ಕಾರ್ಯಯೋಜನೆ ಪೂರ್ಣಗೊಳ್ಳುವವರೆಗೆ ಗೌಪ್ಯವಾಗಿಡಬೇಕು: ಪ್ರಧಾನಿ ಮೋದಿ
ನವದೆಹಲಿ, 01 ಸೆಪ್ಟೆಂಬರ್ (ಹಿ.ಸ.): ಆ್ಯಂಕರ್: ಪ್ರತಿಯೊಬ್ಬರೂ ತಮ್ಮ ಕಾರ್ಯಯೋಜನೆ ಪೂರ್ಣಗೊಳ್ಳುವವರೆಗೆ ಅದನ್ನು ಗೌಪ್ಯವಾಗಿಡಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಮಂಗಳವಾರ ‘ಎಕ್ಸ್‌’ನಲ್ಲಿ ‘ಸುಭಾಷಿತಮ್’ ಸಂದೇಶ ಹಂಚಿಕೊಂಡಿರುವ ಪ್ರಧಾನಿ ಮೋದಿ, ಸಂಸ್ಕೃತದ ಶ್ಲೋಕವೊಂದನ್ನು ಉಲ್ಲೇಖಿ
प्रधानमंत्री नरेन्द्र मोदी (फाइल फोटो)


ನವದೆಹಲಿ, 01 ಸೆಪ್ಟೆಂಬರ್ (ಹಿ.ಸ.):

ಆ್ಯಂಕರ್:

ಪ್ರತಿಯೊಬ್ಬರೂ ತಮ್ಮ ಕಾರ್ಯಯೋಜನೆ ಪೂರ್ಣಗೊಳ್ಳುವವರೆಗೆ ಅದನ್ನು ಗೌಪ್ಯವಾಗಿಡಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ಮಂಗಳವಾರ ‘ಎಕ್ಸ್‌’ನಲ್ಲಿ ‘ಸುಭಾಷಿತಮ್’ ಸಂದೇಶ ಹಂಚಿಕೊಂಡಿರುವ ಪ್ರಧಾನಿ ಮೋದಿ, ಸಂಸ್ಕೃತದ ಶ್ಲೋಕವೊಂದನ್ನು ಉಲ್ಲೇಖಿಸಿ ಕಾರ್ಯಗಳು, ಯೋಜನೆಗಳು, ಆಲೋಚನೆಗಳು ಮತ್ತು ಕಾರ್ಯತಂತ್ರಗಳನ್ನು ಯಶಸ್ವಿಯಾಗಿ ಪೂರ್ಣಗೊಳಿಸುವವರೆಗೆ ಇತರರಿಗೆ ತಿಳಿಯದಂತೆ ನೋಡಿಕೊಳ್ಳುವ ವ್ಯಕ್ತಿಯೇ ನಿಜವಾದ ಬುದ್ಧಿವಂತ ಎಂದು ಹೇಳಿದ್ದಾರೆ.

‘ಯಸ್ಯ ಕೃತ್ಯಂ ನ ಜಾನಂತಿ ಮಂತ್ರಂ ವಾ ಮಂತ್ರಿತಂ ಪರೇ। ಕೃತಮೇವಾಸ್ಯ ಜಾನಂತಿ ಸ ವೈ ಪಂಡಿತ ಉಚ್ಯತೇ॥’ ಎಂಬ ಶ್ಲೋಕವನ್ನು ಉಲ್ಲೇಖಿಸಿರುವ ಅವರು, ಸಂಯಮ, ವಿವೇಕ ಮತ್ತು ಗಂಭೀರತೆಯಿಂದ ಕಾರ್ಯನಿರ್ವಹಿಸುವ ಮಹತ್ವವನ್ನು ಒತ್ತಿ ಹೇಳಿದ್ದಾರೆ.

--------

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande