ಮುಂದಿನ ಏಳು ದಿನ ರಾಜ್ಯದಲ್ಲಿ ಅಲ್ಲಲ್ಲಿ ಮಳೆ; ಒಳನಾಡಿನಲ್ಲಿ ಬಿಸಿಲಿನ ತೀವ್ರತೆ
ಬೆಂಗಳೂರು, 10 ಸೆಪ್ಟೆಂಬರ್ (ಹಿ.ಸ.): ಆ್ಯಂಕರ್:ರಾಜ್ಯಾದಾದ್ಯಂತ ಮುಂದಿನ ಏಳು ದಿನಗಳಲ್ಲಿ ಬಿಸಿಲಿನ ವಾತಾವರಣ ಮುಂದುವರಿಯುವ ಸಾಧ್ಯತೆಯಿದ್ದು, ಅಲ್ಲಲ್ಲಿ ಗುಡುಗು, ಮಿಂಚು ಸಹಿತ ಬಲವಾದ ಗಾಳಿ ಬೀಸುವ ಸಾಧ್ಯತೆ ಇದೆ. ಕೆಲವು ಭಾಗಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ ಎಂದು ಭಾರತೀಯ ಹವಾಮ
ಸಾಂಕೇತಿಕ


ಬೆಂಗಳೂರು, 10 ಸೆಪ್ಟೆಂಬರ್ (ಹಿ.ಸ.):

ಆ್ಯಂಕರ್:ರಾಜ್ಯಾದಾದ್ಯಂತ ಮುಂದಿನ ಏಳು ದಿನಗಳಲ್ಲಿ ಬಿಸಿಲಿನ ವಾತಾವರಣ ಮುಂದುವರಿಯುವ ಸಾಧ್ಯತೆಯಿದ್ದು, ಅಲ್ಲಲ್ಲಿ ಗುಡುಗು, ಮಿಂಚು ಸಹಿತ ಬಲವಾದ ಗಾಳಿ ಬೀಸುವ ಸಾಧ್ಯತೆ ಇದೆ. ಕೆಲವು ಭಾಗಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.

ಒಳನಾಡಿನ ಜಿಲ್ಲೆಗಳ ಕೆಲವು ಭಾಗಗಳಲ್ಲಿ ಸಾಮಾನ್ಯಕ್ಕಿಂತ ಹೆಚ್ಚಿನ ತಾಪಮಾನ ದಾಖಲಾಗುವ ಸಾಧ್ಯತೆಯಿದ್ದು, ಹಗಲು ವೇಳೆ ಬಿಸಿಲಿನ ತೀವ್ರತೆ ಕಂಡುಬರುವ ಸಾಧ್ಯತೆ ಇದೆ.

ಭಾರತೀಯ ಹವಾಮಾನ ಇಲಾಖೆಯ ಮುನ್ಸೂಚನೆಯಂತೆ, ಇಂದು ಮತ್ತು ನಾಳೆ ಕರಾವಳಿ ಕರ್ನಾಟಕ ಹಾಗೂ ಉತ್ತರ ಒಳನಾಡು ಕರ್ನಾಟಕದಲ್ಲಿ ಯಾವುದೇ ನಿರ್ದಿಷ್ಟ ಹವಾಮಾನ ಎಚ್ಚರಿಕೆ ಇಲ್ಲ. ದಕ್ಷಿಣ ಒಳನಾಡು ಕರ್ನಾಟಕದಲ್ಲಿ ಸೆ. 12ರಿಂದ 14ರವರೆಗೆ ಗುಡುಗು, ಮಿಂಚು ಹಾಗೂ ಬಲವಾದ ಗಾಳಿ ಬೀಸುವ ಸಾಧ್ಯತೆ ಇದೆ. ಸೆ. 15ರಂದು ದಕ್ಷಿಣ ಒಳನಾಡಿಗೂ ಯಾವುದೇ ನಿರ್ದಿಷ್ಟ ಎಚ್ಚರಿಕೆ ಇಲ್ಲ ಎಂದು ಇಲಾಖೆ ತಿಳಿಸಿದೆ.

ಮುಂದಿನ ಒಂದು ವಾರ ದಕ್ಷಿಣ ಪರ್ಯಾಯ ದ್ವೀಪದಾದ್ಯಂತ ಮಳೆಯ ಚಟುವಟಿಕೆ ಸಾಮಾನ್ಯವಾಗಿ ಕಡಿಮೆಯಾಗಿರುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ತನ್ನ ಮುನ್ಸೂಚನೆಯಲ್ಲಿ ತಿಳಿಸಿದೆ.

---------------

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande