ಮಳೆಗಾಗಿ ಕಲಬುರಗಿಯಲ್ಲಿ ಮುಸ್ಲಿಂ ಸಮುದಾಯದಿಂದ ಸಾಮೂಹಿಕ ಪ್ರಾರ್ಥನೆ
ಮುಸ್ಲಿಂ ಸಮುದಾಯದಿಂದ ಸಾಮೂಹಿಕ ಪ್ರಾರ್ಥನೆ
kalaburagi-muslim-community-offers-collective-prayers-for-rain-amid-delayed-monsoon


ಕಲಬುರಗಿ, 30 ಆಗಸ್ಟ್ (ಹಿ.ಸ.)

ಆ್ಯಂಕರ್:

ಜಿಲ್ಲೆಯಲ್ಲಿ ಮುಂಗಾರು ಮಳೆ ಕೈಕೊಟ್ಟಿರುವ ಹಿನ್ನೆಲೆಯಲ್ಲಿ ಮಳೆಗಾಗಿ ಮುಸ್ಲಿಂ ಸಮುದಾಯದವರು ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು.

ಕಲಬುರಗಿ ನಗರದ ಹಾಗರಗ ಕ್ರಾಸ್ ಬಳಿಯಿರುವ ಕೆಸಿಟಿ ಮೈದಾನದಲ್ಲಿ ಮುಸ್ಲಿಂ ಸಮುದಾಯದ ಬಾಂಧವರು ಒಟ್ಟಾಗಿ ಸೇರಿ ಸಾಮೂಹಿಕ ಪ್ರಾರ್ಥನೆ ನೆರವೇರಿಸಿದರು. ಈ ವೇಳೆ ಉತ್ತಮ ಮಳೆಯಾಗಲಿ, ರೈತರ ಸಂಕಷ್ಟಗಳು ದೂರವಾಗಲಿ ಹಾಗೂ ಜಿಲ್ಲೆಯಲ್ಲಿ ಕೃಷಿ ಚಟುವಟಿಕೆಗಳಿಗೆ ಅನುಕೂಲವಾಗುವಂತೆ ಮಳೆ ಸುರಿಯಲಿ ಎಂದು ಪ್ರಾರ್ಥಿಸಲಾಯಿತು.

ಮುಂಗಾರು ಮಳೆ ವಿಳಂಬವಾಗಿರುವುದರಿಂದ ರೈತರು ಸೇರಿದಂತೆ ಜಿಲ್ಲೆಯ ಜನರಲ್ಲಿ ಆತಂಕ ಮೂಡಿದೆ. ಈ ಹಿನ್ನೆಲೆಯಲ್ಲಿ ಮಳೆಗಾಗಿ ವಿಶೇಷ ಪ್ರಾರ್ಥನೆ ನಡೆಸಲಾಯಿತು. ಸಾಮೂಹಿಕ ಪ್ರಾರ್ಥನೆಯಲ್ಲಿ ಹಲವು ಮಂದಿ ಮುಸ್ಲಿಂ ಸಮುದಾಯದವರು ಭಾಗವಹಿಸಿದ್ದರು.

---------------

ಹಿಂದೂಸ್ತಾನ್ ಸಮಾಚಾರ್ / BHARGAVI G R


 rajesh pande