ವಂದೇ ಮಾತರಂ ವಿಚಾರದಲ್ಲಿ ಕಾಂಗ್ರೆಸ್ ನಿಲುವು ಸ್ಪಷ್ಟ: ಡಿ.ಕೆ.ಶಿವಕುಮಾರ್
ಬೆಂಗಳೂರು, 11 ಸೆಪ್ಟೆಂಬರ್ (ಹಿ.ಸ.): ಆ್ಯಂಕರ್: ವಂದೇ ಮಾತರಂ’ ವಿಚಾರದಲ್ಲಿ ಕಾಂಗ್ರೆಸ್‌ನ ನಿಲುವು ಬಹಳ ಹಿಂದಿನಿಂದಲೂ ಸ್ಪಷ್ಟವಾಗಿದ್ದು, ರಾಷ್ಟ್ರಗೀತೆ, ರಾಷ್ಟ್ರಧ್ವಜ, ಸ್ವಾತಂತ್ರ್ಯ, ಪ್ರಜಾಪ್ರಭುತ್ವ ಹಾಗೂ ಸಂವಿಧಾನಕ್ಕೆ ಪಕ್ಷವು ಗೌರವ ನೀಡುತ್ತದೆ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ
ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್


ಬೆಂಗಳೂರು, 11 ಸೆಪ್ಟೆಂಬರ್ (ಹಿ.ಸ.):

ಆ್ಯಂಕರ್:

ವಂದೇ ಮಾತರಂ’ ವಿಚಾರದಲ್ಲಿ ಕಾಂಗ್ರೆಸ್‌ನ ನಿಲುವು ಬಹಳ ಹಿಂದಿನಿಂದಲೂ ಸ್ಪಷ್ಟವಾಗಿದ್ದು, ರಾಷ್ಟ್ರಗೀತೆ, ರಾಷ್ಟ್ರಧ್ವಜ, ಸ್ವಾತಂತ್ರ್ಯ, ಪ್ರಜಾಪ್ರಭುತ್ವ ಹಾಗೂ ಸಂವಿಧಾನಕ್ಕೆ ಪಕ್ಷವು ಗೌರವ ನೀಡುತ್ತದೆ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

ಅರಣ್ಯ ಭವನದಲ್ಲಿ ಶುಕ್ರವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ‘ವಂದೇ ಮಾತರಂ’ ಕುರಿತು ಕಾಂಗ್ರೆಸ್ ವಿರುದ್ಧ ನಡೆಯುತ್ತಿರುವ ರಾಜಕೀಯ ಚರ್ಚೆಗೆ ಪ್ರತಿಕ್ರಿಯಿಸಿದರು.

“ವಂದೇ ಮಾತರಂ ವಿಚಾರದಲ್ಲಿ ಕಾಂಗ್ರೆಸ್‌ನ ನಿಲುವು ಬಹಳ ಹಿಂದಿನಿಂದಲೂ ಸ್ಪಷ್ಟವಾಗಿದೆ. ವಂದೇ ಮಾತರಂ, ರಾಷ್ಟ್ರಧ್ವಜ, ರಾಷ್ಟ್ರಗೀತೆ, ಸ್ವಾತಂತ್ರ್ಯ, ಪ್ರಜಾಪ್ರಭುತ್ವ ಮತ್ತು ಸಂವಿಧಾನಕ್ಕೆ ಕಾಂಗ್ರೆಸ್ ಗೌರವ ನೀಡುತ್ತದೆ” ಎಂದು ಅವರು ಹೇಳಿದರು.

ಎರಡು ಚರಣಗಳ ಗಾಯನಕ್ಕೆ ಕಾಂಗ್ರೆಸ್ ಒತ್ತು

‘ವಂದೇ ಮಾತರಂ’ ಗಾಯನದ ಸ್ವರೂಪದ ಕುರಿತು ಕಾಂಗ್ರೆಸ್‌ನ ನಿಲುವು ಇತ್ತೀಚಿನದಲ್ಲ. 1937ರ ಅಕ್ಟೋಬರ್‌ನಲ್ಲಿ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಕೈಗೊಂಡ ನಿರ್ಣಯವನ್ನು ಉಲ್ಲೇಖಿಸಿರುವ ಪಕ್ಷ, ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಗೀತೆಯ ಮೊದಲ ಎರಡು ಚರಣಗಳನ್ನು ಹಾಡುವ ಪರಂಪರೆಗೆ ಒತ್ತು ನೀಡುತ್ತಿದೆ. ಮಹಾತ್ಮ ಗಾಂಧೀಜಿ, ಜವಾಹರಲಾಲ್ ನೆಹರೂ ಸೇರಿದಂತೆ ಸ್ವಾತಂತ್ರ್ಯ ಹೋರಾಟದ ಪ್ರಮುಖ ನಾಯಕರೊಂದಿಗೆ ನಡೆದ ಚರ್ಚೆಯ ಹಿನ್ನೆಲೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಗಿತ್ತು ಎಂದು ಕಾಂಗ್ರೆಸ್ ಹೇಳಿಕೊಂಡಿದೆ.

