2,186 ಕೋಟಿ ಅನುದಾನ ಬಾಕಿ: ಕೇಂದ್ರದ ವಿರುದ್ಧ ಸುಪ್ರೀಂ ಕೋರ್ಟ್ ಮೊರೆ ಹೋಗಲು ಕರ್ನಾಟಕ ನಿರ್ಧಾರ
ಕೇಂದ್ರದ ವಿರುದ್ಧ ಸುಪ್ರೀಂ ಕೋರ್ಟ್ ಮೊರೆ ಹೋಗಲು ಕರ್ನಾಟಕ ನಿರ್ಧಾರ
Karnataka-to-move-Supreme-Court-over-Rs-2186-crore-panchayat-grant-dues


ಬೆಂಗಳೂರು, 10 ಸೆಪ್ಟೆಂಬರ್(ಹಿ.ಸ.)

ಆ್ಯಂಕರ್:

15ನೇ ಹಣಕಾಸು ಆಯೋಗದ ಶಿಫಾರಸಿನಂತೆ ಕರ್ನಾಟಕದ ಗ್ರಾಮ ಪಂಚಾಯಿತಿಗಳಿಗೆ ಬರಬೇಕಿರುವ ₹2,186.20 ಕೋಟಿ ಅನುದಾನವನ್ನು ಕೇಂದ್ರ ಸರ್ಕಾರ ಬಿಡುಗಡೆ ಮಾಡದಿರುವುದನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೊರೆ ಹೋಗಲು ರಾಜ್ಯ ಸರ್ಕಾರ ನಿರ್ಧರಿಸಿದೆ.

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಸಚಿವ ಈಶ್ವರ್ ಖಂಡ್ರೆ ಅವರ ನೇತೃತ್ವದಲ್ಲಿ ವಿಕಾಸಸೌಧದಲ್ಲಿ ನಡೆದ ಸಭೆಯಲ್ಲಿ ಈ ಕುರಿತು ತೀರ್ಮಾನ ಕೈಗೊಳ್ಳಲಾಗಿದೆ ಎಂದು ಸಚಿವ ಖಂಡ್ರೆ ಮಾಹಿತಿ ನೀಡಿದ್ದಾರೆ.

2025-26ನೇ ಸಾಲಿನಲ್ಲಿ ರಾಜ್ಯದ ಗ್ರಾಮ ಪಂಚಾಯಿತಿಗಳಿಗೆ ಹಂಚಿಕೆ ಮಾಡಲಾಗಿದ್ದ ಅನುದಾನವನ್ನು ಕೇಂದ್ರ ಸರ್ಕಾರ ಬಿಡುಗಡೆ ಮಾಡದಿರುವ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಯಿತು. ರಾಜ್ಯಕ್ಕೆ ನ್ಯಾಯಯುತವಾಗಿ ಬರಬೇಕಿರುವ ಅನುದಾನವನ್ನು ತಡೆಹಿಡಿದಿರುವ ಕೇಂದ್ರದ ಕ್ರಮದ ಬಗ್ಗೆ ಸಚಿವ ಈಶ್ವರ್ ಖಂಡ್ರೆ ಅಸಮಾಧಾನ ವ್ಯಕ್ತಪಡಿಸಿದರು.ಬರ ಪರಿಸ್ಥಿತಿಯಿಂದ ಗ್ರಾಮೀಣ ಭಾಗದಲ್ಲಿ ಸಂಕಷ್ಟರಾಜ್ಯದಲ್ಲಿ ಮಳೆ ಕೊರತೆಯಿಂದಾಗಿ ಹಲವು ಭಾಗಗಳಲ್ಲಿ ಬರ ಪರಿಸ್ಥಿತಿ ನಿರ್ಮಾಣವಾಗಿದ್ದು, ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ತೀವ್ರವಾಗಿದೆ.

ರಾಜ್ಯದ 710 ಹಳ್ಳಿಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗಿದ್ದು, 149 ಗ್ರಾಮಗಳಿಗೆ ಟ್ಯಾಂಕರ್ಗಳ ಮೂಲಕ ನೀರು ಪೂರೈಸಲಾಗುತ್ತಿದೆ. ಅಲ್ಲದೆ, 561 ಖಾಸಗಿ ಕೊಳವೆ ಬಾವಿಗಳನ್ನು ಬಾಡಿಗೆಗೆ ಪಡೆಯಲಾಗಿದೆ ಎಂದು ಸಚಿವರು ಸಭೆಯಲ್ಲಿ ಮಾಹಿತಿ ನೀಡಿದರು.

ಇದರ ಜೊತೆಗೆ ಬಿತ್ತನೆ ಮಾಡಿದ ಬೀಜಗಳು ಮೊಳಕೆಯೊಡೆಯದೆ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ ಗ್ರಾಮ ಪಂಚಾಯಿತಿಗಳಿಗೆ ಬರಬೇಕಿರುವ ಅನುದಾನ ಬಿಡುಗಡೆಯಾಗದಿರುವುದು ಗ್ರಾಮೀಣ ಪ್ರದೇಶದ ಅಭಿವೃದ್ಧಿ ಹಾಗೂ ಮೂಲಸೌಕರ್ಯ ಕಾಮಗಾರಿಗಳ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ ಎಂದು ಸಚಿವರು ತಿಳಿಸಿದ್ದಾರೆ.

ಕಾನೂನು ಹೋರಾಟಕ್ಕೆ ಸಿದ್ಧತೆಕೇಂದ್ರ ಸರ್ಕಾರವು 15ನೇ ಹಣಕಾಸು ಆಯೋಗದ ಶಿಫಾರಸಿನಂತೆ ರಾಜ್ಯಕ್ಕೆ ಬರಬೇಕಿರುವ ಅನುದಾನವನ್ನು ಬಿಡುಗಡೆ ಮಾಡದಿರುವ ಕ್ರಮವನ್ನು ನ್ಯಾಯಾಲಯದಲ್ಲಿ ಪ್ರಶ್ನಿಸುವ ಕುರಿತು ಸಭೆಯಲ್ಲಿ ಕಾನೂನು ಅಂಶಗಳನ್ನು ಚರ್ಚಿಸಲಾಯಿತು. ಅಂತಿಮವಾಗಿ ₹2,186.20 ಕೋಟಿ ಅನುದಾನ ಬಿಡುಗಡೆಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಮೊರೆ ಹೋಗಲು ರಾಜ್ಯ ಸರ್ಕಾರ ನಿರ್ಧರಿಸಿದೆ.

ಗ್ರಾಮ ಪಂಚಾಯಿತಿಗಳ ಆರ್ಥಿಕ ಸಾಮರ್ಥ್ಯವನ್ನು ಬಲಪಡಿಸಲು ಹಾಗೂ ಗ್ರಾಮೀಣ ಪ್ರದೇಶಗಳ ಅಭಿವೃದ್ಧಿ ಕಾರ್ಯಗಳಿಗೆ ಅಗತ್ಯವಿರುವ ಅನುದಾನವನ್ನು ಪಡೆಯಲು ಕಾನೂನುಬದ್ಧ ಹೋರಾಟ ನಡೆಸಲು ಸರ್ಕಾರ ಮುಂದಾಗಿದೆ.

---------------

ಹಿಂದೂಸ್ತಾನ್ ಸಮಾಚಾರ್ / BHARGAVI G R


 rajesh pande