ಬನಹಟ್ಟಿಯಲ್ಲಿ ಪ್ರಜಾ ಸೌಧ ನಿರ್ಮಾಣಕ್ಕೆ ಆಗ್ರಹಿಸಿ ವಿಶೇಷ ಪೂಜೆ
ಬಾಗಲಕೋಟೆ, 09 ಆಗಸ್ಟ್ (ಹಿ.ಸ.) ಆ್ಯಂಕರ್ : ಬಾಗಲಕೋಟೆ ಜಿಲ್ಲೆಯ ಬನಹಟ್ಟಿ ನಗರದಲ್ಲಿ ಪ್ರಜಾ ಸೌಧ ನಿರ್ಮಾಣ ಮಾಡಬೇಕೆಂಬ ಬಹುದಿನಗಳ ಬೇಡಿಕೆಗೆ ಮತ್ತಷ್ಟು ಬಲ ತುಂಬುವ ನಿಟ್ಟಿನಲ್ಲಿ ಪ್ರಗತಿಪರ ಸಂಘಟನೆಗಳ ವತಿಯಿಂದ ನಗರದ ಆರಾಧ್ಯ ದೈವ ಶ್ರೀ ಕಾಡಸಿದ್ದೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು
ಪೂಜೆ


ಬಾಗಲಕೋಟೆ, 09 ಆಗಸ್ಟ್ (ಹಿ.ಸ.)

ಆ್ಯಂಕರ್ : ಬಾಗಲಕೋಟೆ ಜಿಲ್ಲೆಯ ಬನಹಟ್ಟಿ ನಗರದಲ್ಲಿ ಪ್ರಜಾ ಸೌಧ ನಿರ್ಮಾಣ ಮಾಡಬೇಕೆಂಬ ಬಹುದಿನಗಳ ಬೇಡಿಕೆಗೆ ಮತ್ತಷ್ಟು ಬಲ ತುಂಬುವ ನಿಟ್ಟಿನಲ್ಲಿ ಪ್ರಗತಿಪರ ಸಂಘಟನೆಗಳ ವತಿಯಿಂದ ನಗರದ ಆರಾಧ್ಯ ದೈವ ಶ್ರೀ ಕಾಡಸಿದ್ದೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು.

ಬನಹಟ್ಟಿ ನಗರಕ್ಕೆ ಪ್ರಜಾ ಸೌಧ ಮಂಜೂರು ಮಾಡಿ, ಸಾರ್ವಜನಿಕರಿಗೆ ಒಂದೇ ಸೂರಿನಡಿ ವಿವಿಧ ಸರ್ಕಾರಿ ಸೇವೆಗಳು ಲಭ್ಯವಾಗುವಂತೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂಬುದು ಸ್ಥಳೀಯರ ಪ್ರಮುಖ ಬೇಡಿಕೆಯಾಗಿದೆ. ಈ ಹಿನ್ನೆಲೆಯಲ್ಲಿ ಸರ್ಕಾರದ ಗಮನ ಸೆಳೆಯಲು ಪ್ರಗತಿಪರ ಸಂಘಟನೆಗಳು ಹಂತ ಹಂತವಾಗಿ ಹೋರಾಟ ನಡೆಸುತ್ತಿವೆ.

ಇದರ ಭಾಗವಾಗಿ ನಿನ್ನೆ ಬನಹಟ್ಟಿ ಪಟ್ಟಣ ಬಂದ್ಗೆ ಕರೆ ನೀಡಲಾಗಿತ್ತು. ವ್ಯಾಪಾರಸ್ಥರು, ವಿವಿಧ ಸಂಘಟನೆಗಳು ಹಾಗೂ ಸಾರ್ವಜನಿಕರು ಬಂದ್ಗೆ ಬೆಂಬಲ ವ್ಯಕ್ತಪಡಿಸುವ ಮೂಲಕ ಪ್ರಜಾ ಸೌಧ ನಿರ್ಮಾಣದ ಬೇಡಿಕೆಗೆ ತಮ್ಮ ಒಕ್ಕೊರಲಿನ ಬೆಂಬಲ ಸೂಚಿಸಿದ್ದರು. ಪಟ್ಟಣ ಬಂದ್ ಮೂಲಕ ಸರ್ಕಾರದ ಗಮನ ಸೆಳೆಯುವಲ್ಲಿ ಪ್ರಗತಿಪರ ಸಂಘಟನೆಗಳು ಯಶಸ್ವಿಯಾಗಿದ್ದು, ಇದೀಗ ಹೋರಾಟವನ್ನು ಮತ್ತಷ್ಟು ಪರಿಣಾಮಕಾರಿಯಾಗಿ ಮುಂದುವರಿಸುವ ಉದ್ದೇಶದಿಂದ ವಿಶೇಷ ಪೂಜೆ ಸಲ್ಲಿಸಲಾಗಿದೆ.

ನಗರದ ಆರಾಧ್ಯ ದೈವ ಶ್ರೀ ಕಾಡಸಿದ್ದೇಶ್ವರ ದೇವಸ್ಥಾನದಲ್ಲಿ ಸಂಘಟನೆಗಳ ಮುಖಂಡರು ಹಾಗೂ ಕಾರ್ಯಕರ್ತರು ವಿಶೇಷ ಪೂಜೆ ಸಲ್ಲಿಸಿ, ಬನಹಟ್ಟಿ ನಗರಕ್ಕೆ ಶೀಘ್ರದಲ್ಲೇ ಪ್ರಜಾ ಸೌಧ ಮಂಜೂರಾಗಿ ನಿರ್ಮಾಣ ಕಾರ್ಯ ಆರಂಭವಾಗಲಿ ಎಂದು ಪ್ರಾರ್ಥಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಸಂಘಟನೆ ಮುಖಂಡ ನಾರಾಯಣ ಮಾಯಾಚಾರಿ, “ಬನಹಟ್ಟಿ ನಗರದಲ್ಲಿ ಪ್ರಜಾ ಸೌಧ ನಿರ್ಮಾಣ ಮಾಡಬೇಕೆಂಬುದು ಇಲ್ಲಿನ ಜನರ ಬಹುದಿನಗಳ ಬೇಡಿಕೆಯಾಗಿದೆ. ಈ ಬೇಡಿಕೆಯನ್ನು ಸರ್ಕಾರದ ಗಮನಕ್ಕೆ ತರುವ ಉದ್ದೇಶದಿಂದ ನಿನ್ನೆ ಪಟ್ಟಣ ಬಂದ್ ನಡೆಸಲಾಗಿತ್ತು. ಪಟ್ಟಣ ಬಂದ್ಗೆ ಉತ್ತಮ ಪ್ರತಿಕ್ರಿಯೆ ದೊರೆತಿದ್ದು, ಸರ್ಕಾರದ ಗಮನ ಸೆಳೆಯುವಲ್ಲಿ ನಾವು ಯಶಸ್ವಿಯಾಗಿದ್ದೇವೆ. ಅದರ ಮುಂದುವರೆದ ಭಾಗವಾಗಿ ಇಂದು ನಮ್ಮ ಆರಾಧ್ಯ ದೈವ ಶ್ರೀ ಕಾಡಸಿದ್ದೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದ್ದೇವೆ,” ಎಂದು ತಿಳಿಸಿದರು.

