
ಬೆಂಗಳೂರು, 31 ಆಗಸ್ಟ್ (ಹಿ.ಸ.):
ಆ್ಯಂಕರ್:
ಅಬಕಾರಿ ಸಚಿವರು ಹಾಗೂ ಹಾಸನ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಎಂ. ಶಿವಲಿಂಗೇಗೌಡ ಅವರ ಅಧ್ಯಕ್ಷತೆಯಲ್ಲಿ ವಿಕಾಸಸೌಧದಲ್ಲಿ ಇಂದು ಅರಸಿಕೆರೆಯ ಹೊಸ ನ್ಯಾಯಾಲಯ ಸಂಕೀರ್ಣ ಮತ್ತು ಚನ್ನರಾಯಪಟ್ಟಣದ ಮ್ಯಾಜಿಸ್ಟ್ರೇಟ್ ನ್ಯಾಯಾಲಯದ ಆವರಣದಲ್ಲಿ ಪ್ರಧಾನ ಸಿವಿಲ್ ಜಡ್ಜ್ ಮತ್ತು ಜೆ.ಎಮ್.ಎಫ್.ಸಿ ನ್ಯಾಯಾಲಯ ಸಂಕೀರ್ಣ ನಿರ್ಮಾಣದ ಕಟ್ಟಡ ಕಾಮಗಾರಿಗಳ ಪ್ರಗತಿ ಪರಿಶೀಲನೆ ಸಭೆ ನಡೆಸಲಾಯಿತು.
ಸಭೆಯಲ್ಲಿ ಹಾಸನ ಜಿಲ್ಲಾಧಿಕಾರಿಯಾದ ಕೆ. ಎಸ್. ಲತಾಕುಮಾರಿ, ನ್ಯಾಯವಾದಿ ಪ್ರತಿನಿಧಿಗಳು ಸೇರಿದಂತೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
---------------
ಹಿಂದೂಸ್ತಾನ್ ಸಮಾಚಾರ್ / Rakesh.M.B.