ಸಪ್ಟೆಂಬರ್ 01 ರಂದು ಅಂಗವಿಕಲರ ಕುಂದುಕೊರತೆಗಳ ಸಭೆ
ಧಾರವಾಡ, 30 ಆಗಸ್ಟ್ (ಹಿ.ಸ.): ಆ್ಯಂಕರ್: ಅಂಗವಿಕಲರ ಕುಂದುಕೊರತೆಗಳ ಸಭೆ ನಡೆಸಿ ಅವರ ಕುಂದುಕೊರತೆಗಳನ್ನು ಶೀಘ್ರ ಪರಿಹರಿಸಲು ಸಪ್ಟೆಂಬರ್ 01, 2026 ರಂದು ಬೆಳಿಗ್ಗೆ 9:45 ಗಂಟೆಗೆ ಜಿಲ್ಲಾಧಿಕಾರಿಗಳ ಹೊಸ ಸಭಾಭವನದಲ್ಲಿ ಅಂಗವಿಕಲರ ಕುಂದುಕೊರತೆ ಸಭೆಯನ್ನು ಆಯೋಜಿಸಲಾಗಿದೆ. ಸಭೆಯಲ್ಲಿ ಧಾರವಾಡ ಜಿಲ್ಲೆ
ಸಪ್ಟೆಂಬರ್ 01 ರಂದು ಅಂಗವಿಕಲರ ಕುಂದುಕೊರತೆಗಳ ಸಭೆ


ಧಾರವಾಡ, 30 ಆಗಸ್ಟ್ (ಹಿ.ಸ.):

ಆ್ಯಂಕರ್: ಅಂಗವಿಕಲರ ಕುಂದುಕೊರತೆಗಳ ಸಭೆ ನಡೆಸಿ ಅವರ ಕುಂದುಕೊರತೆಗಳನ್ನು ಶೀಘ್ರ ಪರಿಹರಿಸಲು ಸಪ್ಟೆಂಬರ್ 01, 2026 ರಂದು ಬೆಳಿಗ್ಗೆ 9:45 ಗಂಟೆಗೆ ಜಿಲ್ಲಾಧಿಕಾರಿಗಳ ಹೊಸ ಸಭಾಭವನದಲ್ಲಿ ಅಂಗವಿಕಲರ ಕುಂದುಕೊರತೆ ಸಭೆಯನ್ನು ಆಯೋಜಿಸಲಾಗಿದೆ.

ಸಭೆಯಲ್ಲಿ ಧಾರವಾಡ ಜಿಲ್ಲೆಯ ವಿಕಲಚೇತನರು ತಮ್ಮ ಅಹವಾಲುಗಳನ್ನು ಲಿಖಿತ ರೂಪದಲ್ಲಿ ಸಲ್ಲಿಸಿ, ತಮ್ಮ ಕುಂದುಕೊರತೆಗಳನ್ನು ಪರಿಹರಿಸಿಕೊಳ್ಳಬೇಕು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ:0836-2744474 ಗೆ ಸಂಪರ್ಕಿಸಬಹುದು ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande