
ಬೆಂಗಳೂರು, 11 ಸೆಪ್ಟೆಂಬರ್ (ಹಿ.ಸ.)
ಆ್ಯಂಕರ್:
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಸಂಚಾರ ದಟ್ಟಣೆಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಬೆಂಗಳೂರು ಸಂಚಾರ ಪೊಲೀಸರು ಮಹತ್ವದ ಪ್ರಸ್ತಾವನೆ ಸಿದ್ಧಪಡಿಸಿದ್ದಾರೆ.
ನಗರದ ಪ್ರಮುಖ ಸಂಚಾರ ದಟ್ಟಣೆ ಪ್ರದೇಶಗಳಲ್ಲಿ 25 ಫ್ಲೈಓವರ್ ಮತ್ತು ಅಂಡರ್ಪಾಸ್ಗಳನ್ನು ನಿರ್ಮಿಸುವಂತೆ ಪ್ರಸ್ತಾವನೆ ಸಲ್ಲಿಸಲಾಗಿದೆ.
ನಗರದಲ್ಲಿ ವಾಹನಗಳ ಸಂಖ್ಯೆ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಹಲವು ಪ್ರಮುಖ ಜಂಕ್ಷನ್ಗಳಲ್ಲಿ ವಾಹನ ಸಂಚಾರ ನಿಧಾನಗೊಳ್ಳುತ್ತಿದೆ. ಸಂಚಾರ ಪೊಲೀಸರ ಅಧ್ಯಯನದ ಪ್ರಕಾರ,
ನಗರದ 246 ಜಂಕ್ಷನ್ಗಳಲ್ಲಿ ಸಂಚಾರ ದಟ್ಟಣೆ ಹೆಚ್ಚಾಗಿದ್ದು, 110 ಜಂಕ್ಷನ್ಗಳಲ್ಲಿ ಸ್ವಯಂಚಾಲಿತ ಸಂಚಾರ ನಿಯಂತ್ರಣ ವ್ಯವಸ್ಥೆ ಅಳವಡಿಸಲಾಗಿದೆ.
ದಟ್ಟಣೆ ಹೆಚ್ಚಿರುವ ಪ್ರಮುಖ ಜಂಕ್ಷನ್ಗಳನ್ನು ಗುರುತಿಸಿ, ಅಲ್ಲಿ ವಾಹನಗಳ ಸುಗಮ ಸಂಚಾರಕ್ಕೆ ಅನುಕೂಲವಾಗುವಂತೆ ಫ್ಲೈಓವರ್ ಹಾಗೂ ಅಂಡರ್ಪಾಸ್ ನಿರ್ಮಾಣಕ್ಕೆ ಆದ್ಯತೆ ನೀಡಲಾಗಿದೆ.
ಈ ಕುರಿತು ಸಂಚಾರ ಪೊಲೀಸರು ಗ್ರೇಟರ್ ಬೆಂಗಳೂರು ಪ್ರಾಧಿಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದು, ಯೋಜನೆ ಅನುಷ್ಠಾನಗೊಂಡರೆ ಹಲವು ಪ್ರಮುಖ ರಸ್ತೆಗಳಲ್ಲಿ ಸಿಗ್ನಲ್ ಮುಕ್ತ ಸಂಚಾರಕ್ಕೆ ಅವಕಾಶ ದೊರೆಯಲಿದೆ.
ಇದರೊಂದಿಗೆ ಪಾದಚಾರಿಗಳ ಸುರಕ್ಷತೆ ಹಾಗೂ ವಾಹನಗಳ ಸಂಚಾರವನ್ನು ಸುಗಮಗೊಳಿಸುವ ಉದ್ದೇಶವೂ ಹೊಂದಲಾಗಿದೆ.
ಬೆಂಗಳೂರಿನ ಸಂಚಾರ ಸಮಸ್ಯೆಗೆ ಕೇವಲ ರಸ್ತೆ ಮೂಲಸೌಕರ್ಯವಷ್ಟೇ ಅಲ್ಲದೆ ಸಾರ್ವಜನಿಕ ಸಾರಿಗೆ ವ್ಯವಸ್ಥೆ, ಬಸ್ ನಿಲ್ದಾಣಗಳ ನಿರ್ವಹಣೆ ಮತ್ತು ಸಂಚಾರ ನಿಯಂತ್ರಣದಂತಹ ಕ್ರಮಗಳೂ ಅಗತ್ಯವೆಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.
ಸಂಚಾರ ದಟ್ಟಣೆ ನಿವಾರಣೆಗೆ ಹೊಸ ಮೂಲಸೌಕರ್ಯ ಯೋಜನೆಗಳ ಮೂಲಕ ಬೆಂಗಳೂರಿನ ಪ್ರಮುಖ ಜಂಕ್ಷನ್ಗಳಿಗೆ ಪರಿಹಾರ ಕಂಡುಕೊಳ್ಳಲು ಸಂಚಾರ ಪೊಲೀಸರು ಮುಂದಾಗಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / BHARGAVI G R