
ಗದಗ, 31 ಆಗಸ್ಟ್ (ಹಿ.ಸ.)
ಆ್ಯಂಕರ್: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಸೆಪ್ಟೆಂಬರ್ 1ರಂದು ಗದಗ ಜಿಲ್ಲೆಗೆ ಭೇಟಿ ನೀಡಿ, ಜಿಲ್ಲೆಯ ಬರ ಪರಿಸ್ಥಿತಿ ಕುರಿತು ಪರಿಶೀಲನೆ ನಡೆಸಲಿದ್ದಾರೆ.
ಮುಖ್ಯಮಂತ್ರಿಗಳ ಪ್ರವಾಸ ಕಾರ್ಯಕ್ರಮದನ್ವಯ ಸೆ.1ರಂದು ಬೆಳಿಗ್ಗೆ 9.30ಕ್ಕೆ ಬೆಂಗಳೂರಿನ ಹೆಚ್.ಎ.ಎಲ್. ವಿಮಾನ ನಿಲ್ದಾಣದಿಂದ ವಿಶೇಷ ವಿಮಾನದ ಮೂಲಕ ಹೊರಟು, 10.30ಕ್ಕೆ ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದಾರೆ. ಅಲ್ಲಿಂದ ಹೆಲಿಕಾಪ್ಟರ್ ಮೂಲಕ 11.15ಕ್ಕೆ ಗದಗ ಜಿಲ್ಲಾಧಿಕಾರಿ ಕಚೇರಿ ಆವರಣಕ್ಕೆ ಆಗಮಿಸುವ ಮುಖ್ಯಮಂತ್ರಿಗಳು, ಬಳಿಕ ಗದಗ ಜಿಲ್ಲೆಯ ವಿವಿಧ ಬರಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಪರಿಸ್ಥಿತಿಯನ್ನು ಪರಿಶೀಲಿಸಲಿದ್ದಾರೆ.
ಮಧ್ಯಾಹ್ನ 1.15ಕ್ಕೆ ಹುಲಕೋಟಿಯ ಕೃಷಿ ವಿಜ್ಞಾನ ಕೇಂದ್ರದಲ್ಲಿ ಕೃಷಿ ವಿಜ್ಞಾನಿಗಳೊಂದಿಗೆ ಸಭೆ ನಡೆಸುವರು. ನಂತರ 2.30ಕ್ಕೆ ಗದಗ ಜಿಲ್ಲಾ ಬರ ಪರಿಸ್ಥಿತಿ ಕುರಿತಂತೆ ಜಿಲ್ಲಾ ಮಟ್ಟದ ಹಿರಿಯ ಅಧಿಕಾರಿಗಳೊಂದಿಗೆ ಸಭೆ/ಚರ್ಚೆ ನಡೆಸಲಿದ್ದಾರೆ.
ಮಧ್ಯಾಹ್ನ 3.30ಕ್ಕೆ ಜಿಲ್ಲಾಧಿಕಾರಿ ಕಚೇರಿ ಆವರಣದಿಂದ ಹೆಲಿಕಾಪ್ಟರ್ ಮೂಲಕ ಲಕ್ಷ್ಮೇಶ್ವರದ ಉಮಾ ಪಿಯು ಕಾಲೇಜು ಆವರಣಕ್ಕೆ ತೆರಳಿ, 3.50ಕ್ಕೆ ಅಲ್ಲಿಂದ ಶ್ರೀ ಮುಕ್ತಿ ಮಂದಿರಕ್ಕೆ ಭೇಟಿ ನೀಡುವರು. ನಂತರ ಅಲ್ಲಿಂದ ಲಕ್ಷ್ಮೇಶ್ವರಕ್ಕೆ ಆಗಮಿಸಿ, ಹೆಲಿಕಾಪ್ಟರ್ ಮೂಲಕ 4.30ಕ್ಕೆ ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ತೆರಳಿ, ಸಂಜೆ 5.05ಕ್ಕೆ ಹುಬ್ಬಳ್ಳಿ ವಿಮಾನ ನಿಲ್ದಾಣದಿಂದ ವಿಶೇಷ ವಿಮಾನದ ಮೂಲಕ ಬೆಂಗಳೂರಿಗೆ ಪ್ರಯಾಣಿಸಿಸುವರು ಎಂದು ಪ್ರಕಟಣೆ ತಿಳಿಸಿದೆ.
---------------
ಹಿಂದೂಸ್ತಾನ್ ಸಮಾಚಾರ್ / lalita MP