ಪ್ರಣಬ್ ಮುಖರ್ಜಿಯವರ ಕೊಡುಗೆ ಸ್ಮರಿಸಿದ ಮಲ್ಲಿಕಾರ್ಜುನ ಖರ್ಗೆ
ನವದೆಹಲಿ, 31 ಆಗಸ್ಟ್ (ಹಿ.ಸ.): ಆ್ಯಂಕರ್:ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿಯವರನ್ನು ಸ್ಮರಿಸಿರುವ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರಾಷ್ಟ್ರ ನಿರ್ಮಾಣಕ್ಕೆ ಅವರು ನೀಡಿದ ಅಪಾರ ಕೊಡುಗೆಯನ್ನು ಶ್ಲಾಘಿಸಿದ್ದಾರೆ. ಪ್ರಣಬ್ ಮುಖರ್ಜಿ ಅವರ ಪುಣ್ಯಸ್ಮರಣೆ ಅಂಗವಾಗಿ ಎಕ್ಸ್‌ನಲ್ಲಿ ಪೋಸ್ಟ್
ಮಲ್ಲಿಕಾರ್ಜುನ ಖರ್ಗೆ ಎಕ್ಸ್ ಪೋಸ್ಟ್


ನವದೆಹಲಿ, 31 ಆಗಸ್ಟ್ (ಹಿ.ಸ.):

ಆ್ಯಂಕರ್:ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿಯವರನ್ನು ಸ್ಮರಿಸಿರುವ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರಾಷ್ಟ್ರ ನಿರ್ಮಾಣಕ್ಕೆ ಅವರು ನೀಡಿದ ಅಪಾರ ಕೊಡುಗೆಯನ್ನು ಶ್ಲಾಘಿಸಿದ್ದಾರೆ.

ಪ್ರಣಬ್ ಮುಖರ್ಜಿ ಅವರ ಪುಣ್ಯಸ್ಮರಣೆ ಅಂಗವಾಗಿ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಖರ್ಗೆ, “ಶಾಂತಿ ನಮ್ಮ ಸಿದ್ಧಾಂತವಾಗಿರಬೇಕು, ಪ್ರಗತಿ ನಮ್ಮ ದಿಗಂತವಾಗಿರಬೇಕು” ಎಂಬ ಪ್ರಣಬ್ ಮುಖರ್ಜಿಯವರ ಮಾತುಗಳನ್ನು ಉಲ್ಲೇಖಿಸಿದ್ದಾರೆ.

ಐದು ದಶಕಗಳಿಗೂ ಹೆಚ್ಚು ಕಾಲ ಅವರು ಭಾರತದ ಸಾರ್ವಜನಿಕ ಜೀವನ ಹಾಗೂ ಕಾಂಗ್ರೆಸ್ ಪಕ್ಷದೊಂದಿಗೆ ಅವಿಭಾಜ್ಯವಾಗಿ ಗುರುತಿಸಿಕೊಂಡಿದ್ದರು. ಅವರ ವಿವೇಕ, ಅಪಾರ ಅನುಭವ ಹಾಗೂ ವಿವಿಧ ವಿಷಯಗಳ ಕುರಿತ ಆಳವಾದ ಜ್ಞಾನವು ಅವರು ನಿರ್ವಹಿಸಿದ ಪ್ರತಿಯೊಂದು ಸಾಂವಿಧಾನಿಕ ಮತ್ತು ಸಾರ್ವಜನಿಕ ಹುದ್ದೆಯ ಕಾರ್ಯಚಟುವಟಿಕೆಗಳನ್ನು ಶ್ರೀಮಂತಗೊಳಿಸಿತ್ತು. ದೇಶದ ಮೇಲೆ ಅವರು ಅಚ್ಚಳಿಯದ ಛಾಪು ಮೂಡಿಸಿದ್ದಾರೆ ಎಂದು ಖರ್ಗೆ ಹೇಳಿದ್ದಾರೆ.

ರಾಷ್ಟ್ರ ನಿರ್ಮಾಣದಲ್ಲಿ ಪ್ರಣಬ್ ಮುಖರ್ಜಿಯವರ ಸೇವೆ ಮತ್ತು ಕೊಡುಗೆ ಸದಾ ಸ್ಮರಣೀಯವಾಗಿರಲಿದೆ ಎಂದು ಅವರು ತಿಳಿಸಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande