
ಗದಗ, 11 ಸೆಪ್ಟೆಂಬರ್ (ಹಿ.ಸ.)
ಆ್ಯಂಕರ್:- ಬೆಟಿಗೇರಿ ಹೋಬಳಿ ವ್ಯಾಪ್ತಿಯ ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸುವ ಉದ್ದೇಶದಿಂದ ಹೋಬಳಿ ಮಟ್ಟದ ಪ್ರಜಾ ಸೇವಾ ಆಂದೋಲನ ಸಭೆಯನ್ನು ಸೆಪ್ಟೆಂಬರ್ 12ರಂದು ಬೆಳಿಗ್ಗೆ 10.30 ಗಂಟೆಗೆ ಬೆಟಿಗೇರಿಯ ತಾರಾಲಯದಲ್ಲಿ ಆಯೋಜಿಸಲಾಗಿದೆ.
ಸಭೆಯ ಅಧ್ಯಕ್ಷತೆಯನ್ನು ಗದಗ ಮತಕ್ಷೇತ್ರದ ಶಾಸಕರಾದ ಡಾ. ಎಚ್.ಕೆ. ಪಾಟೀಲ ಅವರು ವಹಿಸಲಿದ್ದಾರೆ. ಸಭೆಯಲ್ಲಿ ಹೋಬಳಿ ವ್ಯಾಪ್ತಿಯ ಸಾರ್ವಜನಿಕರು ತಮ್ಮ ವಿವಿಧ ಸಮಸ್ಯೆಗಳು, ಅಹವಾಲುಗಳು ಹಾಗೂ ಅಗತ್ಯ ಸೇವೆಗಳಿಗೆ ಸಂಬಂಧಿಸಿದ ಮನವಿಗಳನ್ನು ಸಲ್ಲಿಸಿ, ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳೊಂದಿಗೆ ಪರಿಹಾರ ಕಂಡುಕೊಳ್ಳಲು ಅವಕಾಶ ಕಲ್ಪಿಸಲಾಗಿದೆ.
ಸಾರ್ವಜನಿಕರ ಅಹವಾಲುಗಳಿಗೆ ಸ್ಥಳದಲ್ಲಿಯೇ ಸ್ಪಂದಿಸುವ ಮೂಲಕ ಸರ್ಕಾರದ ವಿವಿಧ ಜನಪರ ಯೋಜನೆಗಳು ಹಾಗೂ ಸೇವೆಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ ಮಾಡುವ ಉದ್ದೇಶದಿಂದ ಸಭೆ ಆಯೋಜಿಸಲಾಗಿದೆ.
ಬೆಟಿಗೇರಿ ಹೋಬಳಿ ವ್ಯಾಪ್ತಿಯ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಪ್ರಜಾ ಸೇವಾ ಆಂದೋಲನ ಸಭೆಯ ಸದುಪಯೋಗ ಪಡೆದುಕೊಳ್ಳುವಂತೆ ತಹಶೀಲ್ದಾರ ಶ್ರೀನಿವಾಸಮೂರ್ತಿ ಕುಲಕರ್ಣಿ ಅವರು ಕೋರಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / lalita MP