ಸೆಪ್ಟೆಂಬರ್ 2 ರಿಂದ ಗ್ಯಾರಂಟಿ ಸಮಿತಿ ಉಪಾಧ್ಯಕ್ಷ ಪಿ.ಟಿ. ಪರಮೇಶ್ವರ ನಾಯ್ಕ ಪ್ರವಾಸ
ಬಳ್ಳಾರಿ, 31 ಆಗಸ್ಟ್ (ಹಿ.ಸ.) ಆ್ಯಂಕರ್: ಕರ್ನಾಟಕ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷರು ಹಾಗೂ ಮಾಜಿ ಸಚಿವರಾದ ಪಿ.ಟಿ. ಪರಮೇಶ್ವರ ನಾಯ್ಕ ಅವರು, ಸೆಪ್ಟೆಂಬರ್ 2 ರಿಂದ 4ರ ವರೆಗೆ ಬಳ್ಳಾರಿ, ಕೊಪ್ಪಳ ಹಾಗೂ ವಿಜಯನಗರ ಜಿಲ್ಲೆಗಳಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ. ಸೆಪ್ಟೆಂ
ಸೆಪ್ಟೆಂಬರ್ 2 ರಿಂದ ಗ್ಯಾರಂಟಿ ಉಪಾಧ್ಯಕ್ಷ ಪಿ.ಟಿ. ಪರಮೇಶ್ವರ ನಾಯ್ಕ ಪ್ರವಾಸ


ಬಳ್ಳಾರಿ, 31 ಆಗಸ್ಟ್ (ಹಿ.ಸ.)

ಆ್ಯಂಕರ್: ಕರ್ನಾಟಕ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷರು ಹಾಗೂ ಮಾಜಿ ಸಚಿವರಾದ ಪಿ.ಟಿ. ಪರಮೇಶ್ವರ ನಾಯ್ಕ ಅವರು, ಸೆಪ್ಟೆಂಬರ್ 2 ರಿಂದ 4ರ ವರೆಗೆ ಬಳ್ಳಾರಿ, ಕೊಪ್ಪಳ ಹಾಗೂ ವಿಜಯನಗರ ಜಿಲ್ಲೆಗಳಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ.

ಸೆಪ್ಟೆಂಬರ್ 2 ರಂದು ಬೆಂಗಳೂರಿನಿAದ ರಸ್ತೆ ಮೂಲಕ ಬಳ್ಳಾರಿಗೆ ಆಗಮಿಸಲಿರುವ ಅವರು, ಸಂಜೆ 04.30 ಗಂಟೆಗೆ ನಗರದ ಲೋಕೋಪಯೋಗಿ ಇಲಾಖೆಯ ಪ್ರವಾಸಿ ಮಂದಿರದಲ್ಲಿ ಜಿಲ್ಲಾ ಮತ್ತು ತಾಲ್ಲೂಕು ಗ್ಯಾರಂಟಿ ಸಮಿತಿ ಅಧ್ಯಕ್ಷರು ಹಾಗೂ ಅನುಷ್ಠಾನ ಅಧಿಕಾರಿಗಳೊಂದಿಗೆ ಸಭೆ ನಡೆಸುವರು. ಗ್ರಾಮ ಪಂಚಾಯಿತಿ ಮಟ್ಟದ ಗ್ಯಾರಂಟಿ ಅನುಷ್ಠಾನ ಸಮಿತಿ ರಚನೆ ಕುರಿತು ಚರ್ಚಿಸಿದ ಬಳಿಕ ಹೊಸಪೇಟೆಯ ಅಮರಾವತಿ ಅತಿಥಿ ಗೃಹದಲ್ಲಿ ವಾಸ್ತವ್ಯ ಮಾಡುವರು.

ಸೆಪ್ಟೆಂಬರ್ 3 ರಂದು ಬೆಳಿಗ್ಗೆ 10.30 ಗಂಟೆಗೆ ಕೊಪ್ಪಳ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಜಿಲ್ಲಾ ಮತ್ತು ತಾಲ್ಲೂಕು ಗ್ಯಾರಂಟಿ ಸಮಿತಿ ಅಧ್ಯಕ್ಷರು ಹಾಗೂ ಅಧಿಕಾರಿಗಳೊಂದಿಗೆ ಪರಿಶೀಲನಾ ಸಭೆ ನಡೆಸಲಿದ್ದಾರೆ. ಮಧ್ಯಾಹ್ನ 1 ಗಂಟೆಗೆ ಕೊಪ್ಪಳದಲ್ಲಿ ಪತ್ರಿಕಾಗೋಷ್ಠಿ ನಡೆಸಿ, ನಂತರ ಹರಪನಹಳ್ಳಿಗೆ ತೆರಳಿ ವಾಸ್ತವ್ಯ ಮಾಡುವರು.

ಸೆಪ್ಟೆಂಬರ್ 4 ರಂದು ಮಧ್ಯಾಹ್ನ 02.30 ಗಂಟೆಗೆ ವಿಜಯನಗರ ಜಿಲ್ಲೆಯ ಹರಪನಹಳ್ಳಿಯ ಎಡಿಬಿ ಪ್ರಥಮ ದರ್ಜೆ ಕಾಲೇಜಿನ ಸುವರ್ಣ ಮಹೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸುವರು ಎಂದು ಉಪಾಧ್ಯಕ್ಷರ ಆಪ್ತ ಕಾರ್ಯದರ್ಶಿ ತಿಳಿಸಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande