚಾಲನೆ ನೀಡಿದ್ದನ್ನು ನೆನೆಯಲು ಹೆಮ್ಮೆ ಎನಿಸುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಎಕ್ಸ್‌ನಲ್ಲಿ ಹೇಳಿಕೆ ನೀಡಿರುವ ಅವರು, ಚುನಾವಣಾ ಸ
ಗೃಹಲಕ್ಷ್ಮಿ ಯೋಜನೆ ಮಹಿಳೆಯರ ಆರ್ಥಿಕ ಸ್ವಾವಲಂಬನೆಯ ಪ್ರತೀಕ: ಸಿದ್ದರಾಮಯ್ಯ


ಬೆಂಗಳೂರು, 30 ಆಗಸ್ಟ್ (ಹಿ.ಸ.):

ಆ್ಯಂಕರ್:

ಮೂರು ವರ್ಷಗಳ ಹಿಂದೆ ಇದೇ ದಿನ ತಮ್ಮ ಸರ್ಕಾರದ ಮಹತ್ವಾಕಾಂಕ್ಷೆಯ ‘ಗೃಹಲಕ್ಷ್ಮಿ’ ಯೋಜನೆಗೆ ಚಾಲನೆ ನೀಡಿದ್ದನ್ನು ನೆನೆಯಲು ಹೆಮ್ಮೆ ಎನಿಸುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಎಕ್ಸ್‌ನಲ್ಲಿ ಹೇಳಿಕೆ ನೀಡಿರುವ ಅವರು, ಚುನಾವಣಾ ಸಂದರ್ಭದಲ್ಲಿ ನೀಡಿದ್ದ ಭರವಸೆಗಳನ್ನು ಅಧಿಕಾರಕ್ಕೆ ಬಂದ ತಕ್ಷಣವೇ ಜಾರಿಗೆ ತರುವ ಸಂಕಲ್ಪ ಮಾಡಿದ್ದೆವು. ಮುಖ್ಯಮಂತ್ರಿ ಆಗಿ ಪ್ರಮಾಣ ವಚನ ಸ್ವೀಕರಿಸಿದ ಬಳಿಕ ಐದು ಗ್ಯಾರಂಟಿಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆ ಜಾರಿಗೊಳಿಸಿ, ರಾಜ್ಯದ ಪ್ರತಿಯೊಬ್ಬ ಅರ್ಹ ಮಹಿಳೆಗೆ ಪ್ರತಿ ತಿಂಗಳು 2 ಸಾವಿರ ರೂ. ನೀಡುವ ಭರವಸೆಯನ್ನು ಈಡೇರಿಸಿದ್ದೇವೆ ಎಂದಿದ್ದಾರೆ.

ಗೃಹಲಕ್ಷ್ಮಿ ಯೋಜನೆಯಿಂದ ಮಕ್ಕಳ ಶಿಕ್ಷಣ, ಕುಟುಂಬ ನಿರ್ವಹಣೆ ಮತ್ತು ಆರೋಗ್ಯ ಸೇರಿದಂತೆ ಕುಟುಂಬದ ಅಗತ್ಯಗಳ ಕುರಿತು ಮಹಿಳೆಯರು ಸ್ವತಂತ್ರವಾಗಿ ನಿರ್ಧಾರ ಕೈಗೊಳ್ಳುವ ಆರ್ಥಿಕ ಶಕ್ತಿ ಪಡೆದಿದ್ದಾರೆ. ತಾಯಿಯ ಮುಖದಲ್ಲಿನ ನೆಮ್ಮದಿ, ಗೃಹಿಣಿಯ ಆರ್ಥಿಕ ಸ್ವಾತಂತ್ರ್ಯ ಹಾಗೂ ಮಕ್ಕಳ ಭವಿಷ್ಯದ ಬಗ್ಗೆ ಕುಟುಂಬಗಳಲ್ಲಿ ಮೂಡಿರುವ ವಿಶ್ವಾಸವೇ ಯೋಜನೆಯ ನಿಜವಾದ ಯಶಸ್ಸು ಎಂದು ತಿಳಿಸಿದ್ದಾರೆ.

ಗೃಹಲಕ್ಷ್ಮಿ ಕೇವಲ ಯೋಜನೆಯಲ್ಲ. ಅದು ಮಹಿಳೆಯರ ಮೇಲಿನ ನಂಬಿಕೆ, ಗೌರವ ಮತ್ತು ಬದ್ಧತೆಯ ಪ್ರತೀಕ. ಭರವಸೆಗಳು ರಾಜಕಾರಣವಲ್ಲ, ಕೊಟ್ಟ ಮಾತನ್ನು ಉಳಿಸಿಕೊಳ್ಳುವುದೇ ನಿಜವಾದ ಜನಸೇವೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ಗೃಹಲಕ್ಷ್ಮಿಯರಿಗೆ ಹೃತ್ಪೂರ್ವಕ ಶುಭಾಶಯಗಳನ್ನು ತಿಳಿಸಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande