ವಾಣಿಜ್ಯ ಬಳಕೆ ಎಲ್ಪಿಜಿ ಸಿಲಿಂಡರ್ ದರ ಏರಿಕೆ; ಗೃಹಬಳಕೆ ಸಿಲಿಂಡರ್ ಬೆಲೆಯಲ್ಲಿ ಬದಲಾವಣೆ ಇಲ್ಲ
ನವದೆಹಲಿ, 01 ಸೆಪ್ಟೆಂಬರ್ (ಹಿ.ಸ.): ಆ್ಯಂಕರ್: ಸರ್ಕಾರಿ ತೈಲ ಮಾರುಕಟ್ಟೆ ಕಂಪನಿಗಳು ತಿಂಗಳ ಮೊದಲ ದಿನವೇ ವಾಣಿಜ್ಯ ಎಲ್‌ಪಿಜಿ ಗ್ರಾಹಕರಿಗೆ ದರ ಏರಿಕೆಯ ಬಿಸಿ ಮುಟ್ಟಿಸಿವೆ. 19 ಕೆ.ಜಿ. ತೂಕದ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರವನ್ನು ವಿವಿಧ ನಗರಗಳಲ್ಲಿ ₹9.50ರಿಂದ ₹12ರವರೆಗೆ ಹೆಚ್ಚಿಸಲಾಗಿದೆ. ಆ
प्रतीकात्मक


ನವದೆಹಲಿ, 01 ಸೆಪ್ಟೆಂಬರ್ (ಹಿ.ಸ.):

ಆ್ಯಂಕರ್:

ಸರ್ಕಾರಿ ತೈಲ ಮಾರುಕಟ್ಟೆ ಕಂಪನಿಗಳು ತಿಂಗಳ ಮೊದಲ ದಿನವೇ ವಾಣಿಜ್ಯ ಎಲ್‌ಪಿಜಿ ಗ್ರಾಹಕರಿಗೆ ದರ ಏರಿಕೆಯ ಬಿಸಿ ಮುಟ್ಟಿಸಿವೆ. 19 ಕೆ.ಜಿ. ತೂಕದ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರವನ್ನು ವಿವಿಧ ನಗರಗಳಲ್ಲಿ ₹9.50ರಿಂದ ₹12ರವರೆಗೆ ಹೆಚ್ಚಿಸಲಾಗಿದೆ. ಆದರೆ 14.2 ಕೆ.ಜಿ. ತೂಕದ ಗೃಹಬಳಕೆಯ ಅಡುಗೆ ಅನಿಲ ಸಿಲಿಂಡರ್ ದರದಲ್ಲಿ ಯಾವುದೇ ಬದಲಾವಣೆ ಮಾಡಲಾಗಿಲ್ಲ.

ದರ ಏರಿಕೆಯ ಬಳಿಕ ದೆಹಲಿಯಲ್ಲಿ 19 ಕೆ.ಜಿ. ಸಿಲಿಂಡರ್ ₹2,738ರಿಂದ ₹2,747.50ಕ್ಕೆ ಏರಿಕೆಯಾಗಿದೆ. ಮುಂಬೈನಲ್ಲಿ ₹2,691.50ರಿಂದ ₹2,701ಕ್ಕೆ, ಕೋಲ್ಕತ್ತಾದಲ್ಲಿ ₹2,872.50ರಿಂದ ₹2,884ಕ್ಕೆ ಹಾಗೂ ಚೆನ್ನೈನಲ್ಲಿ ₹2,906ರಿಂದ ₹2,916.50ಕ್ಕೆ ಹೆಚ್ಚಳವಾಗಿದೆ.

ಎನ್‌ಸಿಆರ್‌ ವ್ಯಾಪ್ತಿಯ ನೋಯ್ಡಾ, ಗುರುಗ್ರಾಮ ಮತ್ತು ಗಾಜಿಯಾಬಾದ್‌ನಲ್ಲಿಯೂ ವಾಣಿಜ್ಯ ಸಿಲಿಂಡರ್ ದರ ₹9.50ರಷ್ಟು ಹೆಚ್ಚಾಗಿದೆ.

ವಾಣಿಜ್ಯ ಸಿಲಿಂಡರ್ ದರ ಏರಿಕೆಯಿಂದ ಹೋಟೆಲ್‌, ರೆಸ್ಟೋರೆಂಟ್‌, ದಾಬಾ ಹಾಗೂ ಅಡುಗೆ ಸೇವೆ ನಡೆಸುವವರಿಗೆ ಹೆಚ್ಚುವರಿ ವೆಚ್ಚದ ಹೊರೆ ಬೀಳಲಿದೆ. ಗೃಹಬಳಕೆಯ 14.2 ಕೆ.ಜಿ. ಸಿಲಿಂಡರ್ ದರದಲ್ಲಿ ಯಾವುದೇ ಬದಲಾವಣೆ ಇಲ್ಲ.

--------

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande