
ಕೊಪ್ಪಳ, 30 ಆಗಸ್ಟ್ (ಹಿ.ಸ.)
ಆ್ಯಂಕರ್:
ಜಿಲ್ಲೆಯ ಕುಕನೂರಿನಲ್ಲಿ ಜಾಮಿಯಾ ಮಸೀದಿ ಬಜಾರ್ ಹಾಗೂ ಮುಸ್ಲಿಂ ಖಬರಸ್ಥಾನ್ ಕಮಿಟಿ ವತಿಯಿಂದ ಆಯೋಜಿಸಿದ್ದ ಸಾಮೂಹಿಕ ವಿವಾಹ ಸಮಾರಂಭವನ್ನು ನಗರಾಭಿವೃದ್ಧಿ ಸಚಿವರಾದ ಡಾ. ಯತೀಂದ್ರ ಸಿದ್ದರಾಮಯ್ಯ ಅವರು ಉನ್ನತ ಶಿಕ್ಷಣ ಸಚಿವರಾದ ಬಸವರಾಜ ರಾಯರೆಡ್ಡಿ ಅವರೊಂದಿಗೆ ಉದ್ಘಾಟಿಸಿದರು.
ಸಮಾರಂಭದಲ್ಲಿ ನವದಂಪತಿಗಳಿಗೆ ಶುಭ ಹಾರೈಸಿದ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಅವರು, ಸಾಮೂಹಿಕ ವಿವಾಹಗಳು ಸಮಾಜದಲ್ಲಿ ಸರಳ ವಿವಾಹ ಪದ್ಧತಿಗೆ ಉತ್ತೇಜನ ನೀಡುವುದರ ಜೊತೆಗೆ ಆರ್ಥಿಕವಾಗಿ ಹಿಂದುಳಿದ ಕುಟುಂಬಗಳಿಗೆ ನೆರವಾಗುತ್ತವೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಕೊಪ್ಪಳ ಲೋಕಸಭಾ ಕ್ಷೇತ್ರದ ಸಂಸದ ರಾಜಶೇಖರ್ ಹಿಟ್ನಾಳ್, ಸಯ್ಯದ್ ಷಾ ಮುರ್ತುಜಾ ಖಾದ್ರಿ, ಅನ್ನದಾನೇಶ್ವರ ಶಾಖಾ ಮಠದ ಡಾ. ಮಹಾದೇವ ಸ್ವಾಮಿಗಳು, ಖಾಸಿಂ ಸಾಬ್ ತಳಕಲ್, ಹಸನಸಾಬ ದೋಟಿಹಾಳ ಸೇರಿದಂತೆ ಹಲವು ಗಣ್ಯರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.
ಸಾಮೂಹಿಕ ವಿವಾಹ ಸಮಾರಂಭದಲ್ಲಿ ಹಲವಾರು ಜೋಡಿಗಳು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದು, ಕುಟುಂಬಸ್ಥರು ಹಾಗೂ ಸಮುದಾಯದ ಮುಖಂಡರು ನವದಂಪತಿಗಳಿಗೆ ಶುಭ ಹಾರೈಸಿದರು.
---------------
ಹಿಂದೂಸ್ತಾನ್ ಸಮಾಚಾರ್ / BHARGAVI G R