ಸೆ. 25: ಕಲಾ ಸಂಗಮ ಕನ್ನಡ ಪುಸ್ತಕ ಮಾರಾಟ ಮೇಳ:ಅರ್ಜಿ ಆಹ್ವಾನ
ಬಳ್ಳಾರಿ, 10 ಸೆಪ್ಟೆಂಬರ್ (ಹಿ.ಸ.) ಆ್ಯಂಕರ್: ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಬೆಂಗಳೂರು ಇವರಿಂದ ಹಮ್ಮಿಕೊಂಡಿರುವ ‘ಕಲಾ ಸಂಗಮ’ ಕಾರ್ಯಕ್ರಮದ ಅಂಗವಾಗಿ, ಕನ್ನಡ ಪುಸ್ತಕ ಪ್ರಾಧಿಕಾರದ ವತಿಯಿಂದ ಬೆಂಗಳೂರು ನಗರದ ಜೆ.ಸಿ. ರಸ್ತೆಯ ರವೀಂದ್ರ ಕಲಾಕ್ಷೇತ್ರ ಆವರಣದಲ್ಲಿ ಸೆಪ್ಟೆಂಬರ್ 25ರಿಂದ 27ರವರೆ
ಸೆ. 25: ಕಲಾ ಸಂಗಮ ಕನ್ನಡ ಪುಸ್ತಕ ಮಾರಾಟ ಮೇಳ:ಅರ್ಜಿ ಆಹ್ವಾನ


ಬಳ್ಳಾರಿ, 10 ಸೆಪ್ಟೆಂಬರ್ (ಹಿ.ಸ.)

ಆ್ಯಂಕರ್: ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಬೆಂಗಳೂರು ಇವರಿಂದ ಹಮ್ಮಿಕೊಂಡಿರುವ ‘ಕಲಾ ಸಂಗಮ’ ಕಾರ್ಯಕ್ರಮದ ಅಂಗವಾಗಿ, ಕನ್ನಡ ಪುಸ್ತಕ ಪ್ರಾಧಿಕಾರದ ವತಿಯಿಂದ ಬೆಂಗಳೂರು ನಗರದ ಜೆ.ಸಿ. ರಸ್ತೆಯ ರವೀಂದ್ರ ಕಲಾಕ್ಷೇತ್ರ ಆವರಣದಲ್ಲಿ ಸೆಪ್ಟೆಂಬರ್ 25ರಿಂದ 27ರವರೆಗೆ ‘ಕಲಾ ಸಂಗಮ ಕನ್ನಡ ಪುಸ್ತಕ ಮಾರಾಟ ಮೇಳ-2026’ ಆಯೋಜಿಸಲಾಗಿದೆ.

ಈ ಮೇಳದಲ್ಲಿ ಪಾಲ್ಗೊಳ್ಳಲು ಕನ್ನಡ ಪ್ರಕಾಶಕರು ಹಾಗೂ ಪುಸ್ತಕ ಮಾರಾಟಗಾರರಿಗೆ ಅವಕಾಶ ಕಲ್ಪಿಸಲಾಗಿದ್ದು, ಆಸಕ್ತರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಪ್ರತಿ ಮಳಿಗೆಗೆ ರೂ.1,000 ಭದ್ರತಾ ಠೇವಣಿಯನ್ನು ‘ಆಡಳಿತಾಧಿಕಾರಿಗಳು, ಕನ್ನಡ ಪುಸ್ತಕ ಪ್ರಾಧಿಕಾರ, ಬೆಂಗಳೂರು’ ಇವರ ಹೆಸರಿನಲ್ಲಿ ಡಿಮ್ಯಾಂಡ್ ಡ್ರಾಫ್ಟ್ (ಡಿ.ಡಿ) ಮೂಲಕ ಸಲ್ಲಿಸಬೇಕು.

ನಿಗದಿತ ಅರ್ಜಿ ನಮೂನೆಯನ್ನು ಜೆ.ಸಿ. ರಸ್ತೆಯ ಕನ್ನಡ ಭವನದಲ್ಲಿರುವ ಕನ್ನಡ ಪುಸ್ತಕ ಪ್ರಾಧಿಕಾರದ ಕಚೇರಿಯಲ್ಲಿ ಅಥವಾ ಪ್ರಾಧಿಕಾರದ ಅಧಿಕೃತ ವೆಬ್ಸೈಟ್ (https://kpp.karnataka.gov.in) ಮೂಲಕ ಉಚಿತವಾಗಿ ಪಡೆಯಬಹುದು.

ಭರ್ತಿ ಮಾಡಿದ ಅರ್ಜಿಯನ್ನು ಡಿ.ಡಿ. ಸಮೇತ ಸೆಪ್ಟೆಂಬರ್ 22ರ ಸಂಜೆ 5 ಗಂಟೆಯೊಳಗೆ ಖುದ್ದಾಗಿ ಅಥವಾ ನೋಂದಾಯಿತ ಅಂಚೆ ಮೂಲಕ ಕಚೇರಿಗೆ ತಲುಪಿಸಬೇಕು. ಮಳಿಗೆಗಳ ಸಂಖ್ಯೆ ಸೀಮಿತವಾಗಿರುವುದರಿಂದ, ಮೊದಲು ಬಂದ ಅರ್ಜಿಗಳಿಗೆ ಮೊದಲ ಆದ್ಯತೆಯ ಮೇರೆಗೆ ಮಳಿಗೆಗಳನ್ನು ಹಂಚಿಕೆ ಮಾಡಲಾಗುತ್ತದೆ.

ಹೆಚ್ಚಿನ ಮಾಹಿತಿಗಾಗಿ ಕನ್ನಡ ಪುಸ್ತಕ ಪ್ರಾಧಿಕಾರದ ಕಚೇರಿಯನ್ನು ಖುದ್ದಾಗಿ ಅಥವಾ ದೂರವಾಣಿ ಸಂಖ್ಯೆ 080-22484516 ಮೂಲಕ ಸಂಪರ್ಕಿಸಬಹುದು ಎಂದು ಪ್ರಾಧಿಕಾರದ ಆಡಳಿತಾಧಿಕಾರಿ ಕೆ.ಬಿ. ಕಿರಣ್ ಸಿಂಗ್ ಅವರು ತಿಳಿಸಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande