ಸೆ. 15 ರಂದು ಅಂತಾರಾಷ್ಟಿಯ ಪ್ರಜಾಪ್ರಭುತ್ವ ದಿನಾಚರಣೆ ಹಾಗೂ ಯುವ ಸಂಸತ್ತು
ಬಳ್ಳಾರಿ, 11 ಸೆಪ್ಟೆಂಬರ್ (ಹಿ.ಸ.) ಆ್ಯಂಕರ್ : ಕರ್ನಾಟಕ ಸರ್ಕಾರದ ವತಿಯಿಂದ ಯುವ ಸಮುದಾಯಕ್ಕೆ ದೇಶದ ಸಂಸದೀಯ ವ್ಯವಸ್ಥೆಯನ್ನು ಪರಿಚಯಿಸುವ ಉದ್ದೇಶದಿಂದ ‘ಅಂತರರಾಷ್ಟಿಯ ಪ್ರಜಾಪ್ರಭುತ್ವ ದಿನಾಚರಣೆ’ ಅಂಗವಾಗಿ ಜಿಲ್ಲೆಯಾದ್ಯಂತ ವಿಶೇಷ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಸೆಪ್ಟೆಂಬರ್ 15 ರಂದು
ಸೆ. 15 ರಂದು ಅಂತಾರಾಷ್ಟಿಯ ಪ್ರಜಾಪ್ರಭುತ್ವ ದಿನಾಚರಣೆ ಹಾಗೂ ಯುವ ಸಂಸತ್ತು


ಬಳ್ಳಾರಿ, 11 ಸೆಪ್ಟೆಂಬರ್ (ಹಿ.ಸ.)

ಆ್ಯಂಕರ್ : ಕರ್ನಾಟಕ ಸರ್ಕಾರದ ವತಿಯಿಂದ ಯುವ ಸಮುದಾಯಕ್ಕೆ ದೇಶದ ಸಂಸದೀಯ ವ್ಯವಸ್ಥೆಯನ್ನು ಪರಿಚಯಿಸುವ ಉದ್ದೇಶದಿಂದ ‘ಅಂತರರಾಷ್ಟಿಯ ಪ್ರಜಾಪ್ರಭುತ್ವ ದಿನಾಚರಣೆ’ ಅಂಗವಾಗಿ ಜಿಲ್ಲೆಯಾದ್ಯಂತ ವಿಶೇಷ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.

ಸೆಪ್ಟೆಂಬರ್ 15 ರಂದು ಬೆಳಿಗ್ಗೆ 10.30 ಗಂಟೆಗೆ ನಗರದ ಡಾ. ಜೋಳದರಾಶಿ ದೊಡ್ಡನಗೌಡ ರಂಗಮ0ದಿರದಲ್ಲಿ ‘ಅಂತರರಾಷ್ಟಿಯ ಪ್ರಜಾಪ್ರಭುತ್ವ ದಿನಾಚರಣೆ’ ಕಾರ್ಯಕ್ರಮ ನಡೆಯಲಿದೆ. ಇದೇ ಸಂದರ್ಭದಲ್ಲಿ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟಗಳಲ್ಲಿ ‘ಯುವ ಸಂಸತ್ತು’ ಸಭೆ ನಡೆಸುವ ಪ್ರಕ್ರಿಯೆಗೆ ಅಧಿಕೃತ ಚಾಲನೆ ನೀಡಲಾಗುತ್ತದೆ.

ಈ ಕಾರ್ಯಕ್ರಮದಲ್ಲಿ ಜಿಲ್ಲಾ ನ್ಯಾಯಾಧೀಶರು, ವಕೀಲರು, ಜಿಲ್ಲಾ ಮಟ್ಟದ ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗದವರು ಪಾಲ್ಗೊಳ್ಳಲಿದ್ದಾರೆ. ಅಲ್ಲದೆ ಶಾಲಾ-ಕಾಲೇಜು, ಪದವಿ ಹಾಗೂ ಸ್ನಾತಕೋತ್ತರ ವಿದ್ಯಾರ್ಥಿಗಳು, ಕಾನೂನು ಕಾಲೇಜುಗಳ ಉಪನ್ಯಾಸಕರು, ಶಿಕ್ಷಕರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕಾಗಿ ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರು ಕೋರಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande