ಅರಣ್ಯ ಸಂಪತ್ತು ರಕ್ಷಣೆಗೆ ಪ್ರಾಣತ್ಯಾಗ ಮಾಡಿದ ಸಿಬ್ಬಂದಿಗೆ ಸಿಎಂ ಶಿವಕುಮಾರ್ ಗೌರವ
ಬೆಂಗಳೂರು, 11 ಸೆಪ್ಟೆಂಬರ್ (ಹಿ.ಸ.): ಆ್ಯಂಕರ್:ನಾಡಿನ ಅರಣ್ಯ ಮತ್ತು ವನ್ಯಜೀವಿ ಸಂಪತ್ತಿನ ರಕ್ಷಣೆಗಾಗಿ ಕರ್ತವ್ಯ ನಿರ್ವಹಿಸುವ ವೇಳೆ ಪ್ರಾಣತ್ಯಾಗ ಮಾಡಿದ ಅರಣ್ಯ ಇಲಾಖೆ ಸಿಬ್ಬಂದಿಯನ್ನು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಸ್ಮರಿಸಿ ಗೌರವ ಸಲ್ಲಿಸಿದರು. ಮಲ್ಲೇಶ್ವರಂನ ಅರಣ್ಯ ಭವನದಲ್ಲಿ ಶುಕ್ರವಾರ
ಪ್ರಾಣತ್ಯಾಗ ಮಾಡಿದ ಅರಣ್ಯ ಇಲಾಖೆ ಸಿಬ್ಬಂದಿಯನ್ನು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಮರಿಸಿ ಗೌರವ ಸಲ್ಲಿಸಿದರು.


ಬೆಂಗಳೂರು, 11 ಸೆಪ್ಟೆಂಬರ್ (ಹಿ.ಸ.):

ಆ್ಯಂಕರ್:ನಾಡಿನ ಅರಣ್ಯ ಮತ್ತು ವನ್ಯಜೀವಿ ಸಂಪತ್ತಿನ ರಕ್ಷಣೆಗಾಗಿ ಕರ್ತವ್ಯ ನಿರ್ವಹಿಸುವ ವೇಳೆ ಪ್ರಾಣತ್ಯಾಗ ಮಾಡಿದ ಅರಣ್ಯ ಇಲಾಖೆ ಸಿಬ್ಬಂದಿಯನ್ನು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಸ್ಮರಿಸಿ ಗೌರವ ಸಲ್ಲಿಸಿದರು.

ಮಲ್ಲೇಶ್ವರಂನ ಅರಣ್ಯ ಭವನದಲ್ಲಿ ಶುಕ್ರವಾರ ನಡೆದ ರಾಷ್ಟ್ರೀಯ ಅರಣ್ಯ ಹುತಾತ್ಮರ ದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಮುಖ್ಯಮಂತ್ರಿ, ಅರಣ್ಯ ಮತ್ತು ವನ್ಯಜೀವಿ ಸಂಪತ್ತಿನ ರಕ್ಷಣೆಗಾಗಿ ಹುತಾತ್ಮರಾದ ಅರಣ್ಯ ಇಲಾಖೆ ಸಿಬ್ಬಂದಿಯ ಸ್ಮಾರಕಕ್ಕೆ ಪುಷ್ಪಗುಚ್ಛವಿರಿಸಿ ಗೌರವ ನಮನ ಸಲ್ಲಿಸಿದರು.

ಅರಣ್ಯ ಹಾಗೂ ವನ್ಯಜೀವಿ ಸಂಪತ್ತಿನ ಸಂರಕ್ಷಣೆಯಲ್ಲಿ ಅರಣ್ಯ ಇಲಾಖೆ ಸಿಬ್ಬಂದಿಯ ತ್ಯಾಗ ಮತ್ತು ಸೇವೆಯನ್ನು ಸ್ಮರಿಸಲಾಯಿತು.

ಕಾರ್ಯಕ್ರಮದಲ್ಲಿ ಸಚಿವ ರಾಮಲಿಂಗಾರೆಡ್ಡಿ, ಪರಿಸರ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಅಂಜುಂ ಪರ್ವೇಜ್‌, ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಮೀನಾಕ್ಷಿ ನೇಗಿ ಸೇರಿದಂತೆ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

---------------

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande