ಕಾಂಗ್ರೆಸ್ ಶಾಸಕರೇ ಸರ್ಕಾರದ ಕಮಿಷನ್ ದಂಧೆ ಬಯಲು ಮಾಡಿದ್ದಾರೆ: ಆರ್. ಅಶೋಕ
ಬೆಂಗಳೂರು, 31 ಆಗಸ್ಟ್ (ಹಿ.ಸ.): ಆ್ಯಂಕರ್:ಕಾಂಗ್ರೆಸ್ ಶಾಸಕರೇ ರಾಜ್ಯ ಸರ್ಕಾರದ ವಿರುದ್ಧ ಭ್ರಷ್ಟಾಚಾರದ ಆರೋಪಗಳನ್ನು ಬಹಿರಂಗಪಡಿಸಿದ್ದಾರೆ ಎಂದು ಪ್ರತಿಪಕ್ಷ ನಾಯಕ ಆರ್. ಅಶೋಕ ಆರೋಪಿಸಿದ್ದಾರೆ. ಎಕ್ಸ್‌ನಲ್ಲಿ ಹೇಳಿಕೆ ನೀಡಿರುವ ಅವರು, ಪುತ್ತೂರು ಶಾಸಕ ಕೆ.ಎಸ್. ಅಶೋಕ್ ಕುಮಾರ್ ರೈ ಅವರು ಮುಖ್ಯಮಂತ
ಅಶೋಕ ಸಂಗ್ರಹ ಚಿತ್ರ


ಬೆಂಗಳೂರು, 31 ಆಗಸ್ಟ್ (ಹಿ.ಸ.):

ಆ್ಯಂಕರ್:ಕಾಂಗ್ರೆಸ್ ಶಾಸಕರೇ ರಾಜ್ಯ ಸರ್ಕಾರದ ವಿರುದ್ಧ ಭ್ರಷ್ಟಾಚಾರದ ಆರೋಪಗಳನ್ನು ಬಹಿರಂಗಪಡಿಸಿದ್ದಾರೆ ಎಂದು ಪ್ರತಿಪಕ್ಷ ನಾಯಕ ಆರ್. ಅಶೋಕ ಆರೋಪಿಸಿದ್ದಾರೆ.

ಎಕ್ಸ್‌ನಲ್ಲಿ ಹೇಳಿಕೆ ನೀಡಿರುವ ಅವರು, ಪುತ್ತೂರು ಶಾಸಕ ಕೆ.ಎಸ್. ಅಶೋಕ್ ಕುಮಾರ್ ರೈ ಅವರು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಬರೆದಿರುವ ಪತ್ರದಲ್ಲಿ ಮಂಗಳೂರಿನ ಕೆಆರ್‌ಐಡಿಎಲ್ ವಿಭಾಗದ ಎಂಜಿನಿಯರ್‌ಗಳು ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಇಲಾಖಾ ಸಚಿವರ ಹೆಸರಿನಲ್ಲಿ ಶೇ.7ರವರೆಗೆ ಕಮಿಷನ್ ವಸೂಲಿ ಮಾಡುತ್ತಿದ್ದಾರೆ ಎಂದು ದೂರಿದ್ದಾರೆ ಎಂದು ತಿಳಿಸಿದ್ದಾರೆ.

ಕಾಮಗಾರಿ ಗುತ್ತಿಗೆದಾರರಿಗೆ ಬೆದರಿಕೆ ಹಾಕಿ ಮಾಸಿಕ ಕಪ್ಪ ಸಂಗ್ರಹಿಸಲಾಗುತ್ತಿದೆ ಎಂಬ ಆರೋಪಗಳ ಬಗ್ಗೆಯೂ ಶಾಸಕರು ದೂರು ನೀಡಿದ್ದಾರೆ. ಈ ಆರೋಪಗಳ ಕುರಿತು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಸ್ಪಷ್ಟ ಉತ್ತರ ನೀಡಬೇಕು ಎಂದು ಅಶೋಕ ಆಗ್ರಹಿಸಿದ್ದಾರೆ.

ಸಾರ್ವಜನಿಕರ ತೆರಿಗೆ ಹಣದಿಂದ ನಡೆಯಬೇಕಾದ ಅಭಿವೃದ್ಧಿ ಕಾಮಗಾರಿಗಳು ಕಮಿಷನ್ ದಂಧೆಗೆ ಬಲಿಯಾಗುತ್ತಿವೆ. ಇದರಿಂದ ಕಳಪೆ ಕಾಮಗಾರಿಗಳಿಗೆ ಕಾರಣವಾಗುತ್ತಿದ್ದು, ಜನರು ತೊಂದರೆ ಅನುಭವಿಸುವಂತಾಗಿದೆ ಎಂದು ಅವರು ಆರೋಪಿಸಿದ್ದಾರೆ.

ಕಮಿಷನ್ ವಸೂಲಿ ಆರೋಪ ಎದುರಿಸುತ್ತಿರುವ ಕೆಆರ್‌ಐಡಿಎಲ್ ಅಧಿಕಾರಿಗಳನ್ನು ತಕ್ಷಣ ಅಮಾನತುಗೊಳಿಸಿ ಕ್ರಿಮಿನಲ್ ಪ್ರಕರಣ ದಾಖಲಿಸಬೇಕು. ಸಚಿವರ ಹೆಸರಿನಲ್ಲಿ ಕಪ್ಪ ವಸೂಲಿ ನಡೆದಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಸಂಬಂಧಪಟ್ಟ ಸಚಿವರು ಹಾಗೂ ಮಂಗಳೂರು ಜಿಲ್ಲಾ ಉಸ್ತುವಾರಿ ಸಚಿವರ ಪಾತ್ರದ ಬಗ್ಗೆಯೂ ಉನ್ನತ ಮಟ್ಟದ ನಿಷ್ಪಕ್ಷಪಾತ ತನಿಖೆ ನಡೆಸಬೇಕು ಎಂದು ಅಶೋಕ ಒತ್ತಾಯಿಸಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande