ಅರಣ್ಯ ಹುತಾತ್ಮರ ತ್ಯಾಗ ಸದಾ ಸ್ಫೂರ್ತಿಯಾಗಿರಲಿ: ಪರಮೇಶ್ವರ
ಬೆಂಗಳೂರು, 11 ಸೆಪ್ಟೆಂಬರ್ (ಹಿ.ಸ.): ಆ್ಯಂಕರ್: ಅರಣ್ಯ ಸಂಪತ್ತು, ವನ್ಯಜೀವಿಗಳು ಹಾಗೂ ಪರಿಸರ ಸಂರಕ್ಷಣೆ ಸೇರಿದಂತೆ ಕರ್ತವ್ಯ ನಿರ್ವಹಿಸುವ ಸಂದರ್ಭದಲ್ಲಿ ಬಲಿದಾನಗೈದ ಅರಣ್ಯ ಸಿಬ್ಬಂದಿಯನ್ನು ರಾಷ್ಟ್ರೀಯ ಅರಣ್ಯ ಹುತಾತ್ಮರ ದಿನದಂದು ಗೌರವಪೂರ್ವಕವಾಗಿ ಸ್ಮರಿಸುವುದಾಗಿ ಉಪಮುಖ್ಯಮಂತ್ರಿ ಡಾ. ಜಿ. ಪರಮ
ಡಿಸಿಎಂ ಎಕ್ಸ್ ಪೋಸ್ಟ್


ಬೆಂಗಳೂರು, 11 ಸೆಪ್ಟೆಂಬರ್ (ಹಿ.ಸ.):

ಆ್ಯಂಕರ್:

ಅರಣ್ಯ ಸಂಪತ್ತು, ವನ್ಯಜೀವಿಗಳು ಹಾಗೂ ಪರಿಸರ ಸಂರಕ್ಷಣೆ ಸೇರಿದಂತೆ ಕರ್ತವ್ಯ ನಿರ್ವಹಿಸುವ ಸಂದರ್ಭದಲ್ಲಿ ಬಲಿದಾನಗೈದ ಅರಣ್ಯ ಸಿಬ್ಬಂದಿಯನ್ನು ರಾಷ್ಟ್ರೀಯ ಅರಣ್ಯ ಹುತಾತ್ಮರ ದಿನದಂದು ಗೌರವಪೂರ್ವಕವಾಗಿ ಸ್ಮರಿಸುವುದಾಗಿ ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ ತಿಳಿಸಿದ್ದಾರೆ.

ಈ ಕುರಿತು ಎಕ್ಸ್‌ನಲ್ಲಿ ಹೇಳಿಕೆ ನೀಡಿರುವ ಅವರು, ಅರಣ್ಯ ಸಿಬ್ಬಂದಿಯ ತ್ಯಾಗ, ಕರ್ತವ್ಯನಿಷ್ಠೆ ಮತ್ತು ಸೇವಾ ಮನೋಭಾವ ನಮ್ಮೆಲ್ಲರಿಗೂ ಸದಾ ಸ್ಫೂರ್ತಿಯಾಗಿರಲಿ ಎಂದು ಹೇಳಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande