
ಬಾಗಲಕೋಟೆ, 09 ಆಗಸ್ಟ್ (ಹಿ.ಸ.)
ಆ್ಯಂಕರ್ : ಬಾಗಲಕೋಟೆ ಜಿಲ್ಲೆಯ
ರಬಕವಿ ನಗರದ ಬಸ್ ನಿಲ್ದಾಣದಲ್ಲಿ ಬಾಕಿ ಉಳಿದಿರುವ ಡಾಂಬರೀಕರಣ ಕಾಮಗಾರಿಯನ್ನು ಶೀಘ್ರವಾಗಿ ಪೂರ್ಣಗೊಳಿಸುವಂತೆ ತೇರದಾಳ ಮತಕ್ಷೇತ್ರದ ಕಾಂಗ್ರೆಸ್ ಮುಖಂಡ ಸಿದ್ದು ಕೊಣ್ಣೂರ ಅವರು ಅಧಿಕಾರಿಗಳಿಗೆ ಸೂಚಿಸಿದರು.
ರಬಕವಿ ನಗರದ ಬಸ್ ಸ್ಟಾಪ್ ಪ್ರದೇಶದಲ್ಲಿ ಬಾಕಿ ಉಳಿದಿರುವ ಡಾಂಬರೀಕರಣ ಕಾಮಗಾರಿಯಿಂದ ಸಾರ್ವಜನಿಕರು, ಪ್ರಯಾಣಿಕರು ಹಾಗೂ ವಾಹನ ಸವಾರರು ಎದುರಿಸುತ್ತಿರುವ ಸಮಸ್ಯೆಗಳ ಹಿನ್ನೆಲೆಯಲ್ಲಿ ಸಿದ್ದು ಅಣ್ಣಾ ಕೊಣ್ಣೂರ ಅವರು ನಗರದ ಮುಖಂಡರು ಹಾಗೂ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಸ್ಥಳಕ್ಕೆ ಭೇಟಿ ನೀಡಿ ಕಾಮಗಾರಿಯ ಪ್ರಸ್ತುತ ಸ್ಥಿತಿಯನ್ನು ಪರಿಶೀಲಿಸಿದರು.
ಈ ಸಂದರ್ಭದಲ್ಲಿ ಸ್ಥಳೀಯ ಮುಖಂಡರು ಹಾಗೂ ಸಾರ್ವಜನಿಕರಿಂದ ಕಾಮಗಾರಿಗೆ ಸಂಬಂಧಿಸಿದ ಮಾಹಿತಿ ಪಡೆದುಕೊಂಡ ಅವರು, ಬಸ್ ನಿಲ್ದಾಣದ ಪ್ರದೇಶವು ಪ್ರತಿದಿನ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಸಂಚರಿಸುವ ಪ್ರಮುಖ ಸ್ಥಳವಾಗಿದ್ದು, ಇಲ್ಲಿ ರಸ್ತೆ ಕಾಮಗಾರಿ ಅಪೂರ್ಣವಾಗಿರುವುದರಿಂದ ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ ಎಂದು ಗಮನ ಸೆಳೆದರು.
ಬಾಕಿ ಉಳಿದಿರುವ ಡಾಂಬರೀಕರಣ ಕಾಮಗಾರಿಯನ್ನು ಯಾವುದೇ ಕಾರಣಕ್ಕೂ ವಿಳಂಬ ಮಾಡದೆ ಅಗತ್ಯ ಕ್ರಮ ಕೈಗೊಂಡು ಶೀಘ್ರವಾಗಿ ಆರಂಭಿಸಬೇಕು. ಕಾಮಗಾರಿಯ ಗುಣಮಟ್ಟದಲ್ಲಿ ಯಾವುದೇ ರಾಜಿ ಮಾಡಿಕೊಳ್ಳದೆ, ಸಾರ್ವಜನಿಕರಿಗೆ ಅನುಕೂಲವಾಗುವ ರೀತಿಯಲ್ಲಿ ಕಾಮಗಾರಿಯನ್ನು ಪೂರ್ಣಗೊಳಿಸಬೇಕು ಎಂದು ಅಧಿಕಾರಿಗಳಿಗೆ ಅವರು ಸೂಚನೆ ನೀಡಿದರು.
ಅಲ್ಲದೇ, ಕಾಮಗಾರಿಗೆ ಸಂಬಂಧಿಸಿದ ತಾಂತ್ರಿಕ ಹಾಗೂ ಆಡಳಿತಾತ್ಮಕ ಸಮಸ್ಯೆಗಳಿದ್ದರೆ ಅವುಗಳನ್ನು ಕೂಡಲೇ ಬಗೆಹರಿಸಿ ಕಾಮಗಾರಿ ಆರಂಭಕ್ಕೆ ಅಗತ್ಯ ಕ್ರಮ ಕೈಗೊಳ್ಳುವಂತೆ ತಿಳಿಸಿದರು.
ಸ್ಥಳೀಯರ ಸಮಸ್ಯೆಗಳಿಗೆ ಸ್ಪಂದಿಸಿ, ನಗರದ ಮೂಲಸೌಕರ್ಯ ಅಭಿವೃದ್ಧಿಗೆ ಆದ್ಯತೆ ನೀಡಲಾಗುವುದು. ಸಾರ್ವಜನಿಕರಿಗೆ ಸುಗಮ ಸಂಚಾರ ಹಾಗೂ ಉತ್ತಮ ಸೌಲಭ್ಯ ಕಲ್ಪಿಸುವ ನಿಟ್ಟಿನಲ್ಲಿ ಬಾಕಿ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸಲು ಸಂಬಂಧಪಟ್ಟ ಇಲಾಖೆಗಳೊಂದಿಗೆ ನಿರಂತರವಾಗಿ ಸಮನ್ವಯ ಸಾಧಿಸಲಾಗುವುದು ಎಂದು ಸಿದ್ದು ಕೊಣ್ಣೂರ ಅವರು ತಿಳಿಸಿದರು.
ಈ ಸಂದರ್ಭದಲ್ಲಿ ನಗರದ ಮುಖಂಡರು, ಸ್ಥಳೀಯರು ಹಾಗೂ ಸಂಬಂಧಪಟ್ಟ ಅಧಿಕಾರಿಗಳು ಉಪಸ್ಥಿತರಿದ್ದರು.
---------------
ಹಿಂದೂಸ್ತಾನ್ ಸಮಾಚಾರ್ / jyothi deshpande