ಮಲ್ಲಸಂದ್ರದಲ್ಲಿ ಕಸ ಸಂಗ್ರಹಣೆ ಪರಿಶೀಲಿಸಿದ ಸಚಿವ ಕೃಷ್ಣ ಬೈರೇಗೌಡ
ಸಚಿವ ಕೃಷ್ಣ ಬೈರೇಗೌಡ
krishna-byrgowda-inspects-garbage-collection-solid-waste-management-in-mallasandra


ಬೆಂಗಳೂರು, 31 ಆಗಸ್ಟ್ (ಹಿ.ಸ.)

ಆ್ಯಂಕರ್:

ಗ್ರೇಟರ್ ಬೆಂಗಳೂರು ಅಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಅವರು ಸೋಮವಾರ ಮುಂಜಾನೆ ದಾಸರಹಳ್ಳಿ ವಿಧಾನಸಭಾ ಕ್ಷೇತ್ರದ ಮಲ್ಲಸಂದ್ರ ಪ್ರದೇಶಕ್ಕೆ ಭೇಟಿ ನೀಡಿ ಕಸ ಸಂಗ್ರಹಣೆ ಹಾಗೂ ಘನತ್ಯಾಜ್ಯ ನಿರ್ವಹಣಾ ಕಾರ್ಯಗಳ ಪರಿಶೀಲನೆ ನಡೆಸಿದರು.

ಈ ವೇಳೆ ಸಚಿವರು ಸ್ಥಳದಲ್ಲಿನ ಕಸ ಸಂಗ್ರಹಣೆ ವ್ಯವಸ್ಥೆ ಹಾಗೂ ಘನತ್ಯಾಜ್ಯ ನಿರ್ವಹಣೆಯ ಪ್ರಕ್ರಿಯೆಗಳನ್ನು ಪರಿಶೀಲಿಸಿದರು. ಸ್ಥಳೀಯ ನಿವಾಸಿಗಳಿಗೆ ಸಮಯಕ್ಕೆ ಸರಿಯಾಗಿ ಹಾಗೂ ಪರಿಣಾಮಕಾರಿಯಾಗಿ ಕಸ ಸಂಗ್ರಹಣೆ ಸೇವೆ ಒದಗಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಪ್ರದೇಶದಲ್ಲಿ ಸ್ವಚ್ಛತೆ ಕಾಪಾಡುವುದು, ಕಸ ಸಂಗ್ರಹಣೆಯ ಕಾರ್ಯಕ್ಷಮತೆ ಹೆಚ್ಚಿಸುವುದು ಹಾಗೂ ಸಾರ್ವಜನಿಕರಿಗೆ ಸ್ವಚ್ಛ ಮತ್ತು ಆರೋಗ್ಯಕರ ಪರಿಸರ ಕಲ್ಪಿಸುವ ನಿಟ್ಟಿನಲ್ಲಿ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಸಚಿವರು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಪರಿಶೀಲನೆ ಸಂದರ್ಭದಲ್ಲಿ ಸ್ಥಳೀಯ ಮಟ್ಟದ ತ್ಯಾಜ್ಯ ನಿರ್ವಹಣೆ ಕುರಿತು ಅಧಿಕಾರಿಗಳೊಂದಿಗೆ ಸಚಿವರು ಮಾಹಿತಿ ಪಡೆದುಕೊಂಡರು.

---------------

ಹಿಂದೂಸ್ತಾನ್ ಸಮಾಚಾರ್ / BHARGAVI G R


 rajesh pande