ಕೂಲಿ ಕಾರ್ಮಿಕರೊಂದಿಗೆ ಮಣ್ಣು ಹೊತ್ತ ಸಚಿವ ಈಶ್ವರ ಖಂಡ್ರೆ
ಹುಣಸೂರು, 31 ಆಗಸ್ಟ್ (ಹಿ.ಸ.): ಆ್ಯಂಕರ್: ಹುಣಸೂರು ತಾಲೂಕಿನ ಬಿಳಿಕೆರೆ ಹೋಬಳಿಯ ಕರಿಮುದ್ದನಹಳ್ಳಿ ಕೆರೆಯಲ್ಲಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ನಡೆಯುತ್ತಿರುವ ಹೂಳೆತ್ತುವ ಕಾಮಗಾರಿಯನ್ನು ಗ್ರಾಮೀಣಾಭಿವೃದ್ಧಿ ಸಚಿವ ಈಶ್ವರ ಖಂಡ್ರೆ ಸೋಮವಾರ ಖುದ್ದಾಗಿ ಪರಿಶೀಲಿಸಿದರು. ಕಾಮಗಾರಿಯಲ್ಲಿ ತೊಡಗಿದ
ಕೂಲಿ ಕಾರ್ಮಿಕರೊಂದಿಗೆ ಮಣ್ಣು ಹೊತ್ತ ಸಚಿವ ಈಶ್ವರ ಖಂಡ್ರೆ


ಹುಣಸೂರು, 31 ಆಗಸ್ಟ್ (ಹಿ.ಸ.):

ಆ್ಯಂಕರ್:

ಹುಣಸೂರು ತಾಲೂಕಿನ ಬಿಳಿಕೆರೆ ಹೋಬಳಿಯ ಕರಿಮುದ್ದನಹಳ್ಳಿ ಕೆರೆಯಲ್ಲಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ನಡೆಯುತ್ತಿರುವ ಹೂಳೆತ್ತುವ ಕಾಮಗಾರಿಯನ್ನು ಗ್ರಾಮೀಣಾಭಿವೃದ್ಧಿ ಸಚಿವ ಈಶ್ವರ ಖಂಡ್ರೆ ಸೋಮವಾರ ಖುದ್ದಾಗಿ ಪರಿಶೀಲಿಸಿದರು.

ಕಾಮಗಾರಿಯಲ್ಲಿ ತೊಡಗಿದ್ದ ಕೂಲಿ ಕಾರ್ಮಿಕರೊಂದಿಗೆ ಸಚಿವರು ಮಾತುಕತೆ ನಡೆಸಿ, ಅವರ ಸಮಸ್ಯೆಗಳನ್ನು ಆಲಿಸಿದರು. ಬಳಿಕ ಕಾರ್ಮಿಕರೊಂದಿಗೆ ಸೇರಿಕೊಂಡು ಮಂಕರಿಯಲ್ಲಿ ಮಣ್ಣು ಹೊತ್ತು ಟ್ರ್ಯಾಕ್ಟರ್‌ಗೆ ತುಂಬಿಸುವ ಮೂಲಕ ಶ್ರಮದಾನದಲ್ಲಿ ಪಾಲ್ಗೊಂಡರು.

ದುಡಿಯುವ ಕೈಗಳಿಗೆ ಗೌರವ ನೀಡುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ ಎಂದು ಈಶ್ವರ ಖಂಡ್ರೆ ಹೇಳಿದರು.

ವಿಬಿಜಿ ರಾಮ್ ಜಿ ಯೋಜನೆಯಡಿ ಅರ್ಹ ಕುಟುಂಬಗಳಿಗೆ 125 ದಿನಗಳ ಉದ್ಯೋಗ ಹಾಗೂ ಪ್ರತಿದಿನ ₹382 ಕೂಲಿ ನೀಡಲಾಗುತ್ತಿದೆ. ಕೂಲಿ ಹಣವನ್ನು 15 ದಿನಗಳ ಒಳಗಾಗಿ ಕಾರ್ಮಿಕರಿಗೆ ಪಾವತಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಶಾಸಕ ಹರೀಶ್ ಗೌಡ, ಮಾಜಿ ಶಾಸಕ ಮಂಜುನಾಥ್, ಅಧಿಕಾರಿಗಳು, ಜನಪ್ರತಿನಿಧಿಗಳು ಹಾಗೂ ಕೂಲಿ ಕಾರ್ಮಿಕರು ಉಪಸ್ಥಿತರಿದ್ದರು.

---------------

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande