
ಬೆಂಗಳೂರು, 09 ಆಗಸ್ಟ್ (ಹಿ.ಸ.):
ಆ್ಯಂಕರ್:ವಿಧಾನ ಪರಿಷತ್ತಿನ ಸಭಾಪತಿ ಬಸವರಾಜ ಹೊರಟ್ಟಿ ಅವರ ಮೇಲೆ ಗೂಂಡಾಗಿರಿ ಪ್ರದರ್ಶಿಸಿ, ಬೆದರಿಕೆ ಹಾಕಿ ಬಲವಂತವಾಗಿ ರಾಜೀನಾಮೆ ಪಡೆಯಲಾಗಿದ್ದು, ಈ ಕುರಿತು ಸೂಕ್ತ ಕ್ರಮ ಕೈಗೊಳ್ಳುವಂತೆ ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ನೇತೃತ್ವದಲ್ಲಿ ಬಿಜೆಪಿ ಮತ್ತು ಜೆಡಿಎಸ್ ನಾಯಕರು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ದೂರು ಸಲ್ಲಿಸಿದ್ದಾರೆ.
ಹೊರಟ್ಟಿ ಅವರಿಂದ ಬಲವಂತವಾಗಿ ರಾಜೀನಾಮೆ ಪಡೆಯಲಾಗಿದೆ ಎಂಬ ಆರೋಪದ ಬಗ್ಗೆ ತನಿಖೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ರಾಜ್ಯಪಾಲರಿಗೆ ಸಲ್ಲಿಸಿದ ಮನವಿಯಲ್ಲಿ ಒತ್ತಾಯಿಸಲಾಗಿದೆ.
ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯರಾದ ಪಿ.ಎಚ್. ಪೂಜಾರ್, ಟಿ.ಎ. ಶರವಣ ಹಾಗೂ ಗೋಪಿನಾಥ್ ರೆಡ್ಡಿ ಉಪಸ್ಥಿತರಿದ್ದರು.
---------------
ಹಿಂದೂಸ್ತಾನ್ ಸಮಾಚಾರ್ / Rakesh.M.B.