ಇದೇ ನಿಲುವನ್ನು ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಇತ್ತೀಚೆಗೆ ಮತ್ತೊಮ್ಮೆ ಸ್ಪಷ್ಟಪಡಿಸಿದ್ದು, ಪಕ್ಷದ ಕಾರ್ಯಕ್ರಮಗಳಲ್ಲಿ ‘ವಂದೇ ಮಾತರಂ’ನ ಮೊದಲ ಎರಡು ಚರಣಗಳನ್ನು ಮಾತ್ರ ಹಾಡುವುದಾಗಿ ತಿಳಿಸಿತ್ತು. ಈ ವಿಚಾರ ಇದೀಗ ಬಿಜೆಪಿ ಹಾಗೂ ಕಾಂಗ್ರೆಸ್ ನಡುವೆ ರಾಜಕೀಯ ವಾಕ್ಸಮರಕ್ಕೆ ಕಾರಣವಾಗಿದೆ.

ರಾಜ್ಯದಲ್ಲೂ ಹೊಸ ಆದೇಶ

ಈ ನಡುವೆ ಕರ್ನಾಟಕ ಸರ್ಕಾರ ಸೆ.10ರಂದು ರಾಜ್ಯದ ಸರ್ಕಾರಿ ಹಾಗೂ ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ‘ವಂದೇ ಮಾತರಂ’ ಗಾಯನಕ್ಕೆ ಸಂಬಂಧಿಸಿದಂತೆ ಏಕರೂಪತೆ ಮತ್ತು ಶಿಷ್ಟಾಚಾರ ಕಾಪಾಡಲು ಆದೇಶ ಹೊರಡಿಸಿದೆ. ಸಾಮಾನ್ಯ ಸರ್ಕಾರಿ ಕಾರ್ಯಕ್ರಮಗಳಲ್ಲಿ ಗೀತೆಯ ಮೊದಲ ಎರಡು ಚರಣಗಳನ್ನು ಹಾಡುವಂತೆ ಆದೇಶದಲ್ಲಿ ಸೂಚಿಸಲಾಗಿದೆ.

ಈ ಬೆಳವಣಿಗೆಗಳ ನಡುವೆಯೇ ಕರ್ನಾಟಕದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ‘ವಂದೇ ಮಾತರಂ’ ವಿಚಾರದಲ್ಲಿ ಕಾಂಗ್ರೆಸ್‌ನ ನಿಲುವು ಸ್ಪಷ್ಟವಾಗಿದ್ದು, ರಾಷ್ಟ್ರದ ಪ್ರಮುಖ ಪ್ರತೀಕಗಳಾದ ರಾಷ್ಟ್ರಧ್ವಜ, ರಾಷ್ಟ್ರಗೀತೆ ಹಾಗೂ ಸಂವಿಧಾನಕ್ಕೆ ಪಕ್ಷವು ಗೌರವ ನೀಡುತ್ತದೆ ಎಂದು ಪುನರುಚ್ಚರಿಸಿದ್ದಾರೆ.

‘ವಂದೇ ಮಾತರಂ’ ವಿಚಾರವನ್ನು ರಾಜಕೀಯ ಸಂಘರ್ಷದ ವಿಷಯವನ್ನಾಗಿ ಮಾಡುವ ಬದಲು, ಅದರ ಐತಿಹಾಸಿಕ ಹಿನ್ನೆಲೆ, ಸ್ವಾತಂತ್ರ್ಯ ಹೋರಾಟದಲ್ಲಿನ ಪಾತ್ರ ಹಾಗೂ ರಾಷ್ಟ್ರೀಯ ಮಹತ್ವವನ್ನು ಗಮನದಲ್ಲಿಟ್ಟುಕೊಂಡು ನೋಡಬೇಕೆಂಬ ಎಂದಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande