
ಹಲ್ದ್ವಾನಿ, 10 ಸೆಪ್ಟೆಂಬರ್ (ಹಿ.ಸ.):
ಆ್ಯಂಕರ್:
ಭಾರತೀಯ ಜನತಾ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನವೀನ್ ಅವರು ಗುರುವಾರ ಉತ್ತರಾಖಂಡದ ಹಲ್ದ್ವಾನಿಯ ಬೇರ್ಪಡಾವ್‌ನಲ್ಲಿರುವ ಅಷ್ಟಭುಜ ಶ್ರೀ ಮಹಾಲಕ್ಷ್ಮಿ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ದೇಶ ಹಾಗೂ ಉತ್ತರಾಖಂಡದ ಜನರ ಸುಖ, ಸಮೃದ್ಧಿ, ಶಾಂತಿ ಮತ್ತು ಮಂಗಳಮಯ ಜೀವನಕ್ಕಾಗಿ ಅವರು ಮಹಾಲಕ್ಷ್ಮಿ ದೇವಿಯಲ್ಲಿ ಪ್ರಾರ್ಥಿಸಿದರು.
ನಿಗದಿತ ಕಾರ್ಯಕ್ರಮದಂತೆ ಬೆಳಗ್ಗೆ ಸುಮಾರು 9 ಗಂಟೆಗೆ ದೇವಸ್ಥಾನಕ್ಕೆ ಆಗಮಿಸಿದ ನಿತಿನ್ ನವೀನ್ ಅವರು ವಿಧಿವತ್ತಾಗಿ ಪೂಜೆ ಹಾಗೂ ಅರ್ಚನೆ ನೆರವೇರಿಸಿದರು. ಈ ಸಂದರ್ಭದಲ್ಲಿ ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ, ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ರಾಜ್ಯಸಭಾ ಸದಸ್ಯ ಮಹೇಂದ್ರ ಭಟ್, ಪಕ್ಷದ ರಾಷ್ಟ್ರೀಯ ಮಾಧ್ಯಮ ಸಂಯೋಜಕ ಹಾಗೂ ಸಂಸದ ಅನಿಲ್ ಬಲೂನಿ ಸೇರಿದಂತೆ ಪಕ್ಷದ ಹಲವು ಹಿರಿಯ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರು ದೇವಸ್ಥಾನಕ್ಕೆ ಆಗಮಿಸಿದ ವೇಳೆ ಪಕ್ಷದ ಕಾರ್ಯಕರ್ತರು ಹಾಗೂ ಸ್ಥಳೀಯರು ಅವರನ್ನು ಸ್ವಾಗತಿಸಿದರು. ಪೂಜೆಯ ಬಳಿಕ ನಿತಿನ್ ನವೀನ್ ಅವರು ದೇವಸ್ಥಾನ ಆವರಣದಲ್ಲಿದ್ದ ಜನರನ್ನು ಭೇಟಿಯಾಗಿ ಮಾತುಕತೆ ನಡೆಸಿದರು.
ಉತ್ತರಾಖಂಡ ಪ್ರವಾಸದಲ್ಲಿರುವ ನಿತಿನ್ ನವೀನ್ ಅವರು ಹಲ್ದ್ವಾನಿಯಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಿದ್ದಾರೆ.
--------
ಹಿಂದೂಸ್ತಾನ್ ಸಮಾಚಾರ್ / Rakesh.M.B.