ಹಾಜರಾತಿ ಕೇಂದ್ರಗಳಿಗೆ ಜಂಟಿ ಆಯುಕ್ತರ ಭೇಟಿ
ಬೆಂಗಳೂರು, 11 ಸೆಪ್ಟೆಂಬರ್ (ಹಿ.ಸ.): ಆ್ಯಂಕರ್: ಕೆ.ಆರ್.ಪುರ ವಲಯದ ಜಂಟಿ ಆಯುಕ್ತರಾದ ಡಾ. ಸುಧಾ ಅವರು ಬೆಂಗಳೂರು ಪೂರ್ವ ನಗರ ಪಾಲಿಕೆ ವ್ಯಾಪ್ತಿಯ ಎಚ್‌ಎಎಲ್ ಹಾಗೂ ಸುತ್ತಮುತ್ತಲಿನ ಹಾಜರಾತಿ ಕೇಂದ್ರಗಳಿಗೆ ಭೇಟಿ ನೀಡಿ ಸಿದ್ಧತೆಗಳನ್ನು ಪರಿಶೀಲಿಸಿದರು. ಈ ಸಂದರ್ಭದಲ್ಲಿ ಹಾಜರಾತಿ ಕೇಂದ್ರಗಳಲ್ಲಿನ
ಹಾಜರಾತಿ ಕೇಂದ್ರಗಳಿಗೆ ಜಂಟಿ ಆಯುಕ್ತರ ಭೇಟಿ


ಬೆಂಗಳೂರು, 11 ಸೆಪ್ಟೆಂಬರ್ (ಹಿ.ಸ.):

ಆ್ಯಂಕರ್:

ಕೆ.ಆರ್.ಪುರ ವಲಯದ ಜಂಟಿ ಆಯುಕ್ತರಾದ ಡಾ. ಸುಧಾ ಅವರು ಬೆಂಗಳೂರು ಪೂರ್ವ ನಗರ ಪಾಲಿಕೆ ವ್ಯಾಪ್ತಿಯ ಎಚ್‌ಎಎಲ್ ಹಾಗೂ ಸುತ್ತಮುತ್ತಲಿನ ಹಾಜರಾತಿ ಕೇಂದ್ರಗಳಿಗೆ ಭೇಟಿ ನೀಡಿ ಸಿದ್ಧತೆಗಳನ್ನು ಪರಿಶೀಲಿಸಿದರು.

ಈ ಸಂದರ್ಭದಲ್ಲಿ ಹಾಜರಾತಿ ಕೇಂದ್ರಗಳಲ್ಲಿನ ಮೂಲಸೌಕರ್ಯ, ಅಗತ್ಯ ವ್ಯವಸ್ಥೆಗಳು ಹಾಗೂ ಕರ್ತವ್ಯ ನಿರ್ವಹಿಸುತ್ತಿರುವ ಅಧಿಕಾರಿಗಳು ಮತ್ತು ಸಿಬ್ಬಂದಿಯ ಸಿದ್ಧತೆಗಳನ್ನು ಪರಿಶೀಲಿಸಿದ ಅವರು, ವ್ಯವಸ್ಥೆಗಳನ್ನು ಸಮರ್ಪಕವಾಗಿ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಅಗತ್ಯ ಸೂಚನೆಗಳನ್ನು ನೀಡಿದರು.

ಹಾಜರಾತಿ ಕೇಂದ್ರಗಳಲ್ಲಿ ಯಾವುದೇ ಲೋಪವಾಗದಂತೆ ಅಗತ್ಯ ಮುನ್ನೆಚ್ಚರಿಕೆ ಹಾಗೂ ವ್ಯವಸ್ಥೆಗಳನ್ನು ಖಚಿತಪಡಿಸಿಕೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು.

---------------

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande