
ಕೊಪ್ಪಳ, 08 ಆಗಸ್ಟ್ (ಹಿ.ಸ.)
ಆ್ಯಂಕರ್ : ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷಿ ಯುವನಿಧಿ ಯೋಜನೆಗೆ ಅರ್ಜಿ ಸಲ್ಲಿಸಲು ಯಾವುದೇ ಅಂತಿಮ ದಿನಾಂಕ ನಿಗದಿಪಡಿಸಿಲ್ಲ ಎಂದು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗಾಧಿಕಾರಿ ಅವರು ತಿಳಿಸಿದ್ದಾರೆ.
ಯುವನಿಧಿ ಯೋಜನೆಯ ನೋಂದಣಿ ಪ್ರಕ್ರಿಯೆಯು ಸೇವಾ ಸಿಂಧು ಪೋರ್ಟಲ್ನಲ್ಲಿ ನಿರಂತರವಾಗಿ ಚಾಲನೆಯಲ್ಲಿದ್ದು, 2023ರಿಂದ ಇಲ್ಲಿಯವರೆಗೆ ಪದವಿ, ಸ್ನಾತಕೋತ್ತರ ಪದವಿ ಹಾಗೂ ಡಿಪ್ಲೋಮಾ ತೇರ್ಗಡೆಯಾಗಿ ಇನ್ನೂ ಅರ್ಜಿ ಸಲ್ಲಿಸದ ಅರ್ಹ ನಿರುದ್ಯೋಗಿ ಅಭ್ಯರ್ಥಿಗಳು ಸೇವಾ ಸಿಂಧು ಪೋರ್ಟ್ಲ್ ವೆಬ್ಸೈಟ್ http://sevasindhugs.karnataka.gov.in ಮೂಲಕ ಗ್ರಾಮ ಒನ್, ಕರ್ನಾಟಕ ಒನ್ ಅಥವಾ ಬಾಪೂಜಿ ಸೇವಾ ಕೇಂದ್ರಗಳ ಮೂಲಕ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.
ಯೋಜನೆಯ ಫಲಾನುಭವಿಗಳು ಪ್ರತಿ ತಿಂಗಳ 1 ರಿಂದ 25ನೇ ದಿನಾಂಕದೊಳಗೆ ಕಡ್ಡಾಯವಾಗಿ ಸ್ವಯಂ ಘೋಷಣೆ (ಸೆಲ್ಫ್ ಡಿಕ್ಲರೇಶನ್) ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಕೊಪ್ಪಳವನ್ನು ಸಂಪರ್ಕಿಸಬಹುದು. ಅಲ್ಲದೆ, ಯುವನಿಧಿ ಸಹಾಯವಾಣಿ ಸಂಖ್ಯೆ 1800 599 7154ಗೆ ಕರೆ ಮಾಡಿ ಅಗತ್ಯ ಮಾಹಿತಿ ಪಡೆಯಬಹುದಾಗಿದೆ ಎಂದು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ತಿಳಿಸಿದೆ.
---------------
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್