ಬಳ್ಳಾರಿ ಭೂ ಒಡೆತನ ಯೋಜನೆಯಲ್ಲಿ ಅಕ್ರಮ : ಬಿ.ಎಂ. ಸಿದ್ದೇಶ್ ಕುಮಾರ್
ಬಳ್ಳಾರಿ, 31 ಆಗಸ್ಟ್ (ಹಿ.ಸ.) ಆ್ಯಂಕರ್: ಸಮಾಜ ಕಲ್ಯಾಣ ಇಲಾಖೆಯ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ ಅಭಿವೃದ್ಧಿ ನಿಗಮವು ಭೂ ರಹಿತರಿಗೆ ನೀಡುವ `ಭೂ ಒಡೆತನ ಯೋಜನೆ''ಯಲ್ಲಿ ಫಲಾನುಭವಿಗಳ ಆಯ್ಕೆಯಲ್ಲಿ ಬಳ್ಳಾರಿ ಕಚೇರಿಯಲ್ಲಿ ಕೋಟ್ಯಾಂತರ ರೂಪಾಯಿ ಅವ್ಯವಹಾರ ನಡೆದಿದೆ ಎಂದು ಸಾಮಾಜಿಕ
ಭೂ ಹಂಚಿಕೆಯಲ್ಲಿ ಅಕ್ರಮ : ಕೋಟ್ಯಾಂತರ ರೂಪಾಯಿ ಹಗರಣ


ಭೂ ಹಂಚಿಕೆಯಲ್ಲಿ ಅಕ್ರಮ : ಕೋಟ್ಯಾಂತರ ರೂಪಾಯಿ ಹಗರಣ


ಬಳ್ಳಾರಿ, 31 ಆಗಸ್ಟ್ (ಹಿ.ಸ.)

ಆ್ಯಂಕರ್: ಸಮಾಜ ಕಲ್ಯಾಣ ಇಲಾಖೆಯ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ ಅಭಿವೃದ್ಧಿ ನಿಗಮವು ಭೂ ರಹಿತರಿಗೆ ನೀಡುವ `ಭೂ ಒಡೆತನ ಯೋಜನೆ'ಯಲ್ಲಿ ಫಲಾನುಭವಿಗಳ ಆಯ್ಕೆಯಲ್ಲಿ ಬಳ್ಳಾರಿ ಕಚೇರಿಯಲ್ಲಿ ಕೋಟ್ಯಾಂತರ ರೂಪಾಯಿ ಅವ್ಯವಹಾರ ನಡೆದಿದೆ ಎಂದು ಸಾಮಾಜಿಕ ಹೋರಾಟಗಾರ ಬಿ.ಎಂ. ಸಿದ್ದೇಶ್ ಕುಮಾರ್ ಅವರು ಆರೋಪಿಸಿದ್ದಾರೆ.

ಸುದ್ದಿಗಾರರಿಗೆ ಸೋಮವಾರ ಈ ಮಾಹಿತಿ ನೀಡಿ, ಸಮಾಜ ಕಲ್ಯಾಣ ಇಲಾಖೆಯ ಬಳ್ಳಾರಿ ಕಚೇರಿಯ ಉಪನಿರ್ದೇಶಕರಾಗಿದ್ದ ಮಲ್ಲಿಕಾರ್ಜುನ ಬಾರಿಮರ ಅವರು ಸರ್ಕಾರದ ನಿಯಮಗಳನ್ನು ಉಲ್ಲಂಘಿಸಿ 16,16,64,150.(ಹದಿನಾರು ಕೋಟಿ ಹದಿನಾರು ಲಕ್ಷದ ಅರವತ್ತುನಾಲ್ಕು ಸಾವಿರದ ನೂರ ಐವತ್ತು ರೂಪಾಯಿ) ಮೊತ್ತದ ಹಗರಣವನ್ನು ನಡೆಸಿ, ವರ್ಗಾವಣೆ ಪಡೆದಿದ್ದಾರೆ ಎಂದು ಆರೋಪಿಸಿದರು.

ಒಟ್ಟು 101 ಎಕರೆ ಜಮೀನು ಅರ್ಹ ಫಲಾನುಭವಿಗಳಿಗೆ ವಿತರಣೆ ಆಗಬೇಕಾಗಿತ್ತು. ಈ ಕುರಿತು ಪ್ರಚಾರ ನೀಡದೇ, ಆಕ್ಷೇಪಣೆ ಸಲ್ಲಿಸಲು ಮಾತ್ರ ಅವಕಾಶ ನೀಡಿ ಸರ್ಕಾರದ ನಿಯಮಗಳನ್ನು ಉಲ್ಲಂಘನೆ ಮಾಡಿ, ಫಲಾನುಭವಿಗಳನ್ನು ಆಯ್ಕೆ ಮಾಡಿದ್ದಾರೆ ಎಂದು ಆರೋಪಿಸಿದರು.

ಅಧಿಕಾರಿಗಳು ಉತ್ತನೂರು ಗ್ರಾಮದಲ್ಲಿ 19.58 ಎಕರೆ ಜಮೀನನ್ನು ಖರೀದಿಸಿದ್ದಾರೆ. ಫಲಾನುಭವಿಗಳ ಆಯ್ಕೆಯಲ್ಲಿ ಎಲ್ಲಾ ನಿಯಮಗಳನ್ನು ಉಲ್ಲಂಘನೆ ಮಾಡಿ, ವೈಯಕ್ತಿಕ ಹಿತಾಸಕ್ತಿಗಳನ್ನು ಆಧರಿಸಿ ಫಲಾನುಭವಿಗಳನ್ನು ಆಯ್ಕೆ ಮಾಡಿ, ಭೂಮಿಯನ್ನು ಹಂಚಿಕೆ ಮಾಡಿರುವುದು ಸರ್ಕಾರಿ ನಿಯಮಗಳ ಉಲ್ಲಂಘನೆ ಆಗಿದೆ ಎಂದರು.

ಈ ಕುರಿತು ಸರ್ಕಾರ ಉನ್ನತಮಟ್ಟದ ತನಿಖೆ ನಡೆಸಬೇಕು. ತಪ್ಪಿತಸ್ತರ ವಿರುದ್ಧ ಕಠಿಣ ಕ್ರಮಕೈಗೊಳ್ಳಬೇಕು ಎಂದು ಅವರು ಆಗ್ರಹಿಸಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande