
ಬೆಂಗಳೂರು, 09 ಆಗಸ್ಟ್ (ಹಿ.ಸ.):
ಆ್ಯಂಕರ್:
ಲೋಕಭವನದಲ್ಲಿ ಭಾನುವಾರ ನಡೆದ ಕರ್ನಾಟಕ ಉಚ್ಚ ನ್ಯಾಯಾಲಯದ ಆರು ಮಂದಿ ಹೆಚ್ಚುವರಿ ನ್ಯಾಯಾಧೀಶರ ಪ್ರಮಾಣವಚನ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಭಾಗವಹಿಸಿದ್ದರು. ರಾಜ್ಯಪಾಲ ಥಾವರ್ ಚಂದ್ ಗೆಹಲೋಟ್ ಹಾಗೂ ಕರ್ನಾಟಕ ಉಚ್ಚ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ಉಪಸ್ಥಿತರಿದ್ದರು.
ರಾಘವೇಂದ್ರ ಸೀತಾರಾಮ್ ಶ್ರೀವತ್ಸ, ಹೇಮಾ ಕುಲಕರ್ಣಿ, ಸುಬ್ರಮಣ್ಯ ರಂಗರಾವ್, ತಡಗವಾಡಿ ಪ್ರಕಾಶ್ ವಿವೇಕಾನಂದ, ಬಕ್ಕೇಶ್ವರ ಪ್ರಮೋದ್ ಹಾಗೂ ಹೊಂಬೇಗೌಡ ಶಾಂತಿ ಭೂಷಣ್ ಅವರು ಉಚ್ಚ ನ್ಯಾಯಾಲಯದ ಹೆಚ್ಚುವರಿ ನ್ಯಾಯಾಧೀಶರಾಗಿ ಪ್ರಮಾಣವಚನ ಸ್ವೀಕರಿಸಿದರು.
---------------
ಹಿಂದೂಸ್ತಾನ್ ಸಮಾಚಾರ್ / Rakesh.M.B.