ತಾಷ್ಕೆಂಟ್ ಸ್ಟೇಟ್ ಯೂನಿವರ್ಸಿಟಿ ಆಫ್ ಓರಿಯೆಂಟಲ್ ಸ್ಟಡೀಸ್ನ ಮಹಾತ್ಮ ಗಾಂಧಿ ಕೇಂದ್ರಕ್ಕೆ ಪ್ರಧಾನಿ ಮೋದಿ ಭೇಟಿ
ನವದೆಹಲಿ, 31 ಆಗಸ್ಟ್ (ಹಿ.ಸ.): ಆ್ಯಂಕರ್:ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಉಜ್ಬೇಕಿಸ್ತಾನದ ರಾಜಧಾನಿ ತಾಷ್ಕೆಂಟ್‌ನಲ್ಲಿರುವ ತಾಷ್ಕೆಂಟ್ ಸ್ಟೇಟ್ ಯೂನಿವರ್ಸಿಟಿ ಆಫ್ ಓರಿಯೆಂಟಲ್ ಸ್ಟಡೀಸ್‌ನ ಮಹಾತ್ಮ ಗಾಂಧಿ ಕೇಂದ್ರಕ್ಕೆ ಭೇಟಿ ನೀಡಿದರು. ಸೋಮವಾರ ‘ಎಕ್ಸ್’ನಲ್ಲಿ ತಮ್ಮ ಭೇಟಿಯ ಕುರಿತು ಮಾಹಿತಿ ಹಂ
ताशकंद स्टेट यूनिवर्सिटी ऑफ ओरिएंटल स्टडीज की एक झलक।


ನವದೆಹಲಿ, 31 ಆಗಸ್ಟ್ (ಹಿ.ಸ.):

ಆ್ಯಂಕರ್:ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಉಜ್ಬೇಕಿಸ್ತಾನದ ರಾಜಧಾನಿ ತಾಷ್ಕೆಂಟ್‌ನಲ್ಲಿರುವ ತಾಷ್ಕೆಂಟ್ ಸ್ಟೇಟ್ ಯೂನಿವರ್ಸಿಟಿ ಆಫ್ ಓರಿಯೆಂಟಲ್ ಸ್ಟಡೀಸ್‌ನ ಮಹಾತ್ಮ ಗಾಂಧಿ ಕೇಂದ್ರಕ್ಕೆ ಭೇಟಿ ನೀಡಿದರು.

ಸೋಮವಾರ ‘ಎಕ್ಸ್’ನಲ್ಲಿ ತಮ್ಮ ಭೇಟಿಯ ಕುರಿತು ಮಾಹಿತಿ ಹಂಚಿಕೊಂಡಿರುವ ಪ್ರಧಾನಿ ಮೋದಿ, ಭಾನುವಾರ ಮಹಾತ್ಮ ಗಾಂಧಿ ಕೇಂದ್ರಕ್ಕೆ ನೀಡಿದ ಭೇಟಿ ಹಲವು ಕಾರಣಗಳಿಂದ ಆಸಕ್ತಿದಾಯಕವಾಗಿತ್ತು ಎಂದು ತಿಳಿಸಿದ್ದಾರೆ. ಕೇಂದ್ರದಲ್ಲಿ ಭಾರತಶಾಸ್ತ್ರ ಅಧ್ಯಯನಕ್ಕೆ ಸಂಬಂಧಿಸಿದಂತೆ ಉತ್ತಮ ವಾತಾವರಣ ಕಂಡುಬಂದಿತು. ಭಾರತವನ್ನು ಅಧ್ಯಯನ ಮಾಡಲು ಹಾಗೂ ಅದರ ಬಗ್ಗೆ ತಿಳಿದುಕೊಳ್ಳಲು ಜನರಲ್ಲಿ ಅಪಾರ ಆಸಕ್ತಿ ಇದೆ ಎಂದು ಹೇಳಿದ್ದಾರೆ.

ಮಹಾತ್ಮ ಗಾಂಧೀಜಿಯವರ ಜೀವನ ಮತ್ತು ವಿಚಾರಗಳ ಕುರಿತು ಕೇಂದ್ರದಲ್ಲಿ ಸಾಕಷ್ಟು ಅಧ್ಯಯನ ಹಾಗೂ ಸಂಶೋಧನೆ ನಡೆದಿದೆ. ಅಲ್ಲದೆ, ಸ್ಥಳೀಯ ಜನರಲ್ಲಿ ತಮಿಳು ಸಂಸ್ಕೃತಿಯ ಬಗ್ಗೆಯೂ ಆಸಕ್ತಿ ಹೆಚ್ಚುತ್ತಿರುವುದು ಗಮನಾರ್ಹವಾಗಿದೆ ಎಂದು ಪ್ರಧಾನಿ ತಿಳಿಸಿದ್ದಾರೆ.

ಭೇಟಿಯ ಸಂದರ್ಭದಲ್ಲಿ ವಿದ್ಯಾರ್ಥಿಗಳು ತಾವು ರಚಿಸಿರುವ ಕೆಲವು ಕವಿತೆಗಳ ಸಾಲುಗಳನ್ನು ವಾಚಿಸಿದರು. ವಿದ್ಯಾರ್ಥಿಗಳ ಉತ್ಸಾಹ ಹಾಗೂ ಭಾರತದ ಸಂಸ್ಕೃತಿ, ಪರಂಪರೆ ಮತ್ತು ಸಾಹಿತ್ಯದ ಬಗೆಗಿನ ಆಸಕ್ತಿಯನ್ನು ಪ್ರಧಾನಿ ಮೋದಿ ಮೆಚ್ಚಿಕೊಂಡರು.

ಉಜ್ಬೇಕಿಸ್ತಾನ, ಕಿರ್ಗಿಸ್ತಾನ ಪ್ರವಾಸ

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಶನಿವಾರದಿಂದ ಉಜ್ಬೇಕಿಸ್ತಾನ ಮತ್ತು ಕಿರ್ಗಿಸ್ತಾನಕ್ಕೆ ನಾಲ್ಕು ದಿನಗಳ ಪ್ರವಾಸ ಕೈಗೊಂಡಿದ್ದಾರೆ. ಪ್ರವಾಸದ ಸಂದರ್ಭದಲ್ಲಿ ಉಜ್ಬೇಕಿಸ್ತಾನದ ಅಧ್ಯಕ್ಷ ಶವ್ಕತ್ ಮಿರ್ಜಿಯೋಯೆವ್ ಅವರೊಂದಿಗೆ ದ್ವಿಪಕ್ಷೀಯ ಸಂಬಂಧಗಳ ಕುರಿತು ಮಾತುಕತೆ ನಡೆಸಲಿದ್ದಾರೆ.

ವ್ಯಾಪಾರ ಮತ್ತು ಹೂಡಿಕೆ, ಡಿಜಿಟಲ್ ಸಂಪರ್ಕ, ರಕ್ಷಣಾ ಕ್ಷೇತ್ರ ಹಾಗೂ ಇಂಧನ ಕ್ಷೇತ್ರಗಳಲ್ಲಿ ಉಭಯ ದೇಶಗಳ ನಡುವಿನ ಸಹಕಾರವನ್ನು ಮತ್ತಷ್ಟು ಬಲಪಡಿಸುವ ಕುರಿತು ಚರ್ಚೆ ನಡೆಯಲಿದೆ. ಈ ಭೇಟಿಯ ಮೂಲಕ ಭಾರತ ಮತ್ತು ಮಧ್ಯ ಏಷ್ಯಾ ರಾಷ್ಟ್ರಗಳ ನಡುವಿನ ಬಾಂಧವ್ಯವನ್ನು ಮತ್ತಷ್ಟು ಗಟ್ಟಿಗೊಳಿಸುವ ನಿರೀಕ್ಷೆಯಿದೆ.

--------

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande