
ಬೆಂಗಳೂರು, 31 ಆಗಸ್ಟ್ (ಹಿ.ಸ.)
ಆ್ಯಂಕರ್:
ಹಾಸನ ನಗರದ ಗ್ರೀನ್ಫೀಲ್ಡ್ ವಿಮಾನ ನಿಲ್ದಾಣ ಕಾಮಗಾರಿಯ ಪ್ರಗತಿ ಕುರಿತು ಅಬಕಾರಿ ಸಚಿವರು ಹಾಗೂ ಹಾಸನ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಂ. ಶಿವಲಿಂಗೇಗೌಡ ಅವರ ಅಧ್ಯಕ್ಷತೆಯಲ್ಲಿ ಸೋಮವಾರ ವಿಕಾಸಸೌಧದಲ್ಲಿ ಸಭೆ ನಡೆಯಿತು.
ಸಭೆಯಲ್ಲಿ ವಿಮಾನ ನಿಲ್ದಾಣ ಕಾಮಗಾರಿಯ ಪ್ರಸ್ತುತ ಪ್ರಗತಿ, ಕೈಗೊಳ್ಳಬೇಕಿರುವ ಮುಂದಿನ ಕ್ರಮಗಳು ಹಾಗೂ ಸಂಬಂಧಿತ ಇಲಾಖೆಗಳ ಸಮನ್ವಯ ಕುರಿತು ಅಧಿಕಾರಿಗಳೊಂದಿಗೆ ಸಚಿವರು ಪರಿಶೀಲನೆ ನಡೆಸಿದರು.
ಹಾಸನ ಜಿಲ್ಲಾಧಿಕಾರಿ ಕೆ.ಎಸ್. ಲತಾಕುಮಾರಿ, ಮೂಲಸೌಕರ್ಯ ಅಭಿವೃದ್ಧಿ, ಬಂದರುಗಳು ಮತ್ತು ಒಳನಾಡು ಜಲಸಾರಿಗೆ ಇಲಾಖೆ ಹಾಗೂ ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ (ಕೆಐಎಡಿಬಿ) ಅಧಿಕಾರಿಗಳು ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.
---------------
ಹಿಂದೂಸ್ತಾನ್ ಸಮಾಚಾರ್ / BHARGAVI G R