
ಬಳ್ಳಾರಿ, 10 ಸೆಪ್ಟೆಂಬರ್ (ಹಿ.ಸ.)
ಆ್ಯಂಕರ್: ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವತಿಯಿಂದ 2026–27ನೇ ಶೈಕ್ಷಣಿಕ ಸಾಲಿಗೆ ಮೆಟ್ರಿಕ್ ನಂತರದ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿ ನಿಲಯಗಳಿಗೆ ಪ್ರವೇಶ ಪಡೆಯಲು ಅರ್ಹ ವಿದ್ಯಾರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಈ ಪ್ರವೇಶಾವಕಾಶವು ವೃತ್ತಿಪರ ಪದವಿ ಹಾಗೂ ಸ್ನಾತಕೋತ್ತರ ಪದವಿ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳಿಗೆ ಮಾತ್ರ ಅನ್ವಯಿಸಲಿದೆ. ಆಸಕ್ತ ಹೊಸ ವಿದ್ಯಾರ್ಥಿಗಳು ರಾಜ್ಯ ವಿದ್ಯಾರ್ಥಿನಿಲಯ ತಂತ್ರಾಂಶ ಸ್ಟೇಟ್ ಹಾಸ್ಟೆಲ್ ಪೋರ್ಟಲ್- ಎಸ್ಹೆಚ್ಪಿ ಮೂಲಕ ನಿಗದಿತ ದಿನಾಂಕದೊಳಗೆ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 30-09-2026.
ಅರ್ಜಿ ಸಲ್ಲಿಕೆ ಹಾಗೂ ಹೆಚ್ಚಿನ ಮಾಹಿತಿಗಾಗಿ ವಿದ್ಯಾರ್ಥಿಗಳು ಆಯಾ ತಾಲೂಕು ಮತ್ತು ಜಿಲ್ಲಾ ಮಾಹಿತಿ ಕೇಂದ್ರಗಳನ್ನು ಸಂಪರ್ಕಿಸಬಹುದು.
ಬಳ್ಳಾರಿ: ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಮೌಲಾನಾ ಆಜಾದ್ ಭವನ, ಜೋಳದರಾಶಿ ದೊಡ್ಡನಗೌಡ ರಂಗಮAದಿರದ ಹತ್ತಿರ, ಬಳ್ಳಾರಿ. (ಮೊ: 8310321101).
ಸಂಡೂರು: ತಾಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರ, ತೋಟಗಾರಿಕೆ ಇಲಾಖೆ, ಸಂಡೂರು. (ಮೊ: 9036925966, 8660575061).
ಸಿರುಗುಪ್ಪ: ತಾಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರ, ನಗರಸಭೆ ಆವರಣ, ಬಳ್ಳಾರಿ ರಸ್ತೆ, ಸಿರುಗುಪ್ಪ. (ಮೊ: 9148889975).
ಇಲಾಖೆಯ 24/7 ಸಹಾಯವಾಣಿ ಸಂಖ್ಯೆ 8277799990 ಗೂ ಕರೆ ಮಾಡಿ ಮಾಹಿತಿ ಪಡೆದುಕೊಳ್ಳಬಹುದು ಎಂದು ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಧಿಕಾರಿ ತಿಳಿಸಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್