“ಬನಹಟ್ಟಿ ನಗರವು ವೇಗವಾಗಿ ಬೆಳೆಯುತ್ತಿರುವ ಪ್ರಮುಖ ನಗರವಾಗಿದ್ದು, ಇಲ್ಲಿ ಪ್ರಜಾ ಸೌಧ ನಿರ್ಮಾಣವಾದರೆ ಸಾರ್ವಜನಿಕರಿಗೆ ಸರ್ಕಾರಿ ಕಚೇರಿಗಳ ಸೇವೆ ಪಡೆಯಲು ಹೆಚ್ಚಿನ ಅನುಕೂಲವಾಗಲಿದೆ. ಜನರು ವಿವಿಧ ಕೆಲಸಗಳಿಗಾಗಿ ಬೇರೆ ಬೇರೆ ಸ್ಥಳಗಳಿಗೆ ಅಲೆದಾಡುವ ಪರಿಸ್ಥಿತಿ ತಪ್ಪಲಿದೆ. ಆದ್ದರಿಂದ ಸರ್ಕಾರ ಜನರ ಭಾವನೆ ಮತ್ತು ಅಗತ್ಯವನ್ನು ಪರಿಗಣಿಸಿ ಶೀಘ್ರವಾಗಿ ಪ್ರಜಾ ಸೌಧ ನಿರ್ಮಾಣಕ್ಕೆ ಅನುಮೋದನೆ ನೀಡಬೇಕು,” ಎಂದು ಅವರು ಆಗ್ರಹಿಸಿದರು.

ಪ್ರಜಾ ಸೌಧ ನಿರ್ಮಾಣವು ಕೇವಲ ಒಂದು ಕಟ್ಟಡ ನಿರ್ಮಾಣದ ವಿಚಾರವಲ್ಲ. ಇದು ಬನಹಟ್ಟಿ ನಗರದ ಆಡಳಿತಾತ್ಮಕ ಹಾಗೂ ಮೂಲಸೌಕರ್ಯ ಅಭಿವೃದ್ಧಿಗೆ ಸಂಬಂಧಿಸಿದ ಪ್ರಮುಖ ಬೇಡಿಕೆಯಾಗಿದೆ. ಸರ್ಕಾರಿ ಇಲಾಖೆಗಳ ಕಚೇರಿಗಳು ಒಂದೇ ಸಂಕೀರ್ಣದಲ್ಲಿ ಕಾರ್ಯನಿರ್ವಹಿಸುವುದರಿಂದ ಸಾರ್ವಜನಿಕರಿಗೆ ಸಮಯ ಮತ್ತು ಹಣದ ಉಳಿತಾಯವಾಗುವುದರ ಜೊತೆಗೆ, ಆಡಳಿತಾತ್ಮಕ ಕಾರ್ಯಗಳೂ ಸುಗಮವಾಗಿ ನಡೆಯಲು ಸಾಧ್ಯವಾಗಲಿದೆ ಎಂಬುದು ಸಂಘಟನೆಗಳ ಅಭಿಪ್ರಾಯವಾಗಿದೆ.

ಈ ಹಿನ್ನೆಲೆಯಲ್ಲಿ ಸರ್ಕಾರ ಶೀಘ್ರದಲ್ಲೇ ಬನಹಟ್ಟಿಯಲ್ಲಿ ಪ್ರಜಾ ಸೌಧ ನಿರ್ಮಾಣಕ್ಕೆ ಅಗತ್ಯ ಕ್ರಮ ಕೈಗೊಂಡು, ಸ್ಥಳೀಯರ ಬಹುದಿನಗಳ ಬೇಡಿಕೆಗೆ ಸ್ಪಂದಿಸಬೇಕು. ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸುವ ಕುರಿತು ಸಂಘಟನೆಗಳು ಚಿಂತನೆ ನಡೆಸಿವೆ.

ವಿಶೇಷ ಪೂಜೆಯ ಸಂದರ್ಭದಲ್ಲಿ ಪ್ರಗತಿಪರ ಸಂಘಟನೆಗಳ ಮುಖಂಡರು, ಕಾರ್ಯಕರ್ತರು ಹಾಗೂ ನಗರದ ವಿವಿಧ ಕ್ಷೇತ್ರಗಳ ಪ್ರಮುಖರು ಉಪಸ್ಥಿತರಿದ್ದರು.

---------------

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande