ರೈತರ ಬದುಕಿಗೆ ಬೆನ್ನೆಲುಬಾಗಿ ನಿಂತಿರುವ ಸರ್ಕಾರ: ಪರಮೇಶ್ವರ
ಬೆಂಗಳೂರು, 11 ಸೆಪ್ಟೆಂಬರ್ (ಹಿ.ಸ.): ಆ್ಯಂಕರ್:ಬರಗಾಲದಿಂದ ಸಂಕಷ್ಟಕ್ಕೀಡಾದ ರೈತರ ನೆರವಿಗೆ ರಾಜ್ಯ ಸರ್ಕಾರ ಸದಾ ಬದ್ಧವಾಗಿದೆ ಎಂದು ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ ಹೇಳಿದ್ದಾರೆ. ಸಾಮಾಜಿಕ ಜಾಲತಾಣ ‘ಎಕ್ಸ್’ನಲ್ಲಿ ಶುಕ್ರವಾರ ಪೋಸ್ಟ್ ಮಾಡಿರುವ ಅವರು, ರೈತರ ನೋವಿಗೆ ಸ್ಪಂದಿಸಿ ಸಂಕಷ್ಟದ ಸಂದರ್
ಡಿಸಿಎಂ ಪರಮೇಶ್ವರ


ಬೆಂಗಳೂರು, 11 ಸೆಪ್ಟೆಂಬರ್ (ಹಿ.ಸ.):

ಆ್ಯಂಕರ್:ಬರಗಾಲದಿಂದ ಸಂಕಷ್ಟಕ್ಕೀಡಾದ ರೈತರ ನೆರವಿಗೆ ರಾಜ್ಯ ಸರ್ಕಾರ ಸದಾ ಬದ್ಧವಾಗಿದೆ ಎಂದು ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ ಹೇಳಿದ್ದಾರೆ.

ಸಾಮಾಜಿಕ ಜಾಲತಾಣ ‘ಎಕ್ಸ್’ನಲ್ಲಿ ಶುಕ್ರವಾರ ಪೋಸ್ಟ್ ಮಾಡಿರುವ ಅವರು, ರೈತರ ನೋವಿಗೆ ಸ್ಪಂದಿಸಿ ಸಂಕಷ್ಟದ ಸಂದರ್ಭದಲ್ಲಿ ಅಗತ್ಯ ನೆರವು ತಲುಪಿಸುವುದು ಸರ್ಕಾರದ ಆದ್ಯತೆಯಾಗಿದೆ ಎಂದು ತಿಳಿಸಿದ್ದಾರೆ.

ರಾಜ್ಯದ 101 ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಗಿದ್ದು, 31 ಜಿಲ್ಲೆಗಳಲ್ಲಿ ಪರಿಹಾರ ಕಾರ್ಯಗಳಿಗಾಗಿ ₹117 ಕೋಟಿ ಬಿಡುಗಡೆ ಮಾಡಲಾಗಿದೆ. ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ ₹1 ಕೋಟಿಯಂತೆ ಒಟ್ಟು ₹306 ಕೋಟಿ ನೆರವು ಹಾಗೂ ಪ್ರತಿ ಜಿಲ್ಲೆಗೆ ಕುಡಿಯುವ ನೀರಿಗಾಗಿ ₹5 ಕೋಟಿ ಅನುದಾನ ನೀಡಲಾಗಿದೆ ಎಂದು ಅವರು ವಿವರಿಸಿದ್ದಾರೆ.

ರೈತರ ಬದುಕಿನಲ್ಲಿ ಭರವಸೆ ಮೂಡಿಸುವುದು ಸರ್ಕಾರದ ಸಂಕಲ್ಪವಾಗಿದ್ದು, ಅದನ್ನು ವ್ರತದಂತೆ ಪಾಲಿಸಿಕೊಂಡು ಹೋಗಲಾಗುತ್ತಿದೆ ಎಂದು ಪರಮೇಶ್ವರ ತಿಳಿಸಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande