
ನವದೆಹಲಿ, 31 ಆಗಸ್ಟ್ (ಹಿ.ಸ.):
ಆ್ಯಂಕರ್:ಪ್ರಸಕ್ತ ಹಣಕಾಸು ವರ್ಷದ ಮೊದಲ ತ್ರೈಮಾಸಿಕದಲ್ಲಿ ದೇಶದ ಜಿಡಿಪಿ ಶೇ.7.8ರಷ್ಟು ಬೆಳವಣಿಗೆ ದಾಖಲಿಸಿರುವುದು ಉತ್ಸಾಹದಾಯಕ ಬೆಳವಣಿಗೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ತೈಲ ಬೆಲೆ ಏರಿಳಿತ, ಪೂರೈಕೆ ಸರಪಳಿಯಲ್ಲಿನ ವ್ಯತ್ಯಯ ಹಾಗೂ ಜಾಗತಿಕ ಅನಿಶ್ಚಿತತೆಗಳ ನಡುವೆಯೂ ಏಪ್ರಿಲ್‌ನಿಂದ ಜೂನ್‌ವರೆಗಿನ ಮೊದಲ ತ್ರೈಮಾಸಿಕದಲ್ಲಿ ಶೇ.7.8ರಷ್ಟು ವಾಸ್ತವ ಜಿಡಿಪಿ ಬೆಳವಣಿಗೆ ಸಾಧಿಸಿರುವುದು ದೊಡ್ಡ ಸಾಧನೆಯಾಗಿದೆ. ದೇಶದ ಜನರ ಸಾಮೂಹಿಕ ಶಕ್ತಿಯಿಂದ ಈ ಬೆಳವಣಿಗೆ ಸಾಧ್ಯವಾಗಿದೆ ಎಂದು ಅವರು ಸಾಮಾಜಿಕ ಜಾಲತಾಣ ‘ಎಕ್ಸ್’ನಲ್ಲಿ ತಿಳಿಸಿದ್ದಾರೆ.
ದೇಶದ ಪ್ರಗತಿ ಕುರಿತು ಅನುಮಾನ ವ್ಯಕ್ತಪಡಿಸಿದ್ದ ನಿರಾಶಾವಾದಿಗಳು ತಪ್ಪೆಂದು ಸಾಬೀತಾಗಿದೆ. ಭಾರತ ಮತ್ತೊಮ್ಮೆ ಅಭಿವೃದ್ಧಿಯ ಪಥದಲ್ಲಿ ಮುನ್ನಡೆದಿದೆ ಎಂದು ಮೋದಿ ಹೇಳಿದ್ದಾರೆ.
ಇತ್ತೀಚೆಗೆ ಬಿಡುಗಡೆಯಾದ ಅಂಕಿಅಂಶಗಳ ಪ್ರಕಾರ, 2026-27ನೇ ಹಣಕಾಸು ವರ್ಷದ ಮೊದಲ ತ್ರೈಮಾಸಿಕದಲ್ಲಿ ಭಾರತದ ವಾಸ್ತವ ಜಿಡಿಪಿ ₹81.36 ಲಕ್ಷ ಕೋಟಿ ಎಂದು ಅಂದಾಜಿಸಲಾಗಿದೆ. ಕಳೆದ ಹಣಕಾಸು ವರ್ಷದ ಇದೇ ಅವಧಿಯಲ್ಲಿ ₹75.46 ಲಕ್ಷ ಕೋಟಿ ಇದ್ದ ಜಿಡಿಪಿಗೆ ಹೋಲಿಸಿದರೆ ಶೇ.7.8ರಷ್ಟು ಹೆಚ್ಚಳವಾಗಿದೆ.
--------
ಹಿಂದೂಸ್ತಾನ್ ಸಮಾಚಾರ್ / Rakesh.M.B.