ಶ್ರೀನಾರಾಯಣಗುರುಗಳ ಚಿಂತನೆಗಳು ಇಂದಿಗೂ ಪ್ರಸ್ತುತ: ಬಿ.ಕೆ. ಹರಿಪ್ರಸಾದ್
ಬೀದರ್, 30 ಆಗಸ್ಟ್ (ಹಿ.ಸ.): ಆ್ಯಂಕರ್: ಸಾವಿರಾರು ವರ್ಷಗಳಿಂದ ಶೋಷಣೆಗೆ ಒಳಗಾಗಿದ್ದ ತಳ ಸಮುದಾಯಗಳಿಗೆ ಸಮಾನತೆ ಹಾಗೂ ಸ್ವಾಭಿಮಾನದ ಅರಿವು ಮೂಡಿಸಿದ ಧಾರ್ಮಿಕ ಸಂತ ಶ್ರೀನಾರಾಯಣಗುರುಗಳ ಚಿಂತನೆಗಳು ಇಂದಿಗೂ ಪ್ರಸ್ತುತವಾಗಿವೆ ಎಂದು ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಹೇಳಿದ್ದಾರೆ. ಬೀದರ್ ಜಿ
ಹರಿಪ್ರಸಾದ


ಬೀದರ್, 30 ಆಗಸ್ಟ್ (ಹಿ.ಸ.):

ಆ್ಯಂಕರ್:

ಸಾವಿರಾರು ವರ್ಷಗಳಿಂದ ಶೋಷಣೆಗೆ ಒಳಗಾಗಿದ್ದ ತಳ ಸಮುದಾಯಗಳಿಗೆ ಸಮಾನತೆ ಹಾಗೂ ಸ್ವಾಭಿಮಾನದ ಅರಿವು ಮೂಡಿಸಿದ ಧಾರ್ಮಿಕ ಸಂತ ಶ್ರೀನಾರಾಯಣಗುರುಗಳ ಚಿಂತನೆಗಳು ಇಂದಿಗೂ ಪ್ರಸ್ತುತವಾಗಿವೆ ಎಂದು ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಹೇಳಿದ್ದಾರೆ.

ಬೀದರ್ ಜಿಲ್ಲೆಯಲ್ಲಿ ಕರ್ನಾಟಕ ಶೋಷಿತ ಹಿಂದುಳಿದ ವರ್ಗಗಳ ಒಕ್ಕೂಟ (ಅಹಿಂದ) ಹಾಗೂ ಆರ್ಯ ಈಡಿಗ ಸಮುದಾಯ ಸಂಘಟನೆಗಳ ವತಿಯಿಂದ ಆಯೋಜಿಸಿದ್ದ ಶ್ರೀನಾರಾಯಣಗುರು ಹಾಗೂ ದೇವರಾಜ ಅರಸ್ ಅವರ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ, ಸಂವಿಧಾನದ ಪೀಠಿಕೆ ಓದುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಹಿಂದೆ 198ಕ್ಕೂ ಹೆಚ್ಚು ಕಾಯಕ ಸಮುದಾಯಗಳಿಗೆ ದೇವಸ್ಥಾನ ಪ್ರವೇಶ ಹಾಗೂ ಶಿಕ್ಷಣದ ಅವಕಾಶಗಳಿರಲಿಲ್ಲ. ಈ ಹಿನ್ನೆಲೆಯಲ್ಲಿ ಬಸವಣ್ಣನವರು ಕಾಯಕ ಸಮುದಾಯಗಳಿಗೆ ಘನತೆ ಮತ್ತು ಗೌರವ ದೊರಕುವ ಸಮಾಜ ನಿರ್ಮಾಣಕ್ಕಾಗಿ 12ನೇ ಶತಮಾನದಲ್ಲಿ ಲಿಂಗಾಯತ ಧರ್ಮ ಸ್ಥಾಪಿಸಿದರು. ಆದರೆ ಶ್ರೀನಾರಾಯಣಗುರುಗಳು ಪರ್ಯಾಯ ಧರ್ಮ ಸ್ಥಾಪಿಸುವ ಬದಲು ಹಿಂದೂ ಧರ್ಮದಲ್ಲಿನ ಅನಿಷ್ಟ ಸಂಪ್ರದಾಯ ಹಾಗೂ ಆಚರಣೆಗಳ ವಿರುದ್ಧ ಹೋರಾಟ ನಡೆಸಿದರು ಎಂದರು.

ನಾರಾಯಣಗುರುಗಳು ದೇವಸ್ಥಾನ ಪ್ರವೇಶಕ್ಕಾಗಿ ಮಾತ್ರ ಹೋರಾಡದೆ, ಹಿಂದುಳಿದ, ಶೂದ್ರ ಹಾಗೂ ದಲಿತ ಸಮುದಾಯಗಳಲ್ಲಿ ಶಿಕ್ಷಣದ ಕುರಿತು ಜಾಗೃತಿ ಮೂಡಿಸಿದರು. ಅವರ ಶೈಕ್ಷಣಿಕ ಕ್ರಾಂತಿ ಇಂದಿನ ಪೀಳಿಗೆಗೆ ಮಾದರಿಯಾಗಬೇಕು ಎಂದು ಹೇಳಿದರು.

ಮಹಿಳೆಯರಿಗೆ ಸಮಾನ ಅವಕಾಶ ಕಲ್ಪಿಸುವ ನಿಟ್ಟಿನಲ್ಲಿಯೂ ನಾರಾಯಣಗುರುಗಳ ಚಿಂತನೆಗಳು ಮಹತ್ವದ್ದಾಗಿವೆ. ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಮಹಿಳೆಯರಿಗೆ ಆಸ್ತಿಯ ಹಕ್ಕು ಸೇರಿದಂತೆ ಸಮಾನ ಅವಕಾಶಗಳನ್ನು ಕಲ್ಪಿಸುವ ಉದ್ದೇಶದಿಂದ ಹಿಂದೂ ಕೋಡ್ ಬಿಲ್ ರೂಪಿಸಿದರು. ಬಳಿಕ ಕಾಂಗ್ರೆಸ್ ನೇತೃತ್ವದ ಸರ್ಕಾರಗಳು ಮಹಿಳೆಯರ ಹಕ್ಕುಗಳನ್ನು ಬಲಪಡಿಸುವ ಹಲವು ಕ್ರಮಗಳನ್ನು ಜಾರಿಗೆ ತಂದಿವೆ ಎಂದು ತಿಳಿಸಿದರು.

ದೇವರಾಜ ಅರಸ್ ಅವರು ಹಿಂದುಳಿದ ಸಮುದಾಯಗಳಿಗೆ ಅವಕಾಶ ಕಲ್ಪಿಸುವುದರೊಂದಿಗೆ, ಉಳುವವನಿಗೆ ಭೂಮಿಯ ಹಕ್ಕು ನೀಡುವ ಮೂಲಕ ಸಾಮಾಜಿಕ ಕ್ರಾಂತಿಗೆ ಕಾರಣರಾದರು. ಶೋಷಿತ ಸಮುದಾಯಗಳಿಗೆ ರಾಜಕೀಯ ಪ್ರಾತಿನಿಧ್ಯ ನೀಡಿ ಶಕ್ತಿ ತುಂಬಿದ ಅವರು ರಾಜ್ಯದಲ್ಲಿ ಸಾಮಾಜಿಕ ನ್ಯಾಯಕ್ಕೆ ಹೆಚ್ಚಿನ ಒತ್ತು ನೀಡಿದರು. ಇಂತಹ ಮಹನೀಯರ ಆಶಯಗಳು ಎಲ್ಲರಿಗೂ ಸ್ಫೂರ್ತಿಯಾಗಬೇಕು ಎಂದು ಹರಿಪ್ರಸಾದ್ ಹೇಳಿದರು.

ಕಾರ್ಯಕ್ರಮದಲ್ಲಿ ಪ್ರೀತಿಯಿಂದ ಬರಮಾಡಿಕೊಂಡು ಗೌರವಿಸಿದ ಆಯೋಜಕರಿಗೆ ಹಾಗೂ ಬೀದರ್ ಜಿಲ್ಲೆಯ ಜನರು ತೋರಿದ ಪ್ರೀತಿಗೆ ಕೃತಜ್ಞತೆ ಸಲ್ಲಿಸುವುದಾಗಿ ಅವರು ತಿಳಿಸಿದರು.

---------------

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande