ಆರ್ಥಿಕವಾಗಿ ಸಶಕ್ತ ಕರ್ನಾಟಕ ನಿರ್ಮಿಸುವುದೇ ನಮ್ಮ ಸಂಕಲ್ಪ:ಡಿ.ಕೆ. ಶಿವಕುಮಾರ್
ಬೆಂಗಳೂರು, 10 ಸೆಪ್ಟೆಂಬರ್ (ಹಿ.ಸ.): ಆ್ಯಂಕರ್:ಪ್ರಜಾಸೇವಕನಾಗಿ ಜನರ ಸೇವೆ ಮಾಡಲು ಅವಕಾಶ ದೊರೆತು ಇಂದಿಗೆ ನೂರು ದಿನಗಳಾಗಿದ್ದು, ನಾಡಿನ ಪ್ರತಿಯೊಬ್ಬರ ಬದುಕಿನಲ್ಲಿ ಹೊಸ ಬದಲಾವಣೆ ತರಲು ಹೆಚ್ಚಿನ ಜವಾಬ್ದಾರಿ ವಹಿಸಿಕೊಂಡಿರುವುದಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಈ ಕುರಿತು ಎಕ್ಸ
Cm x post


ಬೆಂಗಳೂರು, 10 ಸೆಪ್ಟೆಂಬರ್ (ಹಿ.ಸ.):

ಆ್ಯಂಕರ್:ಪ್ರಜಾಸೇವಕನಾಗಿ ಜನರ ಸೇವೆ ಮಾಡಲು ಅವಕಾಶ ದೊರೆತು ಇಂದಿಗೆ ನೂರು ದಿನಗಳಾಗಿದ್ದು, ನಾಡಿನ ಪ್ರತಿಯೊಬ್ಬರ ಬದುಕಿನಲ್ಲಿ ಹೊಸ ಬದಲಾವಣೆ ತರಲು ಹೆಚ್ಚಿನ ಜವಾಬ್ದಾರಿ ವಹಿಸಿಕೊಂಡಿರುವುದಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.

ಈ ಕುರಿತು ಎಕ್ಸ್‌ನಲ್ಲಿ ಹೇಳಿಕೆ ನೀಡಿರುವ ಅವರು, ದೃಢ ಕರ್ನಾಟಕದ ಕನಸು ನನಸು ಮಾಡುವ ನಿಟ್ಟಿನಲ್ಲಿ ನೂರು ದಿನಗಳಲ್ಲಿ ಹಲವು ಮಹತ್ವದ ಯೋಜನೆಗಳನ್ನು ಘೋಷಿಸಲಾಗಿದೆ ಎಂದು ತಿಳಿಸಿದ್ದಾರೆ.

ಜನರ ಸಂಕಷ್ಟಗಳನ್ನು ಆಲಿಸಲು ಹಾಗೂ ಅವರ ಬೇಡಿಕೆಗಳಿಗೆ ಸ್ಪಂದಿಸಲು ತಮ್ಮ ‘ಹಸ್ತ’ ಸದಾ ಮುಂದಿರಲಿದೆ. ಸಾಮಾಜಿಕವಾಗಿ ಹಾಗೂ ಆರ್ಥಿಕವಾಗಿ ಸಶಕ್ತ ಕರ್ನಾಟಕವನ್ನು ನಿರ್ಮಿಸುವುದೇ ತಮ್ಮ ಸಂಕಲ್ಪವಾಗಿದೆ ಎಂದು ಹೇಳಿದ್ದಾರೆ.

ಕರುನಾಡಿನ ಜನತೆಯ ಋಣ ತೀರಿಸುವ ಜೊತೆಗೆ ಅವರ ಜೀವನಮಟ್ಟವನ್ನು ಸುಧಾರಿಸಲು, ಮನೆಯ ಮಗನಾಗಿ ಸದಾ ಜನರ ಸೇವೆಗೆ ಸಿದ್ಧನಿದ್ದೇನೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande