ಸೆ.6ರಂದು ಬೆಂಗಳೂರಿನಲ್ಲಿ ಸ್ಟಡಿ ಅಬ್ರಾಡ್ ಎಕ್ಸ್ಪೋ
ಧಾರವಾಡ, 30 ಆಗಸ್ಟ್ (ಹಿ.ಸ.): ಆ್ಯಂಕರ್:ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮವು (ಕೆವಿಟಿಎಸ್‌ಡಿಸಿ) ರಾಜ್ಯದ ವಿದ್ಯಾರ್ಥಿಗಳಿಗೆ ಜಾಗತಿಕ ಉನ್ನತ ಶಿಕ್ಷಣದ ಅವಕಾಶಗಳನ್ನು ಪರಿಚಯಿಸುವ ಉದ್ದೇಶದಿಂದ ಸೆಪ್ಟೆಂಬರ್ 6ರಂದು ಬೆಂಗಳೂರಿನಲ್ಲಿ ‘ಸ್ಟಡಿ ಅಬ್ರಾಡ್ ಎಕ್ಸ್‌ಪೋ–2026’ ಆಯೋಜಿಸಿದೆ. ಬೆಂಗಳೂರಿನ ಅರಮ
ಸೆ.6ರಂದು ಬೆಂಗಳೂರಿನಲ್ಲಿ ಸ್ಟಡಿ ಅಬ್ರಾಡ್ ಎಕ್ಸ್ಪೋ


ಧಾರವಾಡ, 30 ಆಗಸ್ಟ್ (ಹಿ.ಸ.):

ಆ್ಯಂಕರ್:ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮವು (ಕೆವಿಟಿಎಸ್‌ಡಿಸಿ) ರಾಜ್ಯದ ವಿದ್ಯಾರ್ಥಿಗಳಿಗೆ ಜಾಗತಿಕ ಉನ್ನತ ಶಿಕ್ಷಣದ ಅವಕಾಶಗಳನ್ನು ಪರಿಚಯಿಸುವ ಉದ್ದೇಶದಿಂದ ಸೆಪ್ಟೆಂಬರ್ 6ರಂದು ಬೆಂಗಳೂರಿನಲ್ಲಿ ‘ಸ್ಟಡಿ ಅಬ್ರಾಡ್ ಎಕ್ಸ್‌ಪೋ–2026’ ಆಯೋಜಿಸಿದೆ.

ಬೆಂಗಳೂರಿನ ಅರಮನೆ ಮೈದಾನದ ಗೇಟ್ ನಂ.4ರ ಗಾಯತ್ರಿ ಗ್ರ್ಯಾಂಡ್, ಗಾಯತ್ರಿ ವಿಹಾರದಲ್ಲಿ ಕಾರ್ಯಕ್ರಮ ನಡೆಯಲಿದೆ. 10ಕ್ಕೂ ಹೆಚ್ಚು ದೇಶಗಳ 75ಕ್ಕೂ ಅಧಿಕ ವಿಶ್ವವಿದ್ಯಾಲಯಗಳು ಹಾಗೂ ಶಿಕ್ಷಣ ಸಂಸ್ಥೆಗಳು ಭಾಗವಹಿಸಲಿವೆ.

ವಿದೇಶದಲ್ಲಿ ಉನ್ನತ ಶಿಕ್ಷಣ ಪಡೆಯಲು ಆಸಕ್ತಿ ಹೊಂದಿರುವ ವಿದ್ಯಾರ್ಥಿಗಳಿಗೆ ವಿದೇಶಿ ಶಿಕ್ಷಣದ ಅವಕಾಶಗಳು, ಪ್ರವೇಶ ಪ್ರಕ್ರಿಯೆ, ವಿದ್ಯಾರ್ಥಿ ವೀಸಾ ಹಾಗೂ ವಿದ್ಯಾರ್ಥಿವೇತನ ಸೇರಿದಂತೆ ಅಗತ್ಯ ಮಾಹಿತಿಯನ್ನು ಒಂದೇ ವೇದಿಕೆಯಲ್ಲಿ ಒದಗಿಸಲಾಗುವುದು.

ವಿದ್ಯಾರ್ಥಿಗಳು ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳುವಂತೆ ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande