
ಬಳ್ಳಾರಿ, 31 ಆಗಸ್ಟ್ (ಹಿ.ಸ.)
ಆ್ಯಂಕರ್: ನಗರದ ಈದ್ಗಾ ರಸ್ತೆಯ ಹಿರಾಳ್ ಕುಡಂನ ಸರ್ಕಾರಿ ಆದರ್ಶ ವಿದ್ಯಾಲಯದಲ್ಲಿ 6 ರಿಂದ 10 ನೇ ತರಗತಿಯ ಇಂಗ್ಲೀಷ್ ಮಾಧ್ಯಮದ ಶಾಲೆಯಲ್ಲಿ ಆಂಗ್ಲ ಹಾಗೂ ಕನ್ನಡ ಭಾಷಾ ಅತಿಥಿ ಶಿಕ್ಷಕರ ಹುದ್ದೆಗೆ ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.
ಶಾಲೆಯು ಆಂಗ್ಲ ಭಾಷೆಯ ಮಾಧ್ಯಮವಾಗಿದ್ದು, 6ನೇ ತರಗತಿ ಯಿಂದ 10ನೇ ತರಗತಿಯವರೆಗೆ ಒಟ್ಟು 557 ವಿದ್ಯಾರ್ಥಿಗಳಿದ್ದಾರೆ. ಎನ್ಸಿಆರ್ಟಿ ಪಠ್ಯಕ್ರಮ ಹೊಂದಿರುವುದರಿ0ದ ಆಂಗ್ಲ ಭಾಷೆ ವಿಷಯ ಭೋದಿಸುವ ಆಂಗ್ಲ ಭಾಷಾ ಅತಿಥಿ ಶಿಕ್ಷಕ ಹಾಗೂ ಕನ್ನಡ ಭಾಷಾ ಅತಿಥಿ ಶಿಕ್ಷಕ ಹುದ್ದೆ ಖಾಲಿ ಇದ್ದು, ಆಸಕ್ತ ಅರ್ಹ ಶಿಕ್ಷಕರು ಅರ್ಜಿ ಸಲ್ಲಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಮೊ.7892989253 ಗೆ ಸಂಪರ್ಕಿಸಬಹುದು ಎಂದು ಸರ್ಕಾರಿ ಆದರ್ಶ ವಿದ್ಯಾಲಯದ ಮುಖ್ಯೋಪಾಧ್ಯಯರು ತಿಳಿಸಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್