ಜಮೀನು ಮ್ಯುಟೇಷನ್ಗೆ ಲಂಚ: ಲೋಕಾಯುಕ್ತ ಬಲೆಗೆ ಪಿಡಿಓ
ಲೋಕಾಯುಕ್ತ ಬಲೆಗೆ ಪಿಡಿಓ
kalaburagi-pdo-caught-by-lokayukta-while-accepting-bribe-for-land-mutation


ಕಲಬುರಗಿ, 30 ಆಗಸ್ಟ್ (ಹಿ.ಸ.):

ಆ್ಯಂಕರ್:

ಜಮೀನು ಮ್ಯುಟೇಷನ್ ಮಾಡಿಕೊಡಲು ಲಂಚಕ್ಕೆ ಬೇಡಿಕೆಯಿಟ್ಟಿದ್ದ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಲೋಕಾಯುಕ್ತ ಬಲೆಗೆ ಬಿದ್ದಿರುವ ಘಟನೆ ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲ್ಲೂಕಿನ ಬಿರಾಳ ಗ್ರಾಮ ಪಂಚಾಯಿತಿಯಲ್ಲಿ ನಡೆದಿದೆ.ಬಿರಾಳ ಗ್ರಾಮ ಪಂಚಾಯಿತಿ ಪಿಡಿಓ ಮೆಹಬೂಬ್ ಪಟೇಲ್ ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದಿದ್ದಾರೆ.

ಮಾಹಿತಿ ಪ್ರಕಾರ, ಮರೆಪ್ಪ ತಳವಾರ ಅವರ ಹೆಸರಿಗೆ ಜಮೀನು ಮ್ಯುಟೇಷನ್ ಮಾಡಿಕೊಡಲು ಪಿಡಿಓ ಮೆಹಬೂಬ್ ಪಟೇಲ್ ಅವರು ₹18 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ. ಈ ಕುರಿತು ಶಿವರೆಡ್ಡಿ ಎಂಬುವವರು ಲೋಕಾಯುಕ್ತರಿಗೆ ದೂರು ನೀಡಿದ್ದರು.

ದೂರಿನ ಆಧಾರದ ಮೇಲೆ ಕಾರ್ಯಾಚರಣೆ ನಡೆಸಿದ ಲೋಕಾಯುಕ್ತ ಅಧಿಕಾರಿಗಳು, ಪಿಡಿಓ ಅವರು ₹12 ಸಾವಿರವನ್ನು ಪೋನ್ ಪೇ ಮೂಲಕ ಲಂಚವಾಗಿ ಸ್ವೀಕರಿಸುತ್ತಿದ್ದ ಸಂದರ್ಭದಲ್ಲಿ ರೆಡ್ಹ್ಯಾಂಡ್ ಆಗಿ ವಶಕ್ಕೆ ಪಡೆದಿದ್ದಾರೆ.

ಕಲಬುರಗಿ ಲೋಕಾಯುಕ್ತ ಎಸ್ಪಿ ಸಿದ್ಧರಾಜು ಸಿ. ಅವರ ಮಾರ್ಗದರ್ಶನದಲ್ಲಿ ದಾಳಿ ನಡೆದಿದ್ದು, ಲೋಕಾಯುಕ್ತ ಪೊಲೀಸ್ ಇನ್ಸ್ಪೆಕ್ಟರ್ ಅರುಣ್ ಕುಮಾರ್ ನೇತೃತ್ವದಲ್ಲಿ ಕಾರ್ಯಾಚರಣೆ ಕೈಗೊಳ್ಳಲಾಗಿದೆ.ಲಂಚ ಸ್ವೀಕಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಅಧಿಕಾರಿಗಳು ಮುಂದಿನ ತನಿಖೆ ಕೈಗೊಂಡಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / BHARGAVI G R


 rajesh